Featured

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ಥಾನದ ಜವಾಬ್ದಾರಿಯಿಂದ ತನ್ನನ್ನು ಬಿಡುಗಡೆಗೊಳಿಸುವಂತೆ ಪಕ್ಷದ ಹಿರಿಯರಿಗೆ ಸುನಿಲ್‌ ಕುಮಾರ್‌ ಮನವಿ ..! vishwanews24

ಬಿಜೆಪಿ  ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ಥಾನದ ಜವಾಬ್ದಾರಿಯಿಂದ ತನ್ನನ್ನು ಬಿಡುಗಡೆಗೊಳಿಸುವಂತೆ ಪಕ್ಷದ ಹಿರಿಯರಿಗೆ ಸುನಿಲ್‌ ಕುಮಾರ್‌ ಮನವಿ ..!

ಬೆಂಗಳೂರು: ರಾಜ್ಯ ಬಿಜೆಪಿ ಪದಾಧಿಕಾರಿಗಳ ಪಟ್ಟಿ ಪರಿಷ್ಕರಣೆಗೆ ಸರ್ಕಸ್‌ ನಡೆಯುತ್ತಿರುವುದರ ಮಧ್ಯೆಯೇ ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ಥಾನದ ಜವಾಬ್ದಾರಿಯಿಂದ ತನ್ನನ್ನು ಬಿಡುಗಡೆಗೊಳಿಸುವಂತೆ ಮಾಜಿ ಸಚಿವ ವಿ. ಸುನಿಲ್‌ ಕುಮಾರ್‌ ಪಕ್ಷದ ಹಿರಿಯರಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಕೆಲವು ದಿನಗಳ ಹಿಂದೆಯೇ ಅವರು ಪಕ್ಷದ ಪ್ರಮುಖರು ಹಾಗೂ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಲ್ಲಿ ಮೌಖಿಕವಾಗಿ ಕೋರಿಕೊಂಡಿದ್ದರು ಎನ್ನಲಾಗುತ್ತಿದೆ. ಸುನಿಲ್‌ ಅವರ ಈ ವಿಮುಖತೆಗೆ ಬಣ ರಾಜಕಾರಣ ಕಾರಣವಲ್ಲ, ವೈಯಕ್ತಿಕ ಕಾರಣಗಳ ಹಿನ್ನೆಲೆಯಲ್ಲಿ ಸಂಘಟನಾತ್ಮಕವಾಗಿ ತೊಡಗಿಕೊಳ್ಳುವುದು ಕಷ್ಟವಾಗುತ್ತಿರುವುದರಿಂದ ಈ ನಿರ್ಣಯಕ್ಕೆ ಬಂದಿದ್ದಾರೆ ಎಂದು ತಿಳಿದು ಬಂದಿದೆ.

ಬಿಜೆಪಿಯಲ್ಲಿ ಪ್ರಧಾನ ಕಾರ್ಯದರ್ಶಿ ಹುದ್ದೆ ಆಯಕಟ್ಟಿನದು. ಸಾಮಾನ್ಯವಾಗಿ ನಾಲ್ವರು ಪ್ರಮುಖರನ್ನು ಮಾತ್ರ ಈ ಹುದ್ದೆಗೆ ನಿಯೋಜನೆ ಮಾಡಲಾಗುತ್ತದೆ. ಸುನಿಲ್‌ ಕುಮಾರ್‌, ನಂದೀಶ್‌ ರೆಡ್ಡಿ, ಪ್ರೀತಮ್‌ ಗೌಡ ಹಾಗೂ ಪಿ. ರಾಜೀವ್‌ ಸದ್ಯ ಈ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದಾರೆ. ಸಂಘಟನಾತ್ಮಕ ಹಿನ್ನೆಲೆಯಿಂದ ಬಂದ ಸುನಿಲ್‌ ಹಾಗೂ ವಿಜಯೇಂದ್ರ ನಡುವೆ “ವಿರಸವೂ ಅಲ್ಲದ, ಸಮರಸವೂ ಅಲ್ಲದ’ ತಟಸ್ಥ ಸಂಬಂಧವಿದೆ. ಆದಾಗಿಯೂ ಜವಾಬ್ದಾರಿಯಿಂದ ಮುಕ್ತಗೊಳಿಸುವಂತೆ ಮನವಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ. ಈ ಕೋರಿಕೆಯನ್ನು ಪಕ್ಷ ಪರಿಗಣಿಸಿದೆಯೋ ಇಲ್ಲವೋ? ಎಂಬ ಬಗ್ಗೆ ಸ್ಪಷ್ಟತೆ ಇಲ್ಲ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

17 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

20 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

20 hours ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

20 hours ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

20 hours ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

21 hours ago