ಬಿಜೆಪಿ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆಯನ್ನು ಜಾರಿ ಮಾಡಿ: ಮಾಜಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಒತ್ತಾಯ -Vishwanews24
ಬಿಜೆಪಿ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆಯನ್ನು ಜಾರಿ ಮಾಡಿ: ಮಾಜಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಒತ್ತಾಯ -Vishwanews24
ಕಲಬುರಗಿ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದ್ದು, ಪ್ರತಿಪಕ್ಷವಾದ ಕಾಂಗ್ರೆಸ್ ರಾಜ್ಯಾಧ್ಯಕ್ಷರ ಮೇಲೆಯೇ ಗೂಂಡಾಗಿರಿ ಮಾಡುವಷ್ಟು ವ್ಯವಸ್ಥೆ ಕಟ್ಟು ಹೋಗಿದೆ. ಹೀಗಾಗಿ ಈ ಬಿಜೆಪಿ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆಯನ್ನು ಜಾರಿ ಮಾಡಬೇಕೆಂದು ಮಾಜಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಒತ್ತಾಯಿಸಿದರು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವರಾಗಿದ್ದ ಬಿಜೆಪಿ ಮುಖಂಡ ರಮೇಶ ಜಾರಕಿಹೊಳಿ ಸರ್ಕಾರವನ್ನೇ ಬೀಳಿಸಿದವ ನಾನು ಸಿಡಿ ಪ್ರಕರಣವೇನು ಮಹಾ ಎನ್ನುವಂತಹ ಹೇಳಿಕೆ ಕೊಟ್ಟು ಬಹಿರಂಗವಾಗಿ ಕಾನೂನು ವ್ಯವಸ್ಥೆಗೆ ಸವಾಲು ಹಾಕುತ್ತಾರೆ. ಬೆಳಗಾವಿಯಲ್ಲಿ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಮೇಲೆ ಗೂಂಡಾಗಳ ಮೂಲಕ ಹಲ್ಲೆ ಮಾಡಿಸುವ ಕೆಲಸಕ್ಕೆ ಮುಂದಾಗುತ್ತಾರೆ. ಇದನ್ನು ಕಾನೂನು ಸುವ್ಯವಸ್ಥೆ ಎನ್ನಬೇಕಾ ಎಂದು ಖಾರವಾಗಿ ಪ್ರಶ್ನಿಸಿದರು.
ಇದನ್ನೂ ಓದಿ :ಕುಲಪತಿ ಹುದ್ದೆ ಕೊಡಿಸುವುದಾಗಿ ಹಣ ಪಡೆದು ವಂಚನೆ : ರಾಮಸೇನೆಯ ಅಧ್ಯಕ್ಷ ಪ್ರಸಾದ್ ಅತ್ತಾವರ ಬಂಧನ -Vishwanews24
ಸಂತ್ರಸ್ತ ಯುವತಿ ತನಗೆ ರಮೇಶ ಜಾರಕಿಹೊಳಿಯಿಂದ ಜೀವ ಭಯವಿದೆ ಎಂದು ಹೇಳುತ್ತಿದ್ದಾಳೆ. ರಮೇಶ ವಿರುದ್ಧ ಗಂಭೀರವಾದ 376(ಸಿ) ಪ್ರಕರಣ ದಾಖಲಾಗಿದೆ. ಇದೇ ಪ್ರಕರಣ ಬೇರೆಯವರ ಮೇಲೆ ದಾಖಲಾದರೆ ಸುಮ್ಮನೆ ಬಿಡುತ್ತಾರಾ?. ಸ್ವತಃ ಸಂತ್ರಸ್ತೆ ಯುವತಿ ದೂರು ಕೊಟ್ಟರೂ ರಮೇಶ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳುತ್ತಿಲ್ಲ. ಮಾನ ಮರ್ಯಾದೆ ಎಲ್ಲ ಗಾಳಿಗೆ ತೂರಿ ರಮೇಶ ರಕ್ಷಣೆಗೆ ಮಾನಗೇಡಿ ಸರ್ಕಾರ ನಿಂತಿದೆ ಎಂದು ವಾಗ್ದಾಳಿ ನಡೆಸಿದರು.
ಸಿಡಿ ಪ್ರಕರಣದಲ್ಲಿ ಅಧಿಕಾರದ ದುರ್ಬಳಕೆ ಆಗುತ್ತಿದೆ. ಎಸ್‌ಐಟಿ ರಮೇಶ ಜಾರಕಿಹೊಳಿ ಮತ್ತು ಬಿಜೆಪಿ ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ. ಆರೋಪಿ ಸ್ಥಾನದಲ್ಲಿರುವ ರಮೇಶನನ್ನು ಬಂಧಿಸುವುದು ಬಿಟ್ಟು, ಆತನ ಪರವಾಗಿ ಗೃಹ ಸಚಿವರು ಹೇಳಿಕೆ ಕೊಡುತ್ತಿದ್ದಾರೆ. ಇದಕ್ಕಿಂತ ನಾಚಿಕಗೇಡಿತನದ ಸಂಗತಿ ಯಾವುದೂ ಇಲ್ಲ ಎಂದು ಟೀಕಿಸಿದರು.
ಇದನ್ನೂ ಓದಿ :ಅನಾರೋಗ್ಯದ ಹಿನ್ನೆಲೆ ಶರದ್ ಪವಾರ್ ಆಸ್ಪತ್ರೆಗೆ ದಾಖಲು -Vishwanews24
ತನ್ನ ಮೇಲಿನ ಆರೋಪವನ್ನು ಮುಚ್ಚಿಟ್ಟುಕೊಳ್ಳಲು ರಮೇಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮೇಲೆ ಸುಖಾ ಸುಮ್ಮನೆ ಆರೋಪ ಮಾಡುತ್ತಿದ್ದಾರೆ. ಇಡೀ ಪ್ರಕರಣವನ್ನು ಡಿ.ಕೆ. ಶಿವಕುಮಾರ್ ಅತ್ತ ತಿರಗಿಸುವ ಕುತಂತ್ರ ಮಾಡುತ್ತಿದ್ದಾರೆ. ಹೀಗಾಗಿ ತಕ್ಷಣ ರಮೇಶ ಜಾರಕಿಹೊಳಿಯನ್ನು ಬಂಧಿಸುವ ಕೆಲಸ ಮಾಡಬೇಕು. ಈಗಾಗಲೇ ಯುವತಿ ಹೇಳಿರುವಂತೆ ಹೈಕೋರ್ಟ್ ನ ಮುಖ್ಯ ನಾಯಮೂರ್ತಿ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಯಬೇಕೆಂದು ಶರಣಪ್ರಕಾಶ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಶಾಸಕಿ ಕನೀಜ್ ಫಾತೀಮಾ, ವಿಧಾನ ಪರಿಷತ್ ಮಾಜಿ ಸದಸ್ಯರಾದ ಅಲ್ಲಮಪ್ರಭು ಪಾಟೀಲ್, ತಿಪ್ಪಣ್ಣಪ್ಪ ಕಮನಕೂರ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ, ಮುಖಂಡರಾದ ಸುಭಾಷ್ ರಾಠೋಡ್, ಶರಣು ಮೋದಿ ಇದ್ದರು.
ಇದನ್ನೂ ಓದಿ :ಬಿಜೆಪಿ ಮೊದಲ ಹಂತದ ಚುನಾವಣೆಯಲ್ಲಿ ಶೂನ್ಯ ಸಾಧನೆ ಮಾಡಲಿದೆ : ಮಮತಾ ಬ್ಯಾನರ್ಜಿ -Vishwanews24
