ಬಿಜೆಪಿ ಸರ್ಕಾರದ ವಿರುದ್ಧ ಬೃಹತ್ ಜನಧ್ವನಿ ಜಾಥಾ ಆರಂಭಿಸಿದ ಸಿದ್ದರಾಮಯ್ಯ – ಡಿಕೆಶಿ -Vishwanews24
ಬಿಜೆಪಿ ಸರ್ಕಾರದ ವಿರುದ್ಧ ಬೃಹತ್ ಜನಧ್ವನಿ ಜಾಥಾ ಆರಂಭಿಸಿದ ಸಿದ್ದರಾಮಯ್ಯ – ಡಿಕೆಶಿ -Vishwanews24
ಬೆಂಗಳೂರು: ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆ ಸೇರಿದಂತೆ ಜನಸಾಮಾನ್ಯರಿಗೆ ಹೊರೆಯಾಗುತ್ತಿರುವ ದರ ಏರಿಕೆ ಖಂಡಿಸಿ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಇಂದು ಬೃಹತ್ ಜನಧ್ವನಿ ಜಾಥಾ ನಡೆಸುತ್ತಿದೆ.
ಕೈ ನಾಯಕರು ಕೆಪಿಸಿಸಿ ಕಚೇರಿಯಿಂದ ದೇವನಹಳ್ಳಿ ಕಡೆಗೆ ಬಸ್ನಲ್ಲಿ ಪ್ರಯಾಣ ಬೆಳೆಸಿದ್ದಾರೆ. ಮುಖಂಡರನ್ನ ಕರೆದೊಯ್ಯಲು ಬಂದ ಬಸ್ಗೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಪೂಜೆ ಮಾಡುವ ಮೂಲಕ ಚಾಲನೆ ನೀಡಿದರು.
ಮೂಡುಬಿದಿರೆ : ಆಳ್ವಾಸ್ ವಿದ್ಯಾರ್ಥಿಗೆ 2020-21 ಸಾಲಿನ ಅಕಾಡೆಮಿ ಬಾಲಗೌರವ ಪ್ರಶಸ್ತಿ -Vishwanews24
ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಜನಧ್ವನಿ ಜಾಥಾ ವಾಹನದಲ್ಲಿ ಹೆಗಲ ಮೇಲೆ ನೇಗಿಲನ್ನ ಹೊತ್ತುಕೊಂಡು ಮೆರವಣಿಗೆ ಹೊರಟಿದ್ದಾರೆ.
ಇನ್ನು ದೇವನಹಳ್ಳಿಯಲ್ಲಿ ನಡೆಯಲಿರುವ ಸಮಾವೇಶದಲ್ಲಿ ಮಲ್ಲಿಕಾರ್ಜುನ ಖರ್ಗೆ, ಹೆಚ್.ಕೆ. ಪಾಟೀಲ್, ಜಿ. ಪರಮೇಶ್ವರ್, ಕೆ.ಹೆಚ್. ಮುನಿಯಪ್ಪ, ದಿನೇಶ್ ಗುಂಡೂರಾವ್, ಕೃಷ್ಣ ಭೈರೇಗೌಡ, ಎಸ್.ಆರ್. ಪಾಟೀಲ್, ರಮೇಶ್ ಕುಮಾರ್, ಸೇರಿದಂತೆ ಪ್ರಮುಖ ನಾಯಕರು ಭಾಗಿಯಾಗಲಿದ್ದಾರೆ.
