ಬೆಂಗಳೂರು: ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಮೂಲಕ ವಶಪಡಿಸಿಕೊಂಡ ಬಿಟ್‌ಕಾಯಿನ್‌ಗಳನ್ನು ಅಕ್ರಮವಾಗಿ ವರ್ಗಾವಣೆ ಮಾಡಿರುವ ಹಗರಣದ ಕುರಿತು ಸುಪ್ರೀಂಕೋರ್ಟ್‌ನ ಹಾಲಿ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಆಗ್ರಹಿಸಿದರು.
ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಸರ್ಕಾರ ನಡೆಸುವ ತನಿಖೆಯಿಂದ ಸತ್ಯಾಂಶ ಹೊರಬರುವುದಿಲ್ಲ. ಹಗರಣದಲ್ಲಿ ಪೊಲೀಸರು, ಸರ್ಕಾರದ ಉನ್ನತ ಸ್ಥಾನದಲ್ಲಿರುವವರು ಸೇರಿದಂತೆ ಹಲವರು ಶಾಮೀಲಾಗಿದ್ದಾರೆ. ಆದ್ದರಿಂದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ನೇತೃತ್ವದಲ್ಲೇ ತನಿಖೆ ನಡೆಸಬೇಕು’ ಎಂದರು.
ಸತ್ಯಾಂಶ ಹೊರಬಂದ ಬಳಿಕ ಮುಂದಿನ ಕ್ರಮ ಆಗುತ್ತದೆ. ಮೂರನೇ ಮುಖ್ಯಮಂತ್ರಿ ಯಾರಾದರೂ ಆಗಲಿ. ಆ ಬಗ್ಗೆ ತಾವೇನೂ ಹೇಳುವುದಿಲ್ಲ. ಮಾಜಿ ಗೃಹ ಸಚಿವರೂ ಆಗಿರುವ ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಎಲ್ಲವೂ ಗೊತ್ತಿದೆ. ಅವರೇ ಜನರ ಎದುರು ಸತ್ಯ ಹೇಳಲಿ ಎಂದು ಒತ್ತಾಯಿಸಿದರು.
ಪೊಲೀಸರ ವಶದಲ್ಲಿದ್ದಾಗ ತನಗೆ ಡ್ರಗ್ಸ್ ನೀಡಲಾಗಿತ್ತು ಎಂಬುದನ್ನು ಶ್ರೀಕಿ ನ್ಯಾಯಾಲಯಕ್ಕೆ ತಿಳಿಸಿದ್ದಾನೆ. ಆ ಬಗ್ಗೆ ಸರಿಯಾದ ವೈದ್ಯಕೀಯ ಪರೀಕ್ಷೆಯೇ ನಡೆದಿಲ್ಲ. ಈ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯಕ್ಕೆ ಮಾಹಿತಿ ನೀಡುವಲ್ಲೂ ಪೊಲೀಸರು ವಿಳಂಬ ಮಾಡಿದ್ದಾರೆ. ಇದೆಲ್ಲವೂ ಅಕ್ರಮ ನಡೆದಿರುವ ಸುಳಿವು ನೀಡುತ್ತವೆ ಎಂದು ಹೇಳಿದರು.
ರಾಜ್ಯ ಸರ್ಕಾರ ತಕ್ಷಣವೇ ಪ್ರಕರಣವನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆಗೆ ವಹಿಸಬೇಕು. ಇಲ್ಲವಾದಲ್ಲಿ ಕಾಂಗ್ರೆಸ್ ಪಕ್ಷದಿಂದ ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಹೂಡಲಾಗುವುದು ಎಂದರು
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…