ಹೈದರಾಬಾದ್ : ಮಹಾತ್ಮ ಗಾಂಧಿ ಕೋರಿಕೆ ಮೇರೆಗೆ ಸಾರ್ವಕರ್ ಅವರು ಬಿಡುಗಡೆಗಾಗಿ ಕ್ಷಮಾಪಣೆ ನೀಡುವಂತೆ ಬ್ರಿಟಿಷರಿಗೆ ಪತ್ರ ಬರೆದಿದ್ದರು ಎಂಬ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಹೇಳಿಕೆ ವಿರುದ್ಧ ವಾಗ್ದಾಳಿ ನಡೆಸಿರುವ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ, ಬಿಜೆಪಿ ಶೀಘ್ರದಲ್ಲಿಯೇ ವಿನಾಯಕ್ ದಾಮೋದರ್ ಸಾರ್ವಕರ್ ಅವರನ್ನು ರಾಷ್ಟ್ರಪಿತ ಎಂದು ಘೋಷಿಸಲಿದೆ ಎಂದು ಆರೋಪಿಸಿರುವುದಾಗಿ ವರದಿ ತಿಳಿಸಿದೆ.
ಎಎನ್ ಐ ಜೊತೆ ಮಾತನಾಡಿರುವ ಒವೈಸಿ, ಭಾರತೀಯ ಜನತಾ ಪಕ್ಷ ತಿರುಚಿದ ಇತಿಹಾಸವನ್ನು ಪ್ರಸ್ತುತಪಡಿಸುತ್ತಿದೆ. ಒಂದು ವೇಳೆ ಇದು ಮುಂದುವರಿದರೆ, ಅವರು ಮಹಾತ್ಮ ಗಾಂಧಿ ಹೆಸರನ್ನು ಕಿತ್ತೆಸೆದು ಸಾವರ್ಕರ್ ಅವರನ್ನು ರಾಷ್ಟ್ರಪಿತ ಎಂದು ಘೋಷಿಸುತ್ತಾರೆ. ಮಹಾತ್ಮ ಗಾಂಧಿ ಹತ್ಯೆಯಲ್ಲಿ ಆರೋಪಿ ಎನ್ನಲಾಗಿದ್ದ ಸಾವರ್ಕರ್ ಅವರನ್ನು ಜಸ್ಟೀಸ್ ಜೀವನ್ ಲಾಲ್ ಕಪೂರ್ ಸಮಿತಿ ತನಿಖೆಗೊಳಪಡಿಸಿತ್ತು ಎಂದು ಒವೈಸಿ ದೂರಿದ್ದಾರೆ.
ಮಹಾತ್ಮ ಗಾಂಧಿ ಅವರ ಕೋರಿಕೆ ಮೇರೆಗೆ ಸಾವರ್ಕರ್ ಅವರು ಕ್ಷಮಾಪಣೆ ನೀಡುವಂತೆ ಬ್ರಿಟಿಷರಿಗೆ ಪತ್ರ ಬರೆದಿದ್ದರು ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದರು.
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ; ಆರೋಪಿ ಪತ್ತೆಗೆ ತೀವ್ರಗೊಂಡ ತನಿಖೆ ಕೊಲ್ಲೂರು: ಮೇ 17ರ…
ಮಂಗಳೂರು : ಹೆಚ್ಚುತ್ತಿರುವ ಎಬೋಲಾ ವೈರಸ್ ಪ್ರಕರಣ ; ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಂಗಳೂರು : ಆಫ್ರಿಕಾ…
ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…
ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…
ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…
ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…