ಉಡುಪಿ: ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಗಳ ಬೆಲೆ ಕಡಿಮೆ ಇದ್ದರೂ ದೇಶದಲ್ಲಿ ಅನಿಯಂತ್ರಿತವಾಗಿ ಏರಿಕೆಯಾಗುತ್ತಿರುವ ಪೆಟ್ರೋಲ್ ಡಿಸೇಲ್ ದರವನ್ನು ನಿಯಂತ್ರಿಸಲು ಆಗದೇ ಪರದಾಡುತ್ತಿರುವ ಬಿಜೆಪಿ ನೇತೃತ್ವದ ಸರ್ಕಾರ, ಹೇಗೆ ಆಡಳಿತ ನಡೆಸುತ್ತಿದೆ ಎನ್ನುವುದಕ್ಕೆ ಇದೊಂದು ಸ್ಪಷ್ಟ ನಿದರ್ಶನವಾಗಿದೆ ಎಂದು ನಗರಸಭಾ ಸದಸ್ಯ, ಕಾಂಗ್ರೆಸ್ ಮುಖಂಡ ರಮೇಶ್ ಕಾಂಚನ್ ಟೀಕಿಸಿದ್ದಾರೆ.
ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಇದ್ಯಾಗ ಪೆಟ್ರೋಲ್, ಡಿಸೇಲ್ ಬೆಲೆ ಈ ರೀತಿ ಏರಿಕೆಯಾಗಿರಲಿಲ್ಲ.ಒಂದೊಮ್ಮೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಏರಿಕೆಯಾದರೂ ದೇಶದಲ್ಲಿ ಜನರಿಗೆ ಹೊರೆಯಾಗದ ರೀತಿಯಲ್ಲಿ ಸ್ವಲ್ಪ ಬೆಲೆ ಏರಿಕೆ ಮಾಡಲಾಗುತ್ತಿತ್ತು. ಆದ್ರೆ ಇದನ್ನೇ ನೆಪವಾಗಿಟ್ಟುಕೊಂಡು ಬಿಜೆಪಿ ಪಕ್ಷ ಬೀದಿಗಿಳಿದು ಪ್ರತಿಭಟನೆ ನಡೆಸಿತ್ತು.
ಇದೀಗ ದಿನಂಪ್ರತಿ ಬೆಲೆ ಏರಿಕೆಯಾಗುತ್ತಿದ್ದರೂ ಬಿಜೆಪಿ ಪಕ್ಷದ ನಾಯಕರೆಲ್ಲಾ ಕಣ್ಮರೆಯಾಗಿದ್ದಾರೆ. ಇದೀಗ ಯಾವುದೇ ಪ್ರತಿಭಟನೆಯ ಸುದ್ದಿ ಇಲ್ಲ..ಅಂದು ಪೆಟ್ರೋಲ್ , ಡಿಸೇಲ್ ಗಾಗಿ ಪ್ರತಿಭಟಿಸಿ ಪೌರುಷ ತೋರಿಸಿದವರು ಬಾಯಿಮುಚ್ಚಿಕೊಂಡಿದ್ದಾರೆ. ಕೇಂದ್ರದಲ್ಲಿ ಬೆಲೆ ಏರಿಕೆಯಾದರೆ ರಾಜ್ಯದಲ್ಲಿ ಬೆಲೆ ಏರಿಕೆಯ ಜೊತೆಗೆ ತೆರಿಗೆ ಹೆಚ್ಚಳ ಮೂಲಕ ಡಬಲ್ ಶಾಕ್ ಟ್ರಿಟೆಂಟ್ ಸರಕಾರ ನೀಡಿದೆ.ಒಟ್ಟಾರೆಯಾಗಿ ಬಿಜೆಪಿ ಸರ್ಕಾರ ಭಾರತ ಬೆಳಗುತ್ತಿದೆ ಎನ್ನುತ್ತಿದೆ ಆದ್ರೆ ಜನತೆ ಕತ್ತಲೆಯಲ್ಲಿದ್ದಾರೆ ಎಂದು ರಮೇಶ್ ಕಾಂಚನ್ ಟೀಕಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…