ಬಿಜೆಪಿ ಸಂಕಲ್ಪ ಯಾತ್ರೆ ವಿಫಲ , ಜನರು ಆ ಪಕ್ಷ ಕಿತ್ತೊಗೆದು ಕಾಂಗ್ರೆಸ್ ಗೆ ಅಧಿಕಾರ ಕೊಡಲು ಸಂಕಲ್ಪ ಮಾಡಿದ್ದಾರೆ : ಸಿದ್ದರಾಮಯ್ಯ – Vishwanews24

Featured, ರಾಜ್ಯ ನ್ಯೂಸ್

ಬಿಜೆಪಿ  ಜನಸಂಕಲ್ಪ ಯಾತ್ರೆಗೆ ಜನರೇ ಸೇರುತ್ತಿಲ್ಲ..

ಬರುವ ಅಷ್ಟು ಇಷ್ಟು ಜನರನ್ನು ಹಿಡಿದಿಡಲು ಗೇಟ್ ಗೆ ಬೀಗ ಹಾಕುವ ಸ್ಥಿತಿ ಬಿಜೆಪಿಯದ್ದಾಗಿದೆ..

ಮುಂಬರುವ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಎಲ್ಲ ರೀತಿಯ ತಯಾರಿ ಮಾಡಿಕೊಳ್ಳುತ್ತಿದೆ.. https://wp.me/p9KQap-hMH

ಹುಬ್ಬಳ್ಳಿ: ಬಿಜೆಪಿ ಸಂಕಲ್ಪ ಯಾತ್ರೆ ವಿಫಲವಾಗಿದೆ‌. ಜನರು ಆ ಪಕ್ಷ ಕಿತ್ತೊಗೆದು ಕಾಂಗ್ರೆಸ್ ಗೆ ಅಧಿಕಾರ ಕೊಡಲು ಸಂಕಲ್ಪ ಮಾಡಿದ್ದಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಸಂಕಲ್ಪ ಯಾತ್ರೆಗೆ ಜನರೇ ಸೇರುತ್ತಿಲ್ಲ. ಬರುವ ಅಷ್ಟು ಇಷ್ಟು ಜನರನ್ನು ಹಿಡಿದಿಡಲು ಗೇಟ್ ಗೆ ಬೀಗ ಹಾಕುವ ಸ್ಥಿತಿ ಬಿಜೆಪಿಯದ್ದಾಗಿದೆ ಎಂದು ವ್ಯಂಗ್ಯ ವಾಡಿದರು.

ಮೂಡುಬಿದಿರೆ: ಕಾಲೇಜಿನ ಹಾಸ್ಟೆಲ್‌ ನಲ್ಲಿ ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ – Vishwanews24

ಆರ್ಥಿಕವಾಗಿ ಹಿಂದುಳಿದ ವರ್ಗ (ಇಡಬ್ಲ್ಯುಎಸ್)ಗೆ ಶೇ. 10ರಷ್ಟು ಮೀಸಲಾತಿ ಕುರಿತಾಗಿ ಸುಪ್ರೀಂ ಕೋರ್ಟ್ ತೀರ್ಪುನ್ನು ನಾನು ಇನ್ನೂ ಗಮನಿಸಿಲ್ಲ. ನೋಡಿದ ಮೇಲೆ ಪ್ರತಿಕ್ರಿಯೆ ನೀಡುತ್ತೇನೆ. ನನಗೆ ಗೊತ್ತಿರುವ ಪ್ರಕಾರ ಸಂವಿಧಾನದ ಅನುಚ್ಛೇದ 15 ಮತ್ತು 16ರ ಅಡಿಯಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಕಲ್ಪಿಸಲು ಅವಕಾಶವಿಲ್ಲ. ಸಾಮಾಜಿಕವಾಗಿ ಹಿಂದುಳಿದ ಮತ್ತು ಅಸ್ಪೃಶ್ಯತೆ, ಅಸಮಾನತೆ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ಸಮುದಾಯಗಳಿಗೆ ಮಾತ್ರ ಮೀಸಲು ನೀಡಬಹುದು ಎಂದರು.

ಮುಂಬರುವ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಎಲ್ಲ ರೀತಿಯ ತಯಾರಿ ಮಾಡಿಕೊಳ್ಳುತ್ತಿದೆ. ಸತೀಶ ಜಾರಕಿಹೊಳಿ ನೀಡಿದ ಹಿಂದೂ ಪದ ಹೇಳಿಕೆಗೆ ಸಂಬಂಧಿಸಿದಂತೆ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಣದೀಪ ಸುರ್ಜೇವಾಲಾ ನೀಡಿರುವ ಪ್ರತಿಕ್ರಿಯೆಯೇ ನನ್ನ ನಿಲುವಾಗಿದೆ ಎಂದಷ್ಟೇ ತಿಳಿಸಿದರು.

ಕಡಬ : ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು; ಐವರು ಗಂಭೀರ – Vishwanews24

 

Leave a Reply