ಬಿಜೆಪಿ ವಿಧಾನಪರಿಷತ್ ಸದಸ್ಯ ಕೆ.ಪಿ ನಂಜುಂಡಿ ರಾಜೀನಾಮೆ : ನಾಳೆ ಕಾಂಗ್ರೆಸ್ ಸೇರ್ಪಡೆ – Vishwanews24

Featured, ರಾಜ್ಯ ನ್ಯೂಸ್

ಬಿಜೆಪಿ ವಿಧಾನಪರಿಷತ್ ಸದಸ್ಯ ಕೆ.ಪಿ ನಂಜುಂಡಿ ರಾಜೀನಾಮೆ : ನಾಳೆ ಕಾಂಗ್ರೆಸ್ ಸೇರ್ಪಡೆ

ಹುಬ್ಬಳ್ಳಿ, : ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಕೆ.ಪಿ. ನಂಜುಂಡಿ ಅವರು ಇಂದು ರಾಜೀನಾಮೆ ನೀಡಿದ್ದು, ಈ ಮೂಲಕ ಬಿಜೆಪಿಗೆ ಶಾಕ್ ನೀಡಿದ್ದಾರೆ.

ಕೆ.ಪಿ ನಂಜುಂಡಿ ಅವರು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಮನೆಗೆ ತೆರಳಿ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಜೊತೆಗೆ ಬುಧವಾರ ಅವರು ಕಾಂಗ್ರೆಸ್ ಗೆ ಸೇರ್ಪಡೆಗೊಳ್ಳುತ್ತಿರುವುದಾಗಿ ತಿಳಿದುಬಂದಿದೆ.

ಬರ್ತ್​​ಡೇ ಕೇಕ್​​ ತಿಂದು ಬಾಲಕಿ ಸಾವು ಪ್ರಕರಣ : ಕೇಕ್ ನಲ್ಲಿತ್ತು ಹೆಚ್ಚಿನ ಪ್ರಮಾಣದ ಸ್ಯಾಕ್ರರಿನ್ ; ಆಘಾತಕಾರಿ ಮಾಹಿತಿ ಬಹಿರಂಗ – Vishwanews24

ಇನ್ನು ರಾಜೀನಾಮೆ ನೀಡಿ ಮಾತನಾಡಿದ ಅವರು, ಬುಧವಾರ ಬೆಳಗ್ಗೆ 10 ಗಂಟೆಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದೇನೆ. ನಿರ್ಲಕ್ಷ್ಯಕ್ಕೊಳಗಾದ‌ ಕಾಯಕ ಸಮಾಜದ ಏಳಿಗೆಗೆ ರಾಜಕೀಯಕ್ಕೆ ಬಂದೆ. ಕಾಯಕ ಸಮಾಜ ಉಳಿಸಿಕೊಳ್ಳುತ್ತಾರೆ ಎನ್ನುವ ಕಾರಣಕ್ಕೆ ಬಿಜೆಪಿಗೆ ಬಂದೆ. ಆದರೆ, ಪಕ್ಷದ ಮುಖಂಡರು ಒಂದು ದಿನವೂ ಕಾಯಕ ಸಮಾಜದ ಬಗ್ಗೆ ಮಾತನಾಡಿಲ್ಲ. ಬಿಜೆಪಿ ಸರ್ಕಾರವಿದ್ದಾಗ ನಮ್ಮ ಸಮುದಾಯಕ್ಕೆ ಯಾವುದೇ ರೀತಿ ಸ್ಪಂದಿಸಿಲ್ಲ. ನನ್ನನ್ನು ಎಂಎಲ್‌ಸಿ ಮಾಡಿ ಸುಮ್ಮನಾದರು, ಏನೂ ಜವಾಬ್ದಾರಿ ಕೊಡಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೌಕಾಪಡೆಯ 2 ಹೆಲಿಕಾಪ್ಟರ್ ಪರಸ್ಪರ ಡಿಕ್ಕಿ ; 10 ಮಂದಿ ಮೃತ್ಯು – Vishwanews24

Leave a Reply