ಬೆಂಗಳೂರು: “ಗಾಂಧೀಜಿಯವರ ಹಾಗೂ ಕಾಂಗ್ರೆಸ್ ಪಕ್ಷದ ಸಿದ್ಧಾಂತ ಒಂದೇ ಆಗಿದೆ. ಆದರೆ ಬಿಜೆಪಿ ಸಿದ್ಧಾಂತ ಬೇರೆ. ಹೀಗಿದ್ದರೂ ಬಿಜೆಪಿಯವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಬೇಕಾದರೆ ಗಾಂಧಿ ಪ್ರತಿಮೆ ಮುಂದೆಯೇ ನಿಲ್ಲಬೇಕು. ಇನ್ನು ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡಿಕೊಂಡೇ ಬಿಜೆಪಿ ತಮ್ಮ ಪಕ್ಷವನ್ನು ಕಟ್ಟಿಕೊಳ್ಳುತ್ತಿದೆ. ಆ ಮೂಲಕ ಬಿಜೆಪಿ ಸೇರಿದಂತೆ ಇಡೀ ದೇಶಕ್ಕೆ ಗಾಂಧೀಜಿ ಹಾಗೂ ಕಾಂಗ್ರೆಸ್ ಆಸರೆಯಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ನಡೆದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು.
“ನಾವು ಕೊಟ್ಟಿರುವ ಗ್ಯಾರಂಟಿ ಹಾಗೂ ರಾಷ್ಟ ಮಟ್ಟದ ಯೋಜನೆಗಳನ್ನು ಸಂವಿಧಾನದ ಮೂಲಕ ಜನರಿಗೆ ನೀಡಿದ್ದು, ಇವುಗಳನ್ನು ಬಿಜೆಪಿಯವರಾಗಲಿ, ದಳದವರಾಗಲಿ ಬದಲಾವಣೆ ಮಾಡಲು ಸಾಧ್ಯವಾಗಿಲ್ಲ. ಆಧಾರ್ ಯೋಜನೆಯನ್ನೇ ತೆಗೆದುಕೊಳ್ಳಿ. ಆರಂಭದಲ್ಲಿ ಬಿಜೆಪಿಯವರು ಸಾಕಷ್ಟು ಟೀಕೆ ಟಿಪ್ಪಣಿ ಮಾಡಿದರು. ಆದರೆ ಈಗ ಆಧಾರ್ ಅಲ್ಲದಿದ್ದರೆ ವ್ಯಕ್ತಿಯ ಗುರುತು ಇಲ್ಲದಂತಾಗಿದೆ. ಇದು ಕಾಂಗ್ರೆಸ್ ಪಕ್ಷದ ಯೋಜನೆ. ಆಹಾರ ಭದ್ರತೆ, ಉದ್ಯೋಗ ಖಾತ್ರಿ, ಶೈಕ್ಷಣಿಕ ಹಕ್ಕುಗಳನ್ನು ಕಾಂಗ್ರೆಸ್ ಕೊಟ್ಟಿದೆ” ಎಂದು ತಿಳಿಸಿದರು.
“ಮಹಾತ್ಮಾ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಮತ್ತು ವಿಜಯದಶಮಿ ದಿನ ಆಚರಿಸುತ್ತಿದ್ದೇವೆ. ಕಳೆದ ವರ್ಷದಿಂದ ನಾವು ಗಾಂಧಿ ಭಾರತ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದೇವೆ. ಮಹಾತ್ಮ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿ ನೂರು ವರ್ಷ ಪೂರ್ಣಗೊಂಡಿದೆ. ಈ ಹೋರಾಟದಿಂದ ಸ್ವಾತಂತ್ರ್ಯ ಪಡೆದು ಆ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಗೆ ತರಲಾಗಿದೆ” ಎಂದು ತಿಳಿಸಿದರು.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…