ಬೆಳ್ತಂಗಡಿ: ಕಾಂಗ್ರೆಸ್‍ನ ಡಿ.ಕೆ.ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ಬಂಧಿಸಿರುವುದನ್ನು ಖಂಡಿಸಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ಬೆಳ್ತಂಗಡಿ ಮುಖ್ಯರಸ್ತೆಯನ್ನು ತಡೆದು ಪ್ರತಿಭಟನೆ ನಡೆಸಿದರು. ಪ್ರ
ಪ್ರಾರಂಭದಲ್ಲಿ ಬೆಳ್ತಂಗಡಿ ಮೂರು ಮಾರ್ಗದ ಬಳಿ ರಸ್ತೆ ತಡೆ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಬಳಿಕ ಬಸ್ ನಿಲ್ದಾಣದ ಬಳಿ ರಸ್ತೆ ತಡೆ ನಡೆಸಿದರು. ಪೊಲೀಸರು ಅಲ್ಲಿ ಕಾರ್ಯಕರ್ತರನ್ನು ಬಂಧಿಸಿದರು. ಕೇಂದ್ರ ಹಾಗೂ ರಾಜ್ಯ ಸರಕಾರ, ಬಿಜೆಪಿ ನಾಯಕರ ವಿರುದ್ಧ ಘೋಷಣೆಗಳನ್ನು ಕೂಗಲಾಯಿತು.
ಪ್ರತಿಭಟನಾಕಾರರನ್ನು ಉದ್ದೇಶಿಸಿ ಬೆಳ್ತಂಗಡಿ ಎಪಿಎಂಸಿ ಅಧ್ಯಕ್ಷ ಕೇಶವ ಪಿ.ಬೆಳಾಲು ಮಾತನಾಡಿ, ಬಿಜೆಪಿ ಸರಕಾರವು ತನ್ನ ವೈಫಲ್ಯಗಳನ್ನು ಮುಚ್ಚುವ ದೃಷ್ಟಿಯಿಂದ ಇಂತಹ ಹೀನ ಕೃತ್ಯಗಳನ್ನು ಮಾಡುತ್ತಿದೆ. ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿ ಕಾಂಗ್ರೆಸ್ ನಾಯಕರ ಶಕ್ತಿ ಕುಗ್ಗಿಸುವ ಕೆಲಸ ಮಾಡುತ್ತಿದ್ದಾರೆ. ಆದರೆ ಬಿಜೆಪಿಯು ಇದೇ ರೀತಿ ಮುಂದುವರಿದಲ್ಲಿ ಅದರ ವಿರುದ್ಧ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಜಿ.ಪಂ.ಸದಸ್ಯ ಶೇಖರ ಕುಕ್ಕೇಡಿ, ಮಾಜಿ ಸದಸ್ಯ ಶೈಲೇಶ್‍ಕುಮಾರ್ ಕುರ್ತೋಡಿ, ಬೆಳ್ತಂಗಡಿ ಯುವ ಕಾಂಗ್ರೆಸ್ ಅಭಿನಂದನ್ ಹರೀಶ್, ಕೆಪಿಸಿಸಿ ಮುಂದಾಳು ರಾಮಚಂದ್ರ ಗೌಡ, ತಾ.ಪಂ.ಸದಸ್ಯ ಪ್ರವೀಣ್ ಗೌಡ, ನ.ಪಂ.ಸದಸ್ಯ ಜಗದೀಶ್ ಡಿ., ಪ್ರಮುಖರಾದ ಅನಿಲ್ ಪೈ, ಬಿ.ಕೆ.ವಸಂತ್, ನಾಗರಾಜ್ ಲಾೈಲ, ಚಂದು ಎಲ್., ಅಶ್ರಫ್ ನೆರಿಯ, ನೇಮಿರಾಜ್ ಕಿಲ್ಲೂರು, ಜೆಸಿಂತಾ ಮೋನಿಸ್, ಪ್ರಭಾಕರ ಓಡಿಲ್ನಾಳ, ಸಲೀಂ ಗುರುವಾಯನಕೆರೆ, ಅನೂಪ್ ಪಾಯಸ್, ಅಬ್ದುಲ್ ರಹಿಮಾನ್ ಮೊದಲಾದವರು ಪಾಲ್ಗೊಂಡಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…