ಇಸ್ಲಾಮಾಬಾದ್: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮುಸ್ಲಿಂ ವಿರೋಧಿ, ಪಾಕ್ ವಿರೋಧಿ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ವಾಗ್ದಾಳಿ ನಡೆಸಿದ್ದಾರೆ.
ಭಾರತದಲ್ಲಿ ಆಡಳಿತದಲ್ಲಿರುವ ಬಿಜೆಪಿ ಪಕ್ಷ ಮುಸ್ಲಿಂ ವಿರೋಧಿ ಹಾಗೂ ಪಾಕಿಸ್ತಾನ ವಿರೋಧಿ ಧೋರಣೆಯನ್ನು ಹೊಂದಿದೆ. ಹೀಗಾಗಿ ನಾವು ಅಧಿಕಾರಕ್ಕೆ ಬಂದ ನಾಲ್ಕು ತಿಂಗಳಿನಿಂದ ಭಾರತದೊಂದಿಗೆ ಸಂಬಂಧ ಸುಧಾರಿಸಿಕೊಳ್ಳುವ ಪ್ರಯತ್ನ ಮಾಡುತ್ದಿದ್ದರೂ ಇದಕ್ಕೆ ಭಾರತದಿಂದ ಯಾವುದೇ ರೀತಿಯ ಸಕಾರಾತ್ಮಕ ಪ್ರತಿಕ್ರಿಯೆ ಬಂದಿಲ್ಲ ಎಂದರು.
ಮುಂದಿನ ವರ್ಷ ಭಾರತದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು ಹೀಗಾಗಿ ಅವರು ನಮ್ಮೊಂದಿಗೆ ಸ್ನೇಹ ಸಂಬಂಧದ ಪ್ರಸ್ತಾವನೆಯನ್ನು ತಿರಸ್ಕರಿಸುತ್ತಿದ್ದಾರೆ. ಇಮ್ರಾನ್ ಖಾನ್ ಪರೋಕ್ಷವಾಗಿ ಪ್ರಧಾನಿ ಮೋದಿ ವಿರುದ್ಧ ಅತೃಪ್ತಿ ಹೊರಹಾಕಿದ್ದಾರೆ.
ಶಾಂತಿಯುತ ಮಾತುಕತೆ ನೀಡಿದ ಆಹ್ವಾನವನ್ನು ಭಾರತ ತಿರಸ್ಕರಿಸುವ ಮೂಲಕ ದರ್ಪದ ಹಾಗೂ ನಕಾರಾತ್ಮಕ ನಿರ್ಧಾರ ತೆಗೆದುಕೊಂಡಿದೆ. ದೊಡ್ಡ ಮಟ್ಟದ ದೂರದೃಷ್ಟಿ, ಕಲ್ಪನೆಗಳಿಲ್ಲದ ಸಣ್ಣ ವ್ಯಕ್ತಿಗಳು ದೊಡ್ಡ ಕಚೇರಿಯಲ್ಲಿ ಇದ್ದಾರೆ ಎಂದು ಇಮ್ರಾನ್ ಖಾನ್ ಟ್ವೀಟ್ ಮಾಡಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…