ಮಂಗಳೂರು: ಎಸ್ಡಿಪಿಐ ಕೂಡ ಬ್ಯಾನ್ ಮಾಡಲು ಚಿಂತನೆ ನಡೆಸ್ತಿದ್ದಾರೆ. ಬಿಜೆಪಿ ಸರ್ಕಾರ ನಮ್ಮನ್ನ ಹತ್ತಿಕ್ಕುವ ಪ್ರಯತ್ನ ಮಾಡುತ್ತಿದೆ ಎಂದು ಬೆಂಗಳೂರಿನಲ್ಲಿ SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಕಿಡಿಕಾರಿದ್ದಾರೆ.
SDPI ನಾಯಕರ ಮೇಲೆ ಸುಳ್ಳು ಕೇಸ್ ಹಾಗೂ ಬಂಧನ ಮಾಡಿದ್ದಾರೆ ಎಂದು ಆರೋಪಿಸಿ ಬೆಂಗಳೂರಿನ SDPI ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್, ಪಿಎಫ್ಐ ಮಾದರಿ ಎಸ್ಡಿಪಿಐ ಕೂಡ ಬ್ಯಾನ್ ಮಾಡುತ್ತಾರೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಸರ್ಕಾರ ಪೊಲೀಸರನ್ನ ಬಳಸಿಕೊಂಡು ನಮ್ಮನ್ನ ಹತ್ತಿಕ್ಕುವ ಪ್ರಯತ್ನ ಮಾಡ್ತಿದೆ. ಎಸ್ಡಿಪಿಐ ನೋಂದಾಯಿತ ರಾಜಕೀಯ ಪಕ್ಷ. 13 ವರ್ಷಗಳಿಂದ ಆಯೋಗಕ್ಕೆ ದಾಖಲೆ ನೀಡುತ್ತ ಬಂದಿದೆ. PFI ಬ್ಯಾನ್ ಬಳಿಕ SDPI ನಿಷೇಧಿಸುವ ಚಿಂತನೆ ನಡೆದಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದು ಸರ್ವಾಧಿಕಾರಿ ಧೋರಣೆ ಎಂದು SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿರುವ ಎಸ್ಡಿಪಿಐನ 2 ಕಚೇರಿಗೆ ನುಗ್ಗಿದ್ದಾರೆ. ಬಿಜೆಪಿ ಸರ್ಕಾರಕ್ಕೆ ನಾವು ಎಚ್ಚರಿಕೆಯನ್ನು ಕೊಡುತ್ತೇವೆ. ನಾವು ನಿಮ್ಮ ಕಿರುಕುಳದಿಂದ ಹಿಂದೆ ಸರಿಯುವುದಿಲ್ಲ. ಸೈದ್ಧಾಂತಿಕವಾಗಿ ಎದುರಿಸಿ, ಖಾಕಿ ಬಿಟ್ಟು ಹೆದರಿಸೋದಲ್ಲ ಎಂದಿದ್ದಾರೆ.
ಸುದ್ದಿಗೋಷ್ಠಿಯಲ್ಲಿ SDPI ನ ರಾಜ್ಯ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ ಭಾಸ್ಕರ್ ಪ್ರಸಾದ್ ಸೇರಿ ಕೆಲ SDPI ಮುಖಂಡರು ಭಾಗಿಯಾಗಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…