Featured

ಬಿಜೆಪಿ ಶಾಸಕ ಹರೀಶ್ ಪೂಂಜಾ ಅರೆಸ್ಟ್ ಗೆ ಮನೆಗೆ ಆಗಮಿಸಿದ ಪೊಲೀಸರು – vishwanews24

ಬಿಜೆಪಿ ಶಾಸಕ ಹರೀಶ್ ಪೂಂಜಾ ಅರೆಸ್ಟ್ ಗೆ ಮನೆಗೆ ಆಗಮಿಸಿದ ಪೊಲೀಸರು

ಬೆಳ್ತಂಗಡಿ : ಅಕ್ರಮ ಕಲ್ಲು ಗಣಿಕಾರಿಗೆ ವಿಚಾರದಲ್ಲಿ ಬಿಜೆಪಿ ಮುಖಂಡನನ್ನು ಅರೆಸ್ಟ್ ಮಾಡಿರುವ ವಿಚಾರಕ್ಕೆ ಪೊಲೀಸ್ ಠಾಣೆಯಲ್ಲಿ ಪೊಲೀಸರ ವಿರುದ್ದ ವಾಗ್ದಾಳಿ ನಡೆಸಿದ್ದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ದ ಇದೀಗ ಎರಡು ಎಫ್ಐಆರ್ ದಾಖಲಾಗಿದ್ದು, ಈ ಹಿನ್ನಲೆ ಪೊಲೀಸರು ಪೂಂಜಾ ಅರೆಸ್ಟ್ ಗೆ ಮನೆಗೆ ಆಗಮಿಸಿದ್ದಾರೆ.

ಮೇ 18 ರಂದು ಅಕ್ರಮ ಕಲ್ಲು ಕೋರೆ ಗಣಿಗಾರಿಕೆಗೆ ಸಂಬಂಧಿಸಿದಂತೆ ಬಿಜೆಪಿ ಮುಖಂಡನನ್ನು ವಿನಾಕಾರಣ ಬಂಧಿಸಲಾಗಿರುವುದನ್ನು ಖಂಡಿಸಿ ಶಾಸಕ ಹರೀಶ್ ಪೂಂಜ ಕಾರ್ಯಕರ್ತರೊಂದಿಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮಧ್ಯರಾತ್ರಿ ಪ್ರತಿಭಟಿಸಿ ಪೊಲೀಸರಿಗೆ ನಿಂಧಿಸಿದ್ದರು. ಬಳಿಕ ನಡೆದ ಮೇ.20 ರಂದು ತಾಲೂಕು ಆಡಳಿತದ ಮುಂದೆ ಪ್ರತಿಭಟನೆ ನಡೆಸಿ ಮತ್ತೆ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆಂದು ಎರಡನೇ ಪ್ರಕರಣ ದಾಖಲಿಸಲಾಗಿತ್ತು.

ಈ ಹಿನ್ನಲೆ ಶಾಸಕ ಹರೀಶ್ ಪೂಂಜಾ ಬಂಧನಕ್ಕೆ ಮುಂದಾಗಿದ್ದು, ಅವರ ಗರ್ಡಾಡಿ ನಿವಾಸದ ಮುಂದೆ ಪೊಲೀಸ್ ತಂಡ ಸಜ್ಜಾಗಿದೆ. ಯಾವುದೇ ಸಮಯದಲ್ಲೂ ಹರೀಶ್ ಪೂಂಜ ಬಂಧನದ ಸಾಧ್ಯತೆ ಎದುರಾಗಿದೆ. ಈ ಹಿನ್ನೆಲೆ ಅವರ ಮನೆಗೆ ಸಾರ್ವಜನಿಕ‌ ಭೇಟಿಗೆ ಪೊಲೀಸರು ನಿರಾಕರಿಸಿದ್ದು, ಮನೆಗೆ ಹೋಗುವ ರಸ್ತೆಗೆ ಪೊಲೀಸ್ ಸರ್ಪಗಾವಲು ಇರಿಸಲಾಗಿದೆ. ವಿಚಾರ ತಿಳಿದು ಅವರ ಮನೆ ಮುಂದೆ ಕಾರ್ಯಕರ್ತರು ಜಮಾಯಿಸಲಾರಂಬಿಸಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

16 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago