Featured

ಬಿಜೆಪಿ ಮಾಸ್ ಪಾರ್ಟಿ ,ಅಧಿಕಾರ ಇಲ್ಲದಿದ್ದಾಗಲೇ ಚುನಾವಣೆಗೆ ಹೆದರಿಲ್ಲ,ಈಗ ಹೆದರುತ್ತೀವಾ? : ಸಿ.ಟಿ. ರವಿ -Vishwanews24

ದಾವಣಗೆರೆ: ಬಿಜೆಪಿ ಮಾಸ್ ಪಾರ್ಟಿ, ನಾವು ಉಪ ಚುನಾವಣೆಯಲ್ಲಿ ಗೆದ್ದೇ ಗೆಲ್ತೀವಿ. ಅಧಿಕಾರ ಇಲ್ಲದಿದ್ದಾಗಲೇ ಚುನಾವಣೆಗೆ ಹೆದರಿಲ್ಲ, ಈಗ ಅಧಿಕಾರದಲ್ಲಿ ಇದ್ದೇವೆ. ಹೆದರುವ ಪ್ರಶ್ನೆಯೇ ಇಲ್ಲ ಎಂದು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ. ರವಿ ಹೇಳಿದರು.

ಸುದ್ದಿಗಾರರ ಜತೆಗೆ ಮಾತನಾಡಿದ ಅವರು ನೆರೆ ಸಂತ್ರಸ್ತರ ನೆರವಿಗೆ ಬಾರದೇ ಇರುವುದರಿಂದ ಸಂತ್ರಸ್ತರ ಶಾಪ ಬಿಜೆಪಿಗೆ ತಟ್ಟಲಿದೆ ಎಂಬ ಕಾಂಗ್ರೆಸ್‌ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಕಾಂಗ್ರೆಸ್‌ಗೆ ಇರುವ ಶಾಪಗಳಿಂದ ವಿಮೋಚನೆಯಾಗಲು ಏಳು ಜನ್ಮ ಸಾಲದು’ ಎಂದು ವ್ಯಂಗ್ಯವಾಡಿದರು.

ಉಪಚುನಾವಣೆಯಲ್ಲಿ ಎಲ್ಲ ಕ್ಷೇತ್ರಗಳನ್ನು ಕಾಂಗ್ರೆಸ್‌ ಗೆಲ್ಲಬೇಕು, ಪಕ್ಷಕ್ಕೆ ದ್ರೋಹ ಬಗೆದವರಿಗೆ ಪಾಠ ಕಲಿಸಬೇಕು ಎಂಬ ಸಿದ್ದರಾಮಯ್ಯರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿ.ಟಿ. ರವಿ, ‘ಸ್ವಕ್ಷೇತ್ರದಲ್ಲಿ ಗೆಲ್ಲಲಾರದೇ ಎಲ್ಲೋ ಹೋಗಿ ಬಹಳ ಕಷ್ಟಪಟ್ಟು ದಡ ಸೇರಿದವರು ಅವರು. ಸಮಾಜವನ್ನು ಒಡೆಯಲು ಕೈ ಹಾಕಿದರು. ಅದಾಗಲಿಲ್ಲ. ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಒಂದು ಸೀಟೂ ಗೆಲ್ಲಬಾರದು ಎಂದು ಕಾಂಗ್ರೆಸ್‌– ಜೆಡಿಎಸ್‌ ಒಂದಾಯಿತು. ಕೊನೆಗೆ ಪರದಾಡಿ ಎರಡು ಪಕ್ಷಗಳು ಒಂದೊಂದು ಸೀಟು ಪಡೆದವು. ಈಗ ಉಪಚುನಾವಣೆ ಗೆಲ್ತಾರಾ’ ಎಂದು ಪ್ರಶ್ನಿಸಿದರು.

ಗಿಣಿ ಹದ್ದಾಗಿ ಕುಕ್ಕಿತು ಎಂದು ಕಾಂಗ್ರೆಸ್‌, ಜೆಡಿಎಸ್‌ನವರು ಮಾರ್ಮಿಕವಾಗಿ ಹೇಳಿಕೊಳ್ಳುತ್ತಿದ್ದಾರೆ. ಅವರು ಪರಸ್ಪರ ಕುಕ್ಕಿಕೊಳ್ಳುತ್ತಿರಲಿ. ನಾವು ರಾಜ್ಯದ ಅಭಿವೃದ್ಧಿಯನ್ನು ಮಾಡೋಣ ಎಂದರು.

ಬಿಜೆಪಿ ಮಾಸ್ ಪಾರ್ಟಿ, ನಾವು ಉಪ ಚುನಾವಣೆಯಲ್ಲಿ ಗೆದ್ದೇ ಗೆಲ್ತೀವಿ. ಅಧಿಕಾರ ಇಲ್ಲದಿದ್ದಾಗಲೇ ಚುನಾವಣೆಗೆ ಹೆದರಿಲ್ಲ. ಈಗ ಅಧಿಕಾರದಲ್ಲಿ ಇದ್ದೇವೆ. ಹೆದರುವ ಪ್ರಶ್ನೆಯೇ ಇಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

 

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

16 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

16 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

16 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

17 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

20 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

20 hours ago