ಬೆಂಗಳೂರು: ರಾಜ್ಯದ ಜನರನ್ನು ಲೂಟಿ ಮಾಡುವ ಸಲುವಾಗಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದು, ಇನ್ನು ಎರಡು ತಿಂಗಳಿಗೂ ಹೆಚ್ಚು ಕಾಲ ಅಧಿಕಾರ ನಡೆಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ,ಕುಮಾರಸ್ವಾಮಿಯವರು ಮಂಗಳವಾರ ಹೇಳಿದ್ದಾರೆ.
ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ ರ್ಯಾಲಿಯಲ್ಲಿ ಮಾತನಾಡಿರುವ ಅವರು, ಬಿ.ಎಸ್.ಯಡಿಯೂರಪ್ಪ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ.
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ಜನರ ಬಳಿ ನೂರಾರು ಕೋಟಿ ಲೂಟಿ ಮಾಡುತ್ತಿದೆ. ತಮ್ಮ ಅಧಿಕಾರ ಉಳಿಸಿಕೊಳ್ಳುವ ಸಲುವಾಗಿ ಬಿಜೆಪಿ ಆಯುಕ್ತ ಜಿ.ಸಿ ಪ್ರಕಾಶ್ ಅವರು ಬಿಜೆಪಿಗೆ ಲಂಚ ನೀಡಿದ್ದಾರೆ. ಲಂಚ ನೀಡಲು ಬಂದಿದ್ದವರನ್ನು ನಾನು ಕಿತ್ತೆಸೆದಿದ್ದೆ. ಆದರೆ, ಅವರನ್ನೇ ಮತ್ತೆ ಅದೇ ಸ್ಥಾನಕ್ಕೆ ನಿಯೋಜನೆಗೊಳಿಸಿದ್ದಾರೆಂದು ಹೇಳಿದ್ದಾರೆ.
ನಾನು ಅಧಿಕಾರಾವಧಿಯಲ್ಲಿ ಕೈಗೊಳ್ಳಲಾಗಿದ್ದ ಎಲ್ಲಾ ಕಾರ್ಯಗಳನ್ನು ಸ್ಥಗಿತಗೊಳಿಸಲಾಗಿದೆ. ಹಿಂದೆಂದೂ ಕಂಡಿರದ ಬೆಳವಣಿಗೆಗಳು ರಾಜ್ಯದಲ್ಲಾಗುತ್ತಿವೆ. ಮೈತ್ರಿ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ವಿಧಾನಸಭೆಯಲ್ಲಿ ಕೈಗೊಂಡಿದ್ದ ನಿರ್ಧಾರಗಳನ್ನೇ ರದ್ದು ಕೊಂಡಿಸಿದ್ದಾರೆ? ಇದರ ಅರ್ಥವೇನು? ಕರ್ನಾಟಕ ಇತಿಹಾಸದಲ್ಲಿಯೇ ಈ ರೀತಿ ಆಗಿಲ್ಲ ಎಂದು ತಿಳಿಸಿದ್ದಾರೆ.
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…