ಬೆಂಗಳೂರು: ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಸಂವಿಧಾನಕ್ಕೆ ಬೆದರಿಕೆ ಒಡ್ಡುತ್ತಿದ್ದು, ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಲು ಅಲ್ಪಸಂಖ್ಯಾತರು ಒಗ್ಗಟ್ಟಾಗಿ ಕಾಂಗ್ರೆಸ್‌ಗೆ ಬೆಂಬಲ ನೀಡಬೇಕೆಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಕರೆ ನೀಡಿದ್ದಾರೆ.
ನಗರದ ಅರಮನೆ ಮೈದಾನದ ನಲಪಾಡ್ ಪೆವಿಲಿಯನ್ ನಲ್ಲಿ ಮಂಗಳವಾರ ಆಯೋಜಿಸಿದ್ದ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷ ಅಬ್ದುಲ್ ಜಬ್ಬಾರ್ ಅವರ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿರುವ ಅವರು, ಎರಡು ಬಾರಿ ಅಧಿಕಾರಕ್ಕೆ ಬಂದ ಮೋದಿ ದೇಶವನ್ನು ಸರ್ವನಾಶ ಮಾಡಿದ್ದಾರೆ. ಈ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನೇ ಬದಲಿಸಲಿದೆ. ಅವರನ್ನು ಸೋಲಿಸಲು ಮತ್ತು ಸಂವಿಧಾನವನ್ನು ರಕ್ಷಿಸಲು ಅಲ್ಪಸಂಖ್ಯಾತರು ಒಗ್ಗೂಡಬೇಕು. ನಾವು ಕೂಡ ಬಿಜೆಪಿ ವಿರುದ್ಧ ಹೋರಾಡುತ್ತೇವೆ ಮತ್ತು ಅವರನ್ನು ಸೋಲಿಸುತ್ತೇವೆಂದು ಹೇಳಿದ್ದಾರೆ.
ಬಳಿಕ ಕಾಂಗ್ರೆಸ್ ಬೆಂಬಲಕ್ಕೆ ನಿಂತಿರುವ ಸಮುದಾಯವನ್ನು ಶ್ಲಾಘಿಸಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು, ಅಲ್ಪಸಂಖ್ಯಾತರ ಹೆಸರುಗಳನ್ನು ಬಿಜೆಪಿ ಚುನಾವಣಾ ಪಟ್ಟಿಗಳಿಂದ ತೆಗೆದುಹಾಕುವ ಕೆಲಸ ಮಾಡುತ್ತಿದೆ. ಈ ಬಗ್ಗೆ ಸಮುದಾಯದ ಯುವಕರು ಜಾಗೃತರಾಗಿರಬೇಕು ಎಂದು ತಿಳಿಸಿದರು.
ಈ ನಿಟ್ಟಿನಲ್ಲಿ ಸಮಿತಿ ರಚಿಸಲಾಗುತ್ತಿದ್ದು, ಸಮುದಾಯದ ವಿರುದ್ಧದ ಟೀಕೆಗಳಿಗೆ ನೀವು ಚಿಂತಿಸದಿರಿ ನಾವು ನಿಮ್ಮೊಂದಿಗಿದ್ದೇವೆ ಎಂದು ಹೇಳಿದರು.
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…