ಬಿಜೆಪಿ ವಿರುದ್ಧ ಅಲ್ಲ ಪೊಲೀಸರ ವಿರುದ್ಧವೇ ಪ್ರತಿಭಟನೆ ಮಾಡಬೇಕಾಗುತ್ತದೆ : ಡಿ ಕೆ ಶಿ -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು: ಕಾಂಗ್ರೆಸ್ ಪಕ್ಷವನ್ನು ಕೆ ಜಿ ಹಳ್ಳಿ ಮತ್ತು ಡಿ ಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಫಿಕ್ಸ್ ಮಾಡಲಾಗುತ್ತಿದ್ದು, ಇದು ಇನ್ನು ಮುಂದೆಯೂ ಮುಂದುವರೆದರೆ ಬಿಜೆಪಿ ವಿರುದ್ಧ ಅಲ್ಲ ಪೊಲೀಸರ ವಿರುದ್ಧವೇ ಪ್ರತಿಭಟನೆ ಮಾಡಬೇಕಾಗುತ್ತದೆ. ಮಿಸ್ಟರ್ ಕಮಿಷನರ್ ಬಿ ಕೇರ್ ಫುಲ್ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಗುಡುಗಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆ ಜಿ ಹಳ್ಳಿ ಮತ್ತು ಡಿ ಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ನಡೆದ ಗಲಭೆಗೆ ಪೊಲೀಸರ ವೈಫಲ್ಯವೇ ಕಾರಣ. ಬಿಜೆಪಿ ಪಕ್ಷದ ಏಜೆಂಟ್ ಗಳಂತೆ ಪೊಲೀಸರು ನಡೆದುಕೊಳ್ಳುತ್ತಿದ್ದಾರೆ. ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವುದನ್ನು ಬಿಟ್ಟು ಆರೋಪಿಗಳ ಸಂಖ್ಯೆ ಹೆಚ್ಚಿಸಲು ಅಮಾಯಕರನ್ನು ಬಂಧಿಸುತ್ತಿದ್ದರೆ. ಅದನ್ನು ನೋಡಿಯೂ ನಾವು ಸುಮ್ಮನಿರಲ್ಲ ಎಂದು ಕಿಡಿಕಾರಿದ್ದಾರೆ.

ಇನ್ನು ನಮಗೆ ತನಿಖಾ ಸಂಸ್ಥೆಯ ಮೇಲೆ ನಮಗೆ ನಂಬಿಕೆ ಇಲ್ಲ. ಹಾಗಾಗಿ ಹೈಕೋರ್ಟ್ ಹಾಲಿ ನ್ಯಾಯಮೂರ್ತಿಯವರ ನೇತೃತ್ವದಲ್ಲಿ ಈ ತನಿಖೆ ಆಗಬೇಕು ಎಂದು ಡಿ ಕೆ ಶಿವಕುಮಾರ್ ಒತ್ತಾಯಿಸಿದ್ದಾರೆ.