ಬೆಂಗಳೂರು: ಬಿಟ್ ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇ.ಡಿ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.
ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಇ.ಡಿ (ED) ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಕೆಲ ತಿಂಗಳ ಹಿಂದೆ ಪ್ರಕರಣ ದಾಖಲಿಸಿಕೊಂಡು ಹಲವು ಆರೋಪಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದರು.
ಇದನ್ನೂ ಓದಿ:
ಈ ಪ್ರಕರಣದಲ್ಲಿ ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಹಾಗೂ ಸುಖೇಶ್ ಹೆಗ್ಡೆ ಅವರನ್ನು ಇ.ಡಿ ಅಧಿಕಾರಿಗಳು ಬಂಧಿಸಿದ್ದರು. ಕಾಂಗ್ರೆಸ್ ಯುವ ನಾಯಕ ಮೊಹಮ್ಮದ್ ನಲಪಾಡ್, ಶ್ರೀಕಿ, ರಾಬಿನ್ ಖಂಡೇವಾಲ ಹಾಗೂ ಸುಖೇಶ್ ಹೆಗ್ಡೆ ಅವರ ನಿವಾಸಗಳ ಮೇಲೂ ಇ.ಡಿ ದಾಳಿ ನಡೆಸಿತ್ತು.
ತನಿಖೆ ಪೂರ್ಣಗೊಳಿಸಿದ ಬಳಿಕ ಮೊಹಮ್ಮದ್ ನಲಪಾಡ್ ಸೇರಿದಂತೆ ಆರೋಪಿಗಳ ವಿರುದ್ಧ ಇ.ಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದ್ದರು. ಚಾರ್ಜ್ಶೀಟ್ ಸಲ್ಲಿಕೆಯ ಕೆಲ ದಿನಗಳ ಬಳಿಕ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಕೋರಿ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಿದ್ದರು.
ಇದನ್ನೂ ಓದಿ:
ಜಾಮೀನು ಅರ್ಜಿಗಳಿಗೆ ಇ.ಡಿ ಪರ ವಿಶೇಷ ಸರ್ಕಾರಿ ಅಭಿಯೋಜಕ ಮಧು ಆರ್.ರಾವ್ ಆಕ್ಷೇಪಣೆ ಸಲ್ಲಿಸಿದ್ದರು. ಆರೋಪಿಗಳಿಗೆ ಜಾಮೀನು ನೀಡಬಾರದು ಎಂದು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು. ಇದನ್ನೂ ಓದಿ: ರಾತ್ರಿ ಹೊತ್ತು ಗ್ರಾಮಕ್ಕೆ ನುಗ್ಗಿ ಕುರಿ, ನಾಯಿ ಹೊತ್ತೊಯ್ಯುತ್ತಿದ್ದ ಚಿರತೆ ಸೆರೆ; ನಿಟ್ಟುಸಿರು ಬಿಟ್ಟ ಜನ
ವಾದ-ಪ್ರತಿವಾದ ಆಲಿಸಿದ ಇ.ಡಿ ವಿಶೇಷ ನ್ಯಾಯಾಲಯ ಇದೀಗ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಅವರ ಜಾಮೀನು ಅರ್ಜಿಗಳನ್ನು ವಜಾಗೊಳಿಸಿದೆ
ಮಂಗಳೂರು: ಯಕ್ಷಗಾನದಲ್ಲಿ ಧಾರ್ಮಿಕ ಸೌಹಾರ್ದದ ಅನಾವರಣ; ಶ್ರೀದೇವಿಯ ವೇಷದಲ್ಲಿ ಕಂಗೊಳಿಸಿದ ಮುಸ್ಲಿಂ ಯುವತಿ ಮಂಗಳೂರು: ಕರಾವಳಿಯ ಗಂಡುಕಲೆ ಯಕ್ಷಗಾನದಲ್ಲಿ ಧಾರ್ಮಿಕ…
ಟೈಗರ್ ಶ್ರಾಫ್ ಕಾರಿನ ಮೇಲೆ ದಾಳಿ ಪ್ರಕರಣ : ಇಬ್ಬರು ಮಹಿಳೆಯರು ಸೇರಿ ಮತ್ತೆ ನಾಲ್ವರ ಬಂಧನ ಮುಂಬೈ: ಬಾಲಿವುಡ್…
ಬೆಂಗಳೂರು – ಮುಂಬೈ ಬಹುನಿರೀಕ್ಷಿತ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ದಿನಾಂಕ ನಿಗದಿ ..! ಬೆಂಗಳೂರು:ಬೆಂಗಳೂರು ಮತ್ತು ಮುಂಬೈ…
ಮಂಗಳೂರು: ಬೋಳಿಯಾರ್ ಅಪಘಾತ ಪ್ರಕರಣಕ್ಕೆ ತಿರುವು ; ಪಿಕಪ್ ಚಾಲಕನ ವಿರುದ್ಧ ಕೊಲೆ ಪ್ರಕರಣ ದಾಖಲು ಮಂಗಳೂರು: ಸೋಮವಾರ ಬೋಳಿಯಾರ್…
ಬಂಟ್ವಾಳ : ವೇಷ ಧರಿಸಿ ಸಂಗ್ರಹಿಸಿದ ಹಣದಿಂದ ಅಸ್ವಸ್ಥ ಯುವಕನಿಗೆ ನೆರವು ; ಪುಟಾಣಿಗಳ ಮಾನವೀಯ ಕಾರ್ಯಕ್ಕೆ ಭಾರೀ ಮೆಚ್ಚುಗೆ…
ಮಕ್ಕಳ ಕೈಗೆ ಮೋಟಾರು ವಾಹನಗಳನ್ನು ನೀಡುವುದಕ್ಕೆ ಅದು ಆಟಿಕೆಯಲ್ಲ , ಸಾರ್ವಜನಿಕ ರಸ್ತೆಗಳು ಆಟದ ಮೈದಾನವಲ್ಲ : ಕರ್ನಾಟಕ ಹೈಕೋರ್ಟ್…