ಕೋಲ್ಕತ್ತಾ: ಶನಿವಾರ ಪೂರ್ಣಗೊಂಡ ಮೊದಲ ಹಂತದ ಚುನಾವಣೆಯಲ್ಲಿ 30 ಸೀಟುಗಳ ಪೈಕಿ 26 ಸೀಟುಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ್ದ ಹೇಳಿಕೆಗೆ ಪಶ್ಚಿಮಬಂಗಾಳ ಸಿಎಂ ಮಮತಾ ಬ್ಯಾನರ್ಜಿ ತಿರುಗೇಟು ನೀಡಿದ್ದು, “ಬಿಜೆಪಿ ಮೊದಲ ಹಂತದ ಚುನಾವಣೆಯಲ್ಲಿ ಶೂನ್ಯ ಸಾಧನೆ ಮಾಡಲಿದೆ” ಎಂದಿದ್ದಾರೆ.
ಚಂಡೀಪುರ ಪ್ರದೇಶದಲ್ಲಿ ಚುನಾವಣಾ ಪ್ರಚಾರದ ಸಂದರ್ಭ ಮಾತನಾಡಿದ ಅವರು, “30ಕ್ಕೆ 30 ಸೀಟುಗಳನ್ನು ಗೆಲ್ಲುತ್ತೇವೆ ಎಂದು ಬಿಜೆಪಿ ಏಕೆ ಹೇಳುತ್ತಿಲ್ಲ. ಹಾಗಾದರೆ ಉಳಿದ ಸೀಟುಗಳನ್ನು ಕಾಂಗ್ರೆಸ್ ಹಾಗೂ ಸಿಪಿಐಎಂಗೆ ಬಿಟ್ಟಿದ್ದಾರಾ?” ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ : ಅನಾರೋಗ್ಯದ ಹಿನ್ನೆಲೆ ಶರದ್ ಪವಾರ್ ಆಸ್ಪತ್ರೆಗೆ ದಾಖಲು -Vishwanews24
ಈ ವೇಳೆ ಕೇಂದ್ರ ಪಡೆಗಳನ್ನು ಒತ್ತಾಯಿಸಿದ ಅವರು, “ಚುನಾವಣೆಗಳಲ್ಲಿ ಮುಕ್ತ ಹಾಗೂ ಪ್ರಜಾಪ್ರಭುತ್ವದ ಮತದಾನವನ್ನು ನಡೆಸಬೇಕು” ಎಂದಿದ್ದಾರೆ.
ಕಾಂಗ್ರೆಸ್‌ನ ಹಿರಿಯ ನಾಯಕ ಡೆರೆಕ್ ಓಬ್ರಿಯನ್ ಅವರು ಮಮತಾಗೆ ಬೆಂಬಲ ನೀಡಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು “ಸುಳ್ಳುಗಾರ” ಎಂದಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಯು ಎಂಟು ಹಂತಗಳಲ್ಲಿ ನಡೆಯಲಿದೆ. ಈಗಾಗಲೇ ಮೊದಲ ಹಂತದ ಚುನಾವಣೆ ಮುಗಿದಿದ್ದು, ಇನ್ನು ಏಳು ಹಂತದ ಚುನಾವಣೆ ಬಾಕಿ ಇದೆ.
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…
ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…
ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…
ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’ ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…