ರಾಯಚೂರು: ಬಿಜೆಪಿ ಶಿಸ್ತಿನ ಪಕ್ಷ ಬಿ.ಎಸ್.ಯಡಿಯೂರಪ್ಪ ಶಿಸ್ತಿನ ನಾಯಕ. ಊಹಾಪೋಹಗಳಿಗೆ ಕಿವಿಗೊಡದೆ ಅವರ ಮಾತನ್ನು ನಂಬಿ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯಲ್ಲಿ ಸಹಿ ಸಂಗ್ರಹ ಸಂಪ್ರದಾಯವೇ ಇಲ್ಲ. ಅದು ಬಿಜೆಪಿ ಪದ್ಧತಿ ಅಲ್ಲ. ಪರವಾಗಲಿ ವಿರೋಧವಾಗಲಿ ಸಹಿ ಸಂಗ್ರಹ ಮಾಡಕೂಡದು ಎಂದು ಪಕ್ಷದ ವರಿಷ್ಠರು ತಿಳಿಸಿದ್ದಾರೆ. ಅವರು ಮಾಡಿದ್ದಾರಂತೆ, 60 ಜನ ಸಹಿ ಹಾಕಿದ್ದಾರಂತೆ ಎಂಬ ಅಂತೆ ಕಂತೆ ಬಿಡಿ. ಸಹಿ ಮಾಡಿದ್ದು ಯಾರಾದರೂ ನೋಡಿದ್ದಾರಾ? ಎಂದು ಪ್ರಶ್ನಿಸಿದರು
ಈ ವಿಚಾರದಲ್ಲಿ ಬಿಎಸ್ ವೈ, ನಳೀನ್ ಕುಮಾರ್ ಕಟೀಲ್, ಪ್ರಹ್ಲಾದ ಜೋಶಿ ಸ್ಪಷ್ಟ ಹೇಳಿಕೆ ನೀಡಿದ್ದಾರೆ. ಇನ್ನಾದರೂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಕುತಂತ್ರ ರಾಜಕಾರಣ ಮಾಡುವುದನ್ನು ಬಿಡಲಿ ಎಂದರು.
ಬಿಎಸ್ ವೈ ರಾಜೀನಾಮೆ ನೀಡುವುದಾಗಿ ಹೇಳಿಕೆ ನೀಡುತ್ತಿದ್ದಂತೆ ಸಿದ್ದರಾಮಯ್ಯ , ಡಿ.ಕೆ.ಶಿವಕುಮಾರ್ ಹೇಳಿಕೆಯೇ ಬದಲಾಗಿದೆ. ಆದರೆ, ಆಟ ಬಿಜೆಪಿ ಮುಂದೆ ನಡೆಯಲ್ಲ. ಮುಂದೆ ಅವರೇ ಅಧಿಕಾರಕ್ಕಾಗಿ ಕಚ್ಚಾಡ್ತಾರೆ ನೋಡುತ್ತಿರಿ. ಅವರಿಗೆ ಯಡಿಯೂರಪ್ಪನವರು ಯಾವ ಉತ್ತರ ನೀಡಬೇಕಿತ್ತೋ ಅದು ನೀಡಿಯಾಗಿದೆ ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…