ಬೆಂಗಳೂರು: ರಾಜ್ಯವನ್ನು ಮತ್ತೊಂದು ಕಾಶ್ಮೀರ ಮಾಡಲು ಬಿಜೆಪಿ ಸರ್ಕಾರ ಹೊರಟಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಆರೋಪಿಸಿದರು.
ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, ಮಂಗಳೂರು ಗಲಭೆಯಲ್ಲಿ ಪೊಲೀಸರ ಪಾತ್ರದ ಕುರಿತ ಸಿ.ಡಿ ಬಿಡುಗಡೆ ಮಾಡಿದರು. ಅಲ್ಲದೆ, ಪ್ರತಿಭಟನಾಕಾರರು ಬಂದರು ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಸಿಸಿ ಟಿವಿ ವಿಡಿಯೊಗಳನ್ನು ಸರ್ಕಾರ ಬಹಿರಂಗಪಡಿಸಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದರು.
ಮಂಗಳೂರಿನಲ್ಲಿ ಸುಪ್ರೀಂ ಕೋರ್ಟ್‌ನ ನಿವೃತ್ತಿ ನ್ಯಾಯಮೂರ್ತಿಯೊಬ್ಬರ ನೇತೃತ್ವದಲ್ಲಿ ನಡೆಯಬೇಕಿದ್ದ ‘ಪೀಪಲ್ಸ್ ಕೋರ್ಟ್’ ಎಂಬ ಚರ್ಚಾ ಕಾರ್ಯಕ್ರಮ ನಡೆಸಲು ಅವಕಾಶ ನಿರಾಕರಿಸಿದ ಸರ್ಕಾರದ ಕ್ರಮವನ್ನು ಪ್ರಬಲವಾಗಿ ವಿರೋಧಿಸಿದರು.
ಉಡುಪಿ ಜಿಲ್ಲಾಧಿಕಾರಿಯ ಮ್ಯಾಜಿಸ್ಟ್ರೇಟ್ ತನಿಖೆಯಿಂದ ಏನು ವರದಿ ಬರಲು ಸಾಧ್ಯ ಎಂದು ಅವರು ಪ್ರಶ್ನಿಸಿದರು.
ಗಲಭೆಕೋರರು ಕೇರಳದಿಂದ ಬಂದವರು ಎಂದು ಗೃಹ ಸಚಿವರು ಹೇಳುತ್ತಾರೆ, ಪೊಲೀಸರು ನಿತ್ಯವೂ ಒಂದೊಂದು ಕತೆ ಕಟ್ಟುತ್ತಿದ್ದಾರೆ. ಡಿಸೆಂಬರ್ 24 ರಂದು ಪ್ರತಿಭಟನಾಕಾರರು ಕಲ್ಲುಗಳನ್ನು ತಂದ ಬಗ್ಗೆ ಕತೆ ಕಟ್ಟಿದರು. ಆದರೆ ನಿಜವಾಗಿ ಅಲ್ಲಿ ಆಗಿರುವುದೇ ಬೇರೆ. ಮೂರು ಬಾರಿ ಕಟ್ಟಡ ತ್ಯಾಜ್ಯ ಸಾಗಿಸಿದ್ದ ಸರಕು ಸಾಗಾಣೆ ಟೆಂಪೊ ಚಾಲಕ, ನಾಲ್ಕನೇ ಬಾರಿ ಬರುವಾಗ ಗಲಭೆ ಉಂಟಾದ ಕಾರಣ ತನ್ನ ಆಟೊವನ್ನು ರಸ್ತೆ ಬದಿಯಲ್ಲಿ ಬಿಟ್ಟು ಹೋಗಿದ್ದ. ಆದರೆ ಅದನ್ನೇ ಕತೆ ಕಟ್ಟಿ ಕಲ್ಲು ತಂದು ಇಡಲಾಗಿದೆ ಎಂದು ಬಿಂಬಿಸುವ ಪ್ರಯತ್ನ ನಡೆದಿದೆ ಎಂದು ಆರೋಪಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…