ಶಿರಸಿ : ಬಿಜೆಪಿ ಸಂಸದ ಹಾಗೂ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಅವರ ಮನೆಗೆ ನಿನ್ನೆ ತಡರಾತ್ರಿ ಜೀವ ಬೆದರಿಕೆ ಕರೆ ಬಂದಿದೆ ಎನ್ನಲಾಗಿದೆ.
ನಿನ್ನೆ ತಡರಾತ್ರಿ 1.45 ರ ಸುಮಾರಿಗೆ ಅನಂತ್ ಕುಮಾರ್ ಹೆಗಡೆ ಮನೆಯ ಲ್ಯಾಂಡ್ ಲೈನ್ ಗೆ ದೂರವಾಣಿ ಕರೆ ಬಂದಿದೆ. ಆದರೆ, ಅವರು ಮನೆಯಲ್ಲಿರಲಿಲ್ಲ. ಹಾಗಾಗಿ, ಅವರ ಪತ್ನಿ ರೂಪಾ ಹೆಗಡೆ ಕರೆ ಸ್ವೀಕರಿಸಿ ಮಾತನಾಡಿದ್ದಾರೆ. ಈ ವೇಳೆ ಕರೆ ಮಾಡಿದ ಅನಾಮಿಕರು ಅವಾಚ್ಯ ಶಬ್ದಗಳಿಂದ ಅವರಿಗೆ ಬಯ್ಯಲು ಆರಂಭಿಸಿದ್ದಾನೆ ಎನ್ನಲಾಗಿದೆ.
ಕರೆ ಮಾಡಿದವರು ಆವಾಚ್ಯ ಶಬ್ದಗಳಿಂದ ಬಯ್ಯಲು ಶುರುಮಾಡಿದಾಗ ರೂಪಾ ಅವರು ಕಾಲ್ ಕಟ್ ಮಾಡಿದ್ದಾರೆ. ಆದರೂ ಪದೇ ಪದೆ ಕರೆಗಳು ಬರುತ್ತಿದ್ದವು ಎನ್ನಲಾಗಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವರ ಆಪ್ತ ಸಹಾಯಕ ಶಿರಸಿ ಮಾರುಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…