Featured

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ – ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದುದು : ನಳಿನ್‍ಕುಮಾರ್ ಕಟೀಲ್ – Vishwanews24

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ – ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದುದು : ನಳಿನ್‍ಕುಮಾರ್ ಕಟೀಲ್

ಬೆಂಗಳೂರು: ಬಿಜೆಪಿಯ ಕರ್ನಾಟಕ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ. ಈ ಕುರಿತಂತೆ ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದುದು ಎಂದು ಪಕ್ಷದ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ವಿ. ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷೆ ವ್ಯಕ್ತಪಡಿಸಿರುವ ಬಗ್ಗೆ ಬಳ್ಳಾರಿಯಲ್ಲಿ ಕೇಳಲಾದ ಪ್ರಶ್ನೆಗೆ ಉತ್ತರಿಸುವ ವೇಳೆ ಸೋಲಿನ ನೈತಿಕ ಹೊಣೆ ಹೊರುತ್ತೇನೆ. ಸೋಲಿನ ಕಾರಣಗಳ ಕುರಿತಂತೆ ಪಕ್ಷದ ಹಿರಿಯರಿಗೆ ಮಾಹಿತಿ ನೀಡಿದ್ದೇನೆ. 4 ವರ್ಷಗಳಿಂದ ನಾನು ಅಧ್ಯಕ್ಷ ಸ್ಥಾನದಲ್ಲಿದ್ದೇನೆ ಎಂದು ತಿಳಿಸಿದ್ದಾಗಿ ಅವರು ಸ್ಪಷ್ಟಪಡಿಸಿದ್ದಾರೆ.

ಪಕ್ಷದ ರಾಜ್ಯಾಧ್ಯಕ್ಷರ ನೇಮಕ ಕುರಿತಂತೆ ಪಕ್ಷವು ಸೂಕ್ತ ಸಂದರ್ಭದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾಗಿ ನಾನು ಹೇಳಿಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿ ಸುದ್ದಿ ಬಿತ್ತರಿಸಲಾಗುತ್ತಿದೆ ಎಂದು ಹೇಳಿಕೆಯಲ್ಲಿ ವಿವರಿಸಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆಯ ಸೋಲಿನ ಹೊಣೆ ಹೊತ್ತು ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೆ. ಈ ಬಗ್ಗೆ ಪಕ್ಷದ ನಾಯಕರಿಗೆ ಮೌಖಿಕವಾಗಿ ಮತ್ತು ಲಿಖಿತವಾಗಿ ತಿಳಿಸಿದ್ದೆ ಎಂದು ಕಟೀಲ್ ಹೇಳಿದ್ದರು.

ವಿಧಾನಸಭೆ ಸೋಲಿನ ಬಳಿಕ ಕಟೀಲ್ ಅವರ ರಾಜೀನಾಮೆಗೆ ರಾಜ್ಯದ ಅನೇಕ ಕಡೆಗಳಲ್ಲಿ ಪಕ್ಷದ ಕಾರ್ಯಕರ್ತರಿಂದ ಆಗ್ರಹ ವ್ಯಕ್ತವಾಗಿತ್ತು. ಸಾಮಾಜಿಕ ಮಾಧ್ಯಮಗಳಲ್ಲಿಯೂ ಈ ಬಗ್ಗೆ ತರಹೇವಾರಿ ಅಭಿಪ್ರಾಯಗಳು ವ್ಯಕ್ತವಾಗಿದ್ದವು. ಆದರೆ, ಪಕ್ಷದ ವರಿಷ್ಠರು ಹಾಗೂ ಇತರ ನಾಯಕರು ನಳಿನ್ ಅವರನ್ನು ಸಮರ್ಥಿಸಿ ಹೇಳಿಕೆಗಳನ್ನು ನೀಡಿದ್ದರು.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

2 days ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

2 days ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

2 days ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

2 days ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

2 days ago