Featured

ಬಿಜೆಪಿ ಮತ್ತು ಜೆಡಿಎಸ್  ಮೈತ್ರಿಕೂಟದ ಮೂಲಕ ಯಾರನ್ನು ಮುಕ್ತ ಮಾಡುತ್ತಾರೋ ಗೊತ್ತಿಲ್ಲ : ವಿನಯ್‌ಕುಮಾರ್ ಸೊರಕೆ – Vishwanews24

ಬಿಜೆಪಿ ಮತ್ತು ಜೆಡಿಎಸ್  ಮೈತ್ರಿಕೂಟದ ಮೂಲಕ ಯಾರನ್ನು ಮುಕ್ತ ಮಾಡುತ್ತಾರೋ ಗೊತ್ತಿಲ್ಲ : ವಿನಯ್‌ಕುಮಾರ್ ಸೊರಕೆ

ರಾಯಚೂರು: ಬಿಜೆಪಿಮತ್ತು ಜೆಡಿಎಸ್  ಮೈತ್ರಿಕೂಟದ ಮೂಲಕ ಯಾರನ್ನು ಮುಕ್ತ ಮಾಡುತ್ತಾರೋ ಗೊತ್ತಿಲ್ಲ. ಜೆಡಿಎಸ್ ಅಭ್ಯರ್ಥಿಗಳು ಮೂರು ಕಡೆಯೂ ಸೋಲುತ್ತಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ ವಿನಯ್‌ಕುಮಾರ್ ಸೊರಕೆ ಹೇಳಿದ್ದಾರೆ.

ರಾಯಚೂರಿನಲ್ಲಿ  ಮಾತನಾಡಿದ ಅವರು, ಹಾಸನ, ಮಂಡ್ಯ, ಕೋಲಾರ ಅಭ್ಯರ್ಥಿ ಗೆಲ್ಲೋದು ಕಷ್ಟ. ದೇವೇಗೌಡರ ಅಳಿಯ ಬಿಜೆಪಿಯಲ್ಲಿ ನಿಂತಿದ್ದಾರೆ. ನಾಲ್ಕು ಸ್ಥಾನ ಕಳೆದುಕೊಳ್ಳುವ ಮೂಲಕ ಜೆಡಿಎಸ್ ಮುಕ್ತವಾಗುತ್ತೆ. ಆಗ ಕುಮಾರಸ್ವಾಮಿ ಜೆಡಿಎಸ್‌ಗೆ ಕೊನೆಮೊಳೆ ಹೊಡೆಯುತ್ತಾರೆ. ಜೆಡಿಎಸ್, ಬಿಜೆಪಿ ಜೊತೆ ವಿಲೀನ ಆಗೋ ಲಕ್ಷಣ ಕಾಣುತ್ತಿವೆ ಎಂದರು.

ಪ್ರಜ್ವಲ್ ರೇವಣ್ಣನನ್ನು  ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ ಎಂಬ ಪ್ರಹ್ಲಾದ್ ಜೋಶಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಕುಮಾರಸ್ವಾಮಿ ಅವರೇ ವಿಡಿಯೋ ಕೊಟ್ಟಿದ್ದು ಎಂಬ ಮಾಹಿತಿ ನಮಗೆ ಬಂದಿದೆ. ಚಾಲಕನಿಗೆ ಯಾರಾದ್ರೂ ವಿಡಿಯೋ ಕೊಟ್ಟಿರಬೇಕಲ್ಲಾ, ಕುಮಾರಸ್ವಾಮಿ ಕೊಟ್ಟಿದ್ದಾರೆ ಅನ್ನೋ ಮಾಹಿತಿ ಬಂದಿದೆ ಎಂದು ಹೇಳಿದರು.

ಹತ್ತು ವರ್ಷದಲ್ಲಿ ಮೋದಿ ಅವರ ಸಾಧನೆ ಏನು? ಸಂತೆಯಲ್ಲಿ ಜಾನುವಾರುಗಳನ್ನು ಖರೀದಿ ಮಾಡೋ ರೀತಿ ಶಾಸಕರನ್ನ ಖರೀದಿ ಮಾಡುತ್ತಿದ್ದಾರೆ. ಗೋವಾ, ಮಹಾರಾಷ್ಟ್ರದಲ್ಲಿ ಆಯಿತು. ಐಟಿ, ಇಡಿ, ಸಿಬಿಐ ಮೂಲಕ ವಿರೋಧ ಪಕ್ಷಗಳನ್ನು ಧಮನ ಮಾಡುತ್ತಿದ್ದಾರೆ. ಹತ್ತು ವರ್ಷದಲ್ಲಿ ಸುಮಾರು 400 ಶಾಸಕರನ್ನ ಖರೀದಿ ಮಾಡಿದ್ದಾರೆ. ಚುನಾವಣೆ ವೇಳೆ ಎರಡೆರಡು ಮುಖ್ಯಮಂತ್ರಿಗಳನ್ನು ಜೈಲಿಗೆ ಹಾಕಿದರು ಎಂದು ಕಿಡಿಕಾರಿದರು.

ಬಿಜೆಪಿ ಆಡಳಿತದಲ್ಲಿ ಬಡತನ, ಬೆಲೆ ಏರಿಕೆ, ನಿರುದ್ಯೋಗ ಕಾಣುತ್ತಿವೆ. ನೋಟು ಬ್ಯಾನ್, ಜಿಎಸ್‌ಟಿ ಮೂಲಕ ಅನಾನುಕೂಲ ಆಯಿತೇ ಹೊರತು ಪ್ರಯೋಜನವಾಗಿಲ್ಲ. ನೀರಾವರಿ ಯೋಜನೆಗಳಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತೋರುತ್ತಿದೆ. ರಾಜ್ಯಕ್ಕೆ ಬರ ಪರಿಹಾರವನ್ನು ಸರಿಯಾಗಿ ಕೊಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago