ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿವಿಧ ಹೋರಾಟಗಾರರ ಮೇಲೆ ಹಾಕಿರುವ ಎಫ್‌ಐಆರ್‌ಗಳನ್ನು ವಾಪಸ್‌ ಪಡೆಯಲು ನಿರ್ಧಾರ : ಸಿಎಂ ಸಿದ್ದರಾಮಯ್ಯ – Vishwanews24

Featured, ರಾಜ್ಯ ನ್ಯೂಸ್

ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿವಿಧ ಹೋರಾಟಗಾರರ ಮೇಲೆ ಹಾಕಿರುವ ಎಫ್‌ಐಆರ್‌ಗಳನ್ನು ವಾಪಸ್‌ ಪಡೆಯಲು ನಿರ್ಧಾರ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿವಿಧ ಹೋರಾಟಗಾರರ ಮೇಲೆ ಹಾಕಿರುವ ಎಫ್‌ಐಆರ್‌ಗಳನ್ನು ವಾಪಸ್‌ ಪಡೆಯಲು ನಿರ್ಧರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಗೃಹ ಕಚೇರಿ ಕೃಷ್ಣದಲ್ಲಿ ಸುಮಾರು 40 ಕ್ಕೂ ಹೆಚ್ಚು ಮಂದಿ ಸಾಹಿತಿ ಬರಹಗಾರರು ಹಾಗೂ ನಾನಾ ಜನಪರ ಸಂಘಟನೆಗಳ ಮುಖ್ಯಸ್ಥರ ಜತೆಗೆ ನಡೆದ ಸಭೆಯಲ್ಲಿ ಈ ಭರವಸೆ ನೀಡಿದರು.

ಕನ್ನಡಪರ ಹೋರಾಟಗಾರರು, ರೈತರು, ಕಾರ್ಮಿಕರು, ದಲಿತ ಚಳವಳಿಗಳ ಹೋರಾಟಗಾರರು ಮತ್ತು ಸಾಹಿತಿ, ಬರಹಗಾರರ ಮೇಲೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಾಕಿರುವ ಸುಳ್ಳು ಮೊಕದ್ದಮೆಗಳನ್ನು ಹಿಂದಕ್ಕೆ ಪಡೆಯಲಾಗುವುದು. ಅನೈತಿಕ ಪೊಲೀಸ್ ಗಿರಿ, ದ್ವೇಷದ ರಾಜಕಾರಣ, ತೇಜೋವಧೆ ಮಾಡುವ ಟ್ರೋಲ್‌ಗಳು ಮತ್ತು ಸಾಹಿತಿಗಳಿಗೆ ಬೆದರಿಕೆ ಹಾಕುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಈಗಾಗಲೇ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಖಡಕ್ ಸೂಚನೆ ನೀಡಿದ್ದೇನೆ ಎಂದರು.

ಜಿಲ್ಲಾಸ್ಪತ್ರೆಯ ಡಯಾಲಿಸಿಸ್‌ ಕೇಂದ್ರ: ಅವ್ಯವಸ್ಥೆಯ ವಿರುದ್ಧ ರೋಗಿಗಳಿಂದ ಪ್ರತಿಭಟನೆ – Vishwanews24

ದೇಶವನ್ನು ಅಪಾಯದ ಸುಳಿಗೆ ದೂಡುತ್ತಾ , ಈ‌ ಮಣ್ಣಿನ ಬಹುತ್ವವನ್ನು ನಾಶ ಮಾಡುತ್ತಿರುವ ಬಿಜೆಪಿ ಪರಿವಾರದ ವಿರುದ್ಧ ಖಚಿತ ನಿಲುವು ತೆಗೆದುಕೊಂಡು ಸ್ವಯಂಪ್ರೇರಿತವಾಗಿ ಈ ಚುನಾವಣೆಯಲ್ಲಿ ಜನರನ್ನು ಎಚ್ಚರಿಸುವ ಕೆಲಸ ಮಾಡಿದ್ದಕ್ಕಾಗಿ ಸಾಹಿತಿ-ಬರಹಗಾರರಿಗೆ ಅಭಿನಂದನೆ ಸಲ್ಲಿಸಿ ಮೇಲಿನ ಭರವಸೆ ನೀಡಿದರು.

ಮುಖ್ಯಮಂತ್ರಿಗಳ ಭರವಸೆಗಳು.

* ಪಠ್ಯ ಮತ್ತು ಪಾಠಗಳ ಮೂಲಕ ಮಕ್ಕಳ ಮನಸ್ಸನ್ನು ಕಲುಷಿತಗೊಳಿಸಲು ನಡೆಸಿರುವ ಕೃತ್ಯವನ್ನು ಕ್ಷಮಿಸಲು ಸಾಧ್ಯವಿಲ್ಲ. ಶೈಕ್ಷಣಿಕ ವರ್ಷ ಆರಂಭ ಆಗಿರುವುದರಿಂದ ಮಕ್ಕಳ ಶಿಕ್ಷಣಕ್ಕೆ ತೊಂದರೆ ಆಗದಂತೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇವೆ.

* ಕನ್ನಡ ಹೋರಾಟಗಾರರು, ರೈತ-ಕಾರ್ಮಿಕ-ದಲಿತ ಚಳವಳಿಗಳ ಹೋರಾಟಗಾರರು ಮತ್ತು ಸಾಹಿತಿ, ಬರಹಗಾರರ ಮೇಲೆ ಹಾಕಿರುವ ಸುಳ್ಳು ಮೊಕದ್ದಮೆಗಳನ್ನು ಹಿಂದಕ್ಕೆ ಪಡೆಯಲಾಗುವುದು.

* ಹೊಸ ಶಿಕ್ಷಣ ನೀತಿ ಹೆಸರಲ್ಲಿ ಶಿಕ್ಷಣ ಕ್ಷೇತ್ರವನ್ನು ಗಬ್ಬೆಬ್ಬಿಸಲು ಅವಕಾಶ ಕೊಡುವುದಿಲ್ಲ. ಈ ಬಗ್ಗೆ ಮತ್ತೊಮ್ಮೆ ಪ್ರತ್ಯೇಕವಾದ ಸಭೆ ಕರೆದು ಸಮಗ್ರವಾಗಿ ಚರ್ಚಿಸಿ ನಿಷ್ಠುರವಾದ ಮತ್ತು ಖಚಿತವಾದ ತೀರ್ಮಾನಗಳನ್ನು ತೆಗೆದುಕೊಳ್ಳಲಾಗುವುದು.

* ಅನೈತಿಕ ಪೊಲೀಸ್ ಗಿರಿ, ದ್ವೇಷದ ರಾಜಕಾರಣ, ತೇಜೋವಧೆ ಮಾಡುವ ಟ್ರೋಲ್ ಗಳು ಮತ್ತು ಸಾಹಿತಿಗಳಿಗೆ ಬೆದರಿಕೆ ಹಾಕುವವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಈಗಾಗಲೇ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಖಡಕ್ ಸೂಚನೆ ನೀಡಿದ್ದೇನೆ.

* ಉಳಿದಂತೆ ಸಾಹಿತಿ ಬರಹಗಾರರು ನೀಡಿರುವ ಮನವಿ ಪತ್ರದಲ್ಲಿನ ಸಂಗತಿಗಳನ್ನು ಗಂಭೀರವಾಗಿ ಪರಿಗಣಿಸುತ್ತೇನೆ. ಅಗತ್ಯಕ್ಕೆ ತಕ್ಕಂತೆ ನಮ್ಮ ಸರ್ಕಾರ ಕ್ರಮ ಕೈಗೊಳ್ಳಲಿದೆ.

ಉಡುಪಿ: ಆನ್ಲೈನ್ ಮೂಲಕ ಟಾಸ್ಕ್ ಪೂರೈಸಿ ಹಣ ಗಳಿಸುವ ಪಾರ್ಟ್ ಟೈಮ್ ಕೆಲಸದ ಆಮಿಷ – ವ್ಯಕ್ತಿಗೆ 4.87 ಲ.ರೂ. ವಂಚನೆ – Vishwanews24

Leave a Reply