Featured

ಬಿಜೆಪಿ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆಯನ್ನು ಜಾರಿ ಮಾಡಿ: ಮಾಜಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಒತ್ತಾಯ -Vishwanews24

ಬಿಜೆಪಿ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆಯನ್ನು ಜಾರಿ ಮಾಡಿ: ಮಾಜಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಒತ್ತಾಯ -Vishwanews24

ಕಲಬುರಗಿ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದ್ದು, ಪ್ರತಿಪಕ್ಷವಾದ ಕಾಂಗ್ರೆಸ್ ರಾಜ್ಯಾಧ್ಯಕ್ಷರ ಮೇಲೆಯೇ ಗೂಂಡಾಗಿರಿ ಮಾಡುವಷ್ಟು ವ್ಯವಸ್ಥೆ ಕಟ್ಟು ಹೋಗಿದೆ. ಹೀಗಾಗಿ ಈ ಬಿಜೆಪಿ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆಯನ್ನು ಜಾರಿ ಮಾಡಬೇಕೆಂದು ಮಾಜಿ ಸಚಿವ ಡಾ.ಶರಣಪ್ರಕಾಶ‌್ ಪಾಟೀಲ್ ಒತ್ತಾಯಿಸಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವರಾಗಿದ್ದ ಬಿಜೆಪಿ ಮುಖಂಡ ರಮೇಶ ಜಾರಕಿಹೊಳಿ ಸರ್ಕಾರವನ್ನೇ ಬೀಳಿಸಿದವ ನಾನು ಸಿಡಿ ಪ್ರಕರಣವೇನು ಮಹಾ ಎನ್ನುವಂತಹ ಹೇಳಿಕೆ ಕೊಟ್ಟು ಬಹಿರಂಗವಾಗಿ ಕಾನೂನು ವ್ಯವಸ್ಥೆಗೆ ಸವಾಲು ಹಾಕುತ್ತಾರೆ. ಬೆಳಗಾವಿಯಲ್ಲಿ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಮೇಲೆ ಗೂಂಡಾಗಳ ಮೂಲಕ‌ ಹಲ್ಲೆ ಮಾಡಿಸುವ ಕೆಲಸಕ್ಕೆ ಮುಂದಾಗುತ್ತಾರೆ. ಇದನ್ನು ಕಾನೂನು ಸುವ್ಯವಸ್ಥೆ ಎನ್ನಬೇಕಾ ಎಂದು ಖಾರವಾಗಿ ಪ್ರಶ್ನಿಸಿದರು.

ಇದನ್ನೂ ಓದಿ :ಕುಲಪತಿ ಹುದ್ದೆ ಕೊಡಿಸುವುದಾಗಿ ಹಣ ಪಡೆದು ವಂಚನೆ : ರಾಮಸೇನೆಯ ಅಧ್ಯಕ್ಷ ಪ್ರಸಾದ್ ಅತ್ತಾವರ ಬಂಧನ -Vishwanews24

ಸಂತ್ರಸ್ತ ಯುವತಿ ತನಗೆ ರಮೇಶ ಜಾರಕಿಹೊಳಿಯಿಂದ ಜೀವ ಭಯವಿದೆ ಎಂದು ಹೇಳುತ್ತಿದ್ದಾಳೆ. ರಮೇಶ ವಿರುದ್ಧ ಗಂಭೀರವಾದ 376(ಸಿ) ಪ್ರಕರಣ ದಾಖಲಾಗಿದೆ. ಇದೇ‌ ಪ್ರಕರಣ ಬೇರೆಯವರ ಮೇಲೆ ದಾಖಲಾದರೆ ಸುಮ್ಮನೆ ಬಿಡುತ್ತಾರಾ?.‌ ಸ್ವತಃ ಸಂತ್ರಸ್ತೆ ಯುವತಿ ದೂರು ಕೊಟ್ಟರೂ ರಮೇಶ ಮೇಲೆ ಕಾನೂನು ಕ್ರಮ‌ ತೆಗೆದುಕೊಳ್ಳುತ್ತಿಲ್ಲ. ಮಾನ‌ ಮರ್ಯಾದೆ ಎಲ್ಲ ಗಾಳಿಗೆ ತೂರಿ ರಮೇಶ ರಕ್ಷಣೆಗೆ ಮಾನಗೇಡಿ ಸರ್ಕಾರ ನಿಂತಿದೆ ಎಂದು ವಾಗ್ದಾಳಿ ನಡೆಸಿದರು.

ಸಿಡಿ ಪ್ರಕರಣದಲ್ಲಿ ಅಧಿಕಾರದ ದುರ್ಬಳಕೆ ಆಗುತ್ತಿದೆ. ಎಸ್‌ಐಟಿ ರಮೇಶ ಜಾರಕಿಹೊಳಿ ಮತ್ತು ಬಿಜೆಪಿ ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ. ಆರೋಪಿ ಸ್ಥಾನದಲ್ಲಿರುವ ರಮೇಶನನ್ನು ಬಂಧಿಸುವುದು ಬಿಟ್ಟು, ಆತನ ಪರವಾಗಿ ಗೃಹ ಸಚಿವರು ಹೇಳಿಕೆ ಕೊಡುತ್ತಿದ್ದಾರೆ‌. ಇದಕ್ಕಿಂತ ನಾಚಿಕಗೇಡಿತನದ ಸಂಗತಿ ಯಾವುದೂ ಇಲ್ಲ ಎಂದು ಟೀಕಿಸಿದರು.

ಇದನ್ನೂ ಓದಿ :ಅನಾರೋಗ್ಯದ ಹಿನ್ನೆಲೆ ಶರದ್ ಪವಾರ್ ಆಸ್ಪತ್ರೆಗೆ ದಾಖಲು -Vishwanews24

ತನ್ನ ಮೇಲಿನ ಆರೋಪವನ್ನು ಮುಚ್ಚಿಟ್ಟುಕೊಳ್ಳಲು ರಮೇಶ ಜಾರಕಿಹೊಳಿ, ಕೆ‌ಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮೇಲೆ ಸುಖಾ ಸುಮ್ಮನೆ ಆರೋಪ ಮಾಡುತ್ತಿದ್ದಾರೆ. ಇಡೀ ಪ್ರಕರಣವನ್ನು ಡಿ.ಕೆ. ಶಿವಕುಮಾರ್ ಅತ್ತ ತಿರಗಿಸುವ ಕುತಂತ್ರ ಮಾಡುತ್ತಿದ್ದಾರೆ. ಹೀಗಾಗಿ ತಕ್ಷಣ ರಮೇಶ ಜಾರಕಿಹೊಳಿಯನ್ನು ಬಂಧಿಸುವ ಕೆಲಸ ಮಾಡಬೇಕು. ಈಗಾಗಲೇ ಯುವತಿ ಹೇಳಿರುವಂತೆ ಹೈಕೋರ್ಟ್ ನ ಮುಖ್ಯ ನಾಯಮೂರ್ತಿ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಯಬೇಕೆಂದು ಶರಣಪ್ರಕಾಶ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಶಾಸಕಿ ಕನೀಜ್ ಫಾತೀಮಾ, ವಿಧಾನ ಪರಿಷತ್ ಮಾಜಿ ಸದಸ್ಯರಾದ ಅಲ್ಲಮಪ್ರಭು ಪಾಟೀಲ್, ತಿಪ್ಪಣ್ಣಪ್ಪ ಕಮನಕೂರ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ, ಮುಖಂಡರಾದ ಸುಭಾಷ್ ರಾಠೋಡ್, ಶರಣು ಮೋದಿ ಇದ್ದರು.

ಇದನ್ನೂ ಓದಿ :ಬಿಜೆಪಿ ಮೊದಲ ಹಂತದ ಚುನಾವಣೆಯಲ್ಲಿ ಶೂನ್ಯ ಸಾಧನೆ ಮಾಡಲಿದೆ : ಮಮತಾ ಬ್ಯಾನರ್ಜಿ -Vishwanews24

Vishwa News 24

Recent Posts

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

1 hour ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

2 hours ago

ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ – vishwanews24

   ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…

2 hours ago

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ ; ಅರ್ಜಿ ಆಹ್ವಾನ – vishwanews24

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…

2 hours ago

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  – vishwanews24

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…

2 hours ago

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

17 hours ago