ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಇಲ್ಲ: ಸಿಎಂ ಬೊಮ್ಮಾಯಿ ಸ್ಪಷ್ಟನೆ – Vishwanews24
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮೂರು ವರ್ಷ ಪೂರೈಸಿದ ನಳಿನ್ ..
ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಇಲ್ಲ..
ಕಟೀಲ್ ಮೂರು ವರ್ಷಗಳಿಂದ ಅತ್ಯಂತ ಸಮರ್ಥವಾಗಿ ಪಕ್ಷವನ್ನು ಮುನ್ನಡೆಸಿದ್ದಾರೆ..
ಅವರ ನೇತೃತ್ವದಲ್ಲಿ ಪಕ್ಷಕ್ಕೆ ಇನ್ನಷ್ಟು ಬಲ ಬರಲಿದೆ..
ಸಿಎಂ ಬೊಮ್ಮಾಯಿ ಸ್ಪಷ್ಟನೆ..
ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆ ಗಮನಕ್ಕೆ ಬಂದಿಲ್ಲ. ಈ ಕುರಿತು ಚರ್ಚೆಯೇ ನಡೆದಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
‘ನಳಿನ್ ಕುಮಾರ್ ಕಟೀಲ್ ಮೂರು ವರ್ಷಗಳಿಂದ ಅತ್ಯಂತ ಸಮರ್ಥವಾಗಿ ಪಕ್ಷವನ್ನು ಮುನ್ನಡೆಸಿದ್ದಾರೆ. ಸುಮಾರು 8 – 10 ಬಾರಿ ರಾಜ್ಯ ಸುತ್ತಿ ಪಕ್ಷ ಸಂಘಟಿಸಿದ್ದಾರೆ’ ಎಂದು ಹೇಳಿದರು.
‘ಗ್ರಾಮ ಪಂಚಾಯಿತಿ ಚುನಾವಣೆಗೆ ಮೊದಲು ಮತ್ತು ಅದಾದ ಬಳಿಕ ವಿಧಾನ ಪರಿಷತ್ ಚುನಾವಣೆ, ನಾನಾ ಉಪ ಚುನಾವಣೆಗಳಿಗೆ ಪಕ್ಷವನ್ನು ಸಂಘಟನೆ ಮಾಡಿದ್ದಾರೆ. ಅವರ ನೇತೃತ್ವದಲ್ಲೇ ಮುಂದುವರಿಯಲಾಗುವುದು. ಕಟೀಲ್ ನೇತೃತ್ವದಲ್ಲಿ ಪಕ್ಷಕ್ಕೆ ಇನ್ನಷ್ಟು ಬಲ ಬರಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮೂರು ವರ್ಷ ಪೂರೈಸಿದ ನಳಿನ್ ಕುಮಾರ್ ಕಟೀಲ್ ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಪಕ್ಷದ ಹಲವರು ಶುಭಾಶಯ ಕೋರಿದ್ದಾರೆ.
