ರಾಜ್ಯ ನ್ಯೂಸ್

ಬಿಜೆಪಿ ಶಾಸಕರನ್ನು ಮುಟ್ಟಿ ನೋಡೋಣ. ಅವರು ಸಿಂಹಗಳಿದ್ದಂತೆ, : ಕೆ.ಎಸ್‌. ಈಶ್ವರಪ್ಪ

ಮೈಸೂರು: ಮಂತ್ರಿಗಳು ವರ್ಗಾವಣೆಯ ಕಮಿಷನ್ ಏಜೆಂಟ್​ಗಳಾಗಿದ್ದಾರೆ. ರಾಜ್ಯ ಇತಿಹಾಸದಲ್ಲೇ ಇಷ್ಟೊಂದು ವರ್ಗಾವಣೆ ಭ್ರಷ್ಟಾಚಾರ ಆಗಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ಚಾಮುಂಡಿ ಸನ್ನಿಧಾನದಲ್ಲಿ ನಿಂತು ನಾನು ಈ ಮಾತನ್ನು ಜವಾಬ್ದಾರಿಯುತವಾಗಿ ಹೇಳುತ್ತಿದ್ದೇನೆ. ಸಿಎಂ ಕಣ್ಮುಂಚಿ ಕುಳಿತು ಕೊಂಡಿರುವುದು ಒಳ್ಳೆಯದಲ್ಲ. ಎಲ್ಲ ಹಂತದ ಅಧಿಕಾರಿಗಳ ವರ್ಗಾವಣೆಗೆ ಹಣ ಪಡೆಯಲಾಗುತ್ತಿದೆ. ಅಧಿಕಾರಿಗಳಿಗೆ ಯಾವ ಕ್ಷಣದಲ್ಲಿ ಈ ಸರ್ಕಾರ ಬೀಳುತ್ತೋ, ಯಾವ ಕ್ಷಣದಲ್ಲಿ ನಮ್ಮ ವರ್ಗಾವಣೆ ಆಗುತ್ತೋ ಎಂಬ ಆತಂಕವಿದೆ ಎಂದರು.

ಕೈ ಶಾಸಕರನ್ನು ಸರ್ಕಾರ ಬೀಳಿಸೋಣಾ ಬನ್ನಿ ಎಂದು ನಾವು ಕರೆಯಲ್ಲ. ಬಿಜೆಪಿ ಕರೆದ ಕೂಡಲೇ ಬರುವಷ್ಟು ಕಾಂಗ್ರೆಸ್ ಶಾಸಕರು ದುರ್ಬಲರಾ? ಅವರ ಶಾಸಕರ ಬಗ್ಗೆ ಅವರ ಅಧ್ಯಕ್ಷರಿಗೆ ನಂಬಿಕೆ ಇಲ್ಲ. ರಾಜ್ಯದ ಜೆಡಿಎಸ್-ಕಾಂಗ್ರೆಸ್ ಶಾಸಕರು ದುರ್ಬಲರು. ಇಂಥ ಸರ್ಕಾರ ಉಳಿಯುತ್ತಾ? ನಮ್ಮ ಒಬ್ಬ ಶಾಸಕರನ್ನು ಮುಟ್ಟಿ ನೋಡೋಣಾ? ಬಿಜೆಪಿಯ ಶಾಸಕರು ಸಿಂಹ ರೂಪದ ಶಾಸಕರು ಎಂದು ಕಿಡಿಕಾರಿದರು..ಕಾಂಗ್ರೆಸ್ ಶಾಸಕರು ಮಾರಾಟದ ವಸ್ತುಗಳಾಗಿದ್ದಾರೆ ಅಂತ ನಾವು ಹೇಳ್ತಿಲ್ಲ. ಕಾಂಗ್ರೆಸ್ ಶಾಸಕರು ಅಷ್ಟು ದುರ್ಬಲಾಗಿದ್ದಾರೆಂದು ಅವರೇ ಹೇಳುತ್ತಿದ್ದಾರೆ. ಹಾಗಾಗಿ ಈ ಸರ್ಕಾರ ಬಿದ್ದೋಗುತ್ತೆ ನಾವು ಮತ್ತೆ ಸರ್ಕಾರ ರಚನೆ‌ ಮಾಡ್ತೀವಿ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರು ಹಿಂದುಳಿದ ವರ್ಗಗಳಿಗೆ ಕೊಟ್ಟಿರುವ ಕೊಡುಗೆ ಜನರಿಗೆ ತಿಳಿಸಲಿದ್ದೇವೆ. ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದ್ರೂ ಈ ದೇಶಕ್ಕೆ ಸಂವಿಧಾನ ಕೊಟ್ಟ ಅಂಬೇಡ್ಕರ್ ಅವರ ಉದ್ದೇಶ ಯಾರೂ ಕೂಡ ಈಡೇರಿಸಿರಲಿಲ್ಲ. ಆದ್ರೆ ಪ್ರಧಾನಿ ಮೋದಿ ಆ ಕೆಲಸವನ್ನ ಮಾಡಿದ್ದಾರೆ. ಆ ಬಗ್ಗೆ ಜನರಿಗೆ ಅರಿವು ಮೂಡಲಿಸಲಿದ್ದೇವಿ ಎಂದು ಈಶ್ವರಪ್ಪ ಹೇಳಿದರು.

ರಾಜ್ಯ ಸರ್ಕಾರದ ಬಗ್ಗೆ ಮಾತನಾಡುವ ಪ್ರಶ್ನೆ ಉದ್ಭವವೇ ಆಗೋಲ್ಲ. ಯಾಕೆಂದ್ರೆ ರಾಜ್ಯದಲ್ಲಿ ಸರ್ಕಾರ ಇದೆಯೋ ಇಲ್ಲವೋ ಅನ್ನೋ ಪ್ರಶ್ನೆ ಬಂದಿದೆ. ಕಾರಣ ರಾಜ್ಯ ಸರ್ಕಾರದ ಅಧಿಕಾರಿಗಳೇ, ಈ ಸರ್ಕಾರ ಇರುತ್ತೋ‌ ಇಲ್ಲವೋ ಅಂತಿದ್ದಾರೆ. ಸರ್ಕಾರಿ ಅಧಿಕಾರಿಗಳ ವರ್ಗಾವಣೆಯಲ್ಲಿ ಭಾರೀ ಭ್ರಷ್ಟಾಚಾರ ನಡೆಯುತ್ತಿದೆ. ನಾನು ಚಾಮುಂಡೇಶ್ವರಿ ದೇವಿ ಮುಂದೆ ಕುಳಿತು ಹೇಳ್ತಿದ್ದೀನಿ. ಮಂತ್ರಿಗಳು ವರ್ಗಾವಣೆಯ ಏಜೆಂಟ್​ಗಳಾಗಿದ್ದಾರೆ. ಕಾಂಗ್ರೆಸ್​ ವರ್ಗಾವಣೆಯಲ್ಲಿ ಭ್ರಷ್ಟಾಚಾರ ಮಾಡ್ತಿದೆ. ಹಾಗಾಗಿ ಈ ದೇಶದಲ್ಲಿ , ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ತರಲು ನಾವು ಮುಂದಾಗಿದ್ದೇವೆ ಎಂದು ಈಶ್ವರಪ್ಪ ಹೇಳಿದರು..

Vishwa News 24

Recent Posts

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

10 minutes ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

42 minutes ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

54 minutes ago

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

3 hours ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

4 hours ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

17 hours ago