ಬಿಜೆಪಿ ಹಾಗೂ ಅವರ ಅಧಿಕಾರ ಯಾವುದೂ ಶಾಶ್ವತವಲ್ಲ : ಡಿ.ಕೆ.ಶಿ – vishwanews24
ಬಿಜೆಪಿ ಪಕ್ಷ ಇನ್ನೆಷ್ಟು ದಿನ ಇರುತ್ತದೆ? ಎಲ್ಲದಕ್ಕೂ ಕೊನೆ ಎಂಬುದು ಇರಲೇಬೇಕಲ್ಲವೇ? : ಡಿ.ಕೆ.ಶಿ
ಬೆಂಗಳೂರು: ಮಹಾತ್ಮ ಗಾಂಧೀಜಿ ಅವರ ಹೆಸರನ್ನು ಈ ದೇಶದ ಇತಿಹಾಸದಿಂದ ಅಳಿಸಿಹಾಕಲು ಯಾರಿಗೂ ಸಾಧ್ಯವಿಲ್ಲ. ಬಿಜೆಪಿ ಹಾಗೂ ಅವರ ಅಧಿಕಾರ ಯಾವುದೂ ಶಾಶ್ವತವಲ್ಲ. ಆ ಪಕ್ಷ ಇನ್ನೆಷ್ಟು ದಿನ ಇರುತ್ತದೆ? ಎಲ್ಲದಕ್ಕೂ ಕೊನೆ ಎಂಬುದು ಇರಲೇಬೇಕಲ್ಲವೇ? ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಎಂತೆಂಥಹ ಚಕ್ರವರ್ತಿಗಳೇ ಮೂಲೆಗುಂಪಾಗಿ ಹೋಗಿದ್ದಾರೆ. ಅಲೆಗ್ಸಾಂಡರ್ ದಿ ಗ್ರೇಟ್ ಇಡೀ ಪ್ರಪಂಚದ ಮುಕ್ಕಾಲು ಪಾಲು ಗೆದ್ದವರೇ ಶಾಶ್ವತವಲ್ಲ. ಸದ್ದಾಂ ಹುಸೇನ್ ಕೊನೆಗಾಲದಲ್ಲಿ ಅವಿತುಕೊಳ್ಳಬೇಕಾಯಿತು. ಇನ್ನು ಬೇರೆಯವರದ್ದು ಯಾವ ಲೆಕ್ಕ ಮನ್ರೇಗಾ ಹೆಸರು ಬದಲಾವಣೆ ವಿರೋಧಿಸಿ 2026ರ ಜನವರಿ 5ನೇ ತಾರೀಖಿನಿಂದ ಹೊಸ ಹೋರಾಟ ರೂಪಿಸಲಾಗುವುದು. ಪಂಚಾಯತಿ ಮಟ್ಟದಿಂದ ಈ ಹೋರಾಟ ಆರಂಭಿಸಲಾಗುವುದು” ಎಂದು ಹೇಳಿದ್ದಾರೆ.
ಮಣಿಪಾಲ: ಓದುವಂತೆ ಬುದ್ದಿ ಹೇಳಿದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ – vishwanews24
“ಗ್ಯಾರಂಟಿ ಸಮಿತಿ ಸದಸ್ಯರು, ಬೆಸ್ಕಾಂ, ಆರೋಗ್ಯ ಸಮಿತಿ ಸೇರಿದಂತೆ ಇತರೇ ಇಲಾಖೆಗಳಿಂದ ನಾಮನಿರ್ದೇಶನ ಮಾಡಿರುವ ಸದಸ್ಯರ ಸಂಖ್ಯೆಯೇ 150-200 ಇದ್ದು, ಇವರೆಲ್ಲರೂ ಹೋರಾಟದ ಜವಾಬ್ದಾರಿ ತೆಗೆದುಕೊಳ್ಳಬೇಕು” ಎಂದು ತಿಳಿಸಿದರು.
“ಎರಡು – ಮೂರು ತಿಂಗಳಿನಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗಳನ್ನು ನಡೆಸಬೇಕಿದೆ. ಅದಕ್ಕೂ ಈಗಿನಿಂದಲೇ ತಯಾರಿ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದ್ದೇನೆ. ಪ್ರಿಯಾಂಕ್ ಖರ್ಗೆ ಅವರಿಗೂ ಇದರ ಬಗ್ಗೆ ತಿಳಿಸಿದ್ದು, ಮೀಸಲಾತಿ ವಿಚಾರವಾಗಿ ನ್ಯಾಯಾಲಯಗಳಲ್ಲಿ ಇರುವ ಕಂಟಕಗಳನ್ನು ಬಗೆಹರಿಸಿ ಇನ್ನೆರಡು ತಿಂಗಳಲ್ಲಿ ಚುನಾವಣೆ ನಡೆಸಲು ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಿಳಿಸಲಾಗಿದೆ” ಎಂದರು.
ಮಂಗಳೂರು : ಕರಿಮಣಿ ಸರ ಕಸಿದು ಪರಾರಿಯಾಗಿದ್ದ ಆರೋಪಿ ಸೆರೆ – vishwanews24
