ಬೆಂಗಳೂರು : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿಸಿ ರಾಜ್ಯದ ಕಾಂಗ್ರೆಸ್ ನಾಯಕರು ಗುರುವಾರ ರಾಜಭವನ ಚಲೋ ಪ್ರತಿಭಟನಾ ರ್‍ಯಾಲಿ ಆರಂಭಿಸಿದೆ.
ರಾಜಭವನ ಚಲೋ ಪ್ರತಿಭಟನಾ ಮೆರವಣಿಗೆ ಆರಂಭಕ್ಕೂ ಮುನ್ನ ಅವರು ಕೆಪಿಸಿಸಿ ಕಚೇರಿ ಮುಂದೆ ಮಾತನಾಡಿದ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ” ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವು ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧ ಪಕ್ಷಗಳ ನಾಯಕರಿಗೆ ಕಿರುಕುಳ ಕೊಡುತ್ತಿತು ಈ ಮೂಲಕ ಸೇಡಿನ ರಾಜಕಾರಣ ಮಾಡುವ ಕೊಡುವ ಕೆಟ್ಟ ಹಾದಿ ಹಿಡಿದಿದೆ. ಹೀಗಾಗಿ ಇದರ ವಿರುದ್ಧದ ಹೋರಾಟಕ್ಕೆ ಬಿಜೆಪಿಯೇತರ ಎಲ್ಲ ಪಕ್ಷಗಳೂ ಒಟ್ಟಾಗಬೇಕು” ಎಂದು ಕರೆ ನೀಡಿದ್ದಾರೆ.
“ಬಿಜೆಪಿ ಮತ್ತು ಆ ಪಕ್ಷದ ನಾಯಕರಿಗೆ ಕೇಡುಗಾಲ ಬಂದಿದ್ದು, ಬಿಜೆಪಿಯ ಪ್ರಜಾಪ್ರಭುತ್ವ ವಿರೋಧಿ ನಡೆಯನ್ನು ಎಲ್ಲರೂ ಒಟ್ಟಾಗಿ ಸೋಲಿಸಬೇಕು . ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಂವಿಧಾನ ಮತ್ತು ಕಾನೂನುಗಳನ್ನು ಗಾಳಿಗೆ ತೂರಿ ಆಡಳಿತ ನಡೆಸುತ್ತಿದ್ದು ಈ ನಡವಳಿಕೆ ವಿರುದ್ಧ ದೇಶದಾದ್ಯಂತ ಹೋರಾಟ ಆರಂಭವಾಗಬೇಕು” ಎಂದು ಹೇಳಿದ್ದಾರೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…