ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಸದ್ಯಕ್ಕೆ ಬಿಗ್ ರಿಲೀಫ್ ಸಿಕ್ಕಿದೆ. ಪುತ್ರ ಮಾಡಾಳ್ ಪ್ರಶಾಂತ್ ಮೇಲೆ ಲೋಕಾಯುಕ್ತ ಪೊಲೀಸರು ನಡೆಸಿದ ದಾಳಿಯ ನಂತರ ಅವರ ನಿವಾಸ ಮತ್ತು ಕಚೇರಿಯಲ್ಲಿ ಸಿಕ್ಕಿದ 8 ಕೋಟಿಗೂ ಅಧಿಕ ಲೆಕ್ಕಕ್ಕೆ ಸಿಗದ ನಗದು ಪ್ರಕರಣ ಹಿನ್ನೆಲೆಯಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಸೇರಿದಂತೆ ಆರು ಮಂದಿ ವಿರುದ್ಧ ಕೇಸು ದಾಖಲಾಗಿತ್ತು.
ಪುತ್ರನ ಲಂಚ ಪ್ರಕರಣದಲ್ಲಿ A1 ಆರೋಪಿಯಾಗಿರುವ ಕೆಎಸ್ ಡಿಎಲ್ ಮಾಜಿ ಚೇರ್ಮನ್ ಬಿಜೆಪಿ ಶಾಸಕ ಮಾಡಳ್ ವಿರೂಪಾಕ್ಷಪ್ಪಗೆ ಮಧ್ಯಂತರ ಜಾಮೀನು ಸಿಕ್ಕಿದೆ. ನ್ಯಾಯಾಮುರ್ತಿ ನಟರಾಜನ್ ಅವರು ಮಾಡಳ್ ವಿರೂಪಾಕ್ಷಪ್ಪಗೆ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದ್ದಾರೆ.
ಇಂದು ವಿಚಾರಣೆ ನಡೆಸಿ ತೀರ್ಪು ನೀಡಿದ ಹೈಕೋರ್ಟ್ ನ ಏಕಸದಸ್ಯ ಪೀಠ ಶಾಸಕರಿಗೆ ಮಧ್ಯಂತರ ಜಾಮೀನು ನೀಡಿ ಆದೇಶ ಪ್ರತಿ ಕೈಗೆ ಸಿಕ್ಕಿದ 48 ಗಂಟೆಗಳೊಳಗೆ ಶರಣಾಗುವಂತೆ ಶಾಸಕರಿಗೆ ಸೂಚಿಸಿದೆ. ಲೋಕಾಯುಕ್ತ ಪೊಲೀಸರು ಸೂಕ್ತ ದಾಖಲೆ ಸಲ್ಲಿಸುವವರೆಗೆ ಶಾಸಕರಿಗೆ ಜಾಮೀನು ಸಿಕ್ಕಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…