Featured

ಬಿಡಿಎ ಕಚೇರಿಯ 25 ಭ್ರಷ್ಟ ಅಧಿಕಾರಿಗಳ‌ ಮೇಲೆ ಎಫ್​ಐಆರ್ ದಾಖಲಿಸಲು ರಾಜ್ಯ ಸರ್ಕಾರದ ಅನುಮತಿ – Vishwanews24

ಬಿಡಿಎ ಕಚೇರಿಯ 25 ಭ್ರಷ್ಟ ಅಧಿಕಾರಿಗಳ‌ ಮೇಲೆ ಎಫ್​ಐಆರ್ ದಾಖಲಿಸಲು ರಾಜ್ಯ ಸರ್ಕಾರದ ಅನುಮತಿ – Vishwanews24

ಬೆಂಗಳೂರು : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಮೇಲೆ ಇತ್ತೀಚೆಗೆ ನಡೆದಿದ್ದ ಎಸಿಬಿ ದಾಳಿಯನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ಭ್ರಷ್ಟ ಅಧಿಕಾರಿಗಳ ಮೇಲೆ ಎಫ್‌ಐಆರ್ ದಾಖಲಿಸಲು ಕೊನೆಗೂ ಅನುಮತಿ ನೀಡಿದೆ.

ನಕಲಿ ದಾಖಲೆ ಸೃಷ್ಟಿಸಿ ಕೊಟ್ಯಂತರ ರೂಪಾಯಿ ಬೆಲೆ ಬಾಳುವ ಜಮೀನನ್ನು ಕಬಳಿಸಿದ್ದ ಆರೋಪದ ಮೇಲೆ 40 ಎಫ್‌ಐಆರ್‌ಗಳನ್ನು ದಾಖಲಿಸಲು ಎಸಿಬಿ ಸರ್ಕಾರದ ಬಳಿ ಅನುಮತಿ ಕೋರಿತ್ತು.

ಈ ಸಂಬಂಧ 25 ಅಧಿಕಾರಿಗಳ ಮೇಲೆ ಎಫ್‌ಐಆರ್ ದಾಖಲಿಸಲು ನಗರಾಭಿವೃದ್ದಿ ಇಲಾಖೆಯಿಂದ ಅನುಮತಿ ನೀಡಲಾಗಿದೆ. ಇದರಿಂದ ಭ್ರಷ್ಟ ಅಧಿಕಾರಿಗಳಿಗೆ ಬಂಧನದ ಭೀತಿ ಎದುರಾಗಿದೆ.

ಕೆಲ ದಿನಗಳ ಹಿಂದೆ ಬಿಡಿಎ ಕಚೇರಿ ಮೇಲೆ ದಾಳಿ ಮಾಡಿದ್ದ ಎಸಿಬಿ ಅಧಿಕಾರಿಗಳೂ ನಿರಂತರ ಮೂರು ದಿನ ಕಡತಗಳ ಪರಿಶೀಲನೆ ಮಾಡಿದ್ದರು. ದಾಳಿ ವೇಳೆ ಸುಮಾರು 200 ಕೋಟಿಗೂ ಅಧಿಕ ಅವ್ಯವಹಾರ ಪತ್ತೆಯಾಗಿತ್ತು.

ಇದನ್ನೂ ಓದಿ :

ನಕಲಿ ದಾಖಲಾತಿ ಸೃಷ್ಟಿಸಿ ಅರ್ಹರಲ್ಲದವರಿಗೆ ಸೈಟ್ ಮಂಜೂರು, ಒಂದೇ ಸೈಟ್ ಇಬ್ಬರಿಗೂ ಮಂಜೂರು ಮಾಡಿರುವುದು ಸೇರಿದಂತೆ ಹಲವು ಆಕ್ರಮಗಳು ದಾಳಿ ವೇಳೆ ಪತ್ತೆಯಾಗಿದ್ದವು. ಎಸಿಬಿ ಅಧಿಕಾರಿಗಳು ರೂ.100 ಕೋಟಿಗೂ ಹೆಚ್ಚು ಮೌಲ್ಯದ ಅಕ್ರಮಗಳಿಗೆ ಸಂಬಂಧಿಸಿದ ದಾಖಲೆಗಳನ್ನು ವಶಕ್ಕೆ ಪಡೆದಿದ್ದರು. ಭಾರೀ ಭ್ರಷ್ಟಾಚಾರಕ್ಕಾಗಿ ಅಕ್ರಮವಾಗಿ ಭೂ ದಾಖಲೆಗಳನ್ನು ತಿರುಚಿ, ನಕಲಿ ದಾಖಲಾತಿಗಳ ಸೃಷ್ಟಿಸಿರುವುದರಲ್ಲಿ ಬಿಡಿಎ ಅಧಿಕಾರಿಗಳು ಹಾಗೂ ಸಿಬ್ಬಂದಿ ತೊಡಗಿಸಿಕೊಂಡಿರುವುದನ್ನು ಎಸಿಬಿ ಅಧಿಕಾರಿಗಳು ಪತ್ತೆ ಹಚ್ಚಿದರು.

ಅಲ್ಲದೇ, ಒಂದೇ ನಿವೇಶನವನ್ನು ಅನೇಕ ಜನರಿಗೆ ಹಂಚಿಕೆ ಮಾಡಿ, ತದನಂತರ ಅವರನ್ನು ಕೋರ್ಟ್‌ಗೆ ಹೋಗುವಂತೆ ಹೇಳಲಾಗಿದೆ. ಉಪ ಕಾರ್ಯದರ್ಶಿಗಳ ಕಚೇರಿ, ವಿಶೇಷ ಭೂಸ್ವಾಧೀನ ಮತ್ತಿತರರ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದು, ಒಂದೇ ಆಸ್ತಿಯಲ್ಲಿ ವಿವಿಧ ವ್ಯಕ್ತಿಗಳಿಗೆ ದಾಖಲೆ ನೀಡಿರುವುದು ಪತ್ತೆಯಾಗಿದೆ. ಕೆ.ಆರ್. ಪುರಂನಲ್ಲಿರುವ ಖಾಸಗಿ ಸಂಸ್ಥೆಯಲ್ಲಿ 35 ನಿವೇಶನ ಹಂಚಿಕೆ ಮಾಡಿರುವುದು ಪತ್ತೆಯಾಗಿದ್ದವು. ಅಕಾರ್ವತಿ ಲೇಔಟ್, ಕೆಂಪೇಗೌಡ ಲೇಔಟ್, ಚಂದ್ರ ಲೇಔಟ್ ಮತ್ತಿತರ ಕಡೆಗಳಲ್ಲಿ ಅಕ್ರಮವಾಗಿ ಬಿಡಿಎ ನಿವೇಶನ ಹಂಚಿಕೆ ಮಾಡಿರುವುದನ್ನು ಕೂಡಾ ಅಧಿಕಾರಿಗಳು ಪತ್ತೆ ಮಾಡಲಾಗಿತ್ತು.

ಇದನ್ನೂ ಓದಿ :

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

19 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

20 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

20 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

21 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

21 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

22 hours ago