ಬಿಜೆಪಿ ಸೇರಿದ ಸಿದ್ದರಾಮಯ್ಯ! ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಘೋಷಣೆ!

Featured, ರಾಜ್ಯ ನ್ಯೂಸ್

ಬೆಂಗಳೂರು: ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಸಿದ್ದರಾಮಯ್ಯ ಅವರು ಬಿಜೆಪಿ ಸೇರಿದ್ದಾರೆ. ಬಿಜೆಪಿ ಸೇರಿದ ಕ್ಷಣ ಮಾತ್ರದಲ್ಲೆ ಅವರನ್ನು ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ.

ನಿವೃತ್ತ ಐಆರ್‌ಎಸ್ ಅಧಿಕಾರಿ ಡಾ, ಸಿದ್ದರಾಮಯ್ಯ. ಇಂದು ಅಧಿಕೃತವಾಗಿ ಬಿಜೆಪಿ ಸೇರಿದ್ದಾರೆ. ಬಿಜೆಪಿ ಸೇರಿದ ಬೆನ್ನಲ್ಲೆ ಅವರನ್ನು ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂದು ಬಿಜೆಪಿ ಘೋಷಿಸಿದೆ.

ಶಿವಮೊಗ್ಗದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​. ಯಡಿಯೂರಪ್ಪ ಮಂಡ್ಯ ಲೋಕಸಭೆ ಕ್ಷೇತ್ರಕ್ಕೆ ಡಾ. ಸಿದ್ದರಾಮಯ್ಯ ಎಂಬುವವರನ್ನು ಅಭ್ಯರ್ಥಿಯಾಗಿ ಘೋಷಿಸಿದ್ದಾರೆ. ಡಾ. ಸಿದ್ದರಾಮಯ್ಯ ನಿವೃತ್ತ ಸರ್ಕಾರಿ ಅಧಿಕಾರಿಯಾಗಿದ್ದು, ಬಿಜೆಪಿ ಪಾಳಯದಲ್ಲಿ ಗುರುತಿಸಿಕೊಂಡಿದ್ದರು. ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಡಾ. ಸಿದ್ದರಾಮಯ್ಯ ದಶಕಗಳ ಕಾಲ ಕೆಲಸ ನಿರ್ವಹಿಸಿ ನಿವೃತ್ತಿ ಹೊಂದಿದ್ದಾರೆ.

ಡಾ. ಸಿದ್ದರಾಮಯ್ಯ ಅವರ ತಂದೆ ಎರಡು ಬಾರಿ ಮಂಡ್ಯ ಮತ್ತು ಶ್ರೀರಂಗಪಟ್ಟಣದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ ಎಂದು ಬಿಎಸ್‌ವೈ ಹೇಳಿದ್ದಾರೆ.