Featured

ಬಿಪಿಎಲ್‌ನಿಂದ ಎಪಿಎಲ್‌ ಕಾರ್ಡ್‌ಗೆ ಶಿಫ್ಟ್‌ ಆದರೂ ಗೃಹಲಕ್ಷ್ಮಿ ಹಣ  ಪಡೆಯಲು ಅರ್ಹರಾಗಿರುತ್ತಾರೆ : ಲಕ್ಷ್ಮೀ ಹೆಬ್ಬಾಳ್ಕರ್‌ – vishwanews24

ಬಿಪಿಎಲ್‌ ಕಾರ್ಡ್‌ಗಳನ್ನು ಎಪಿಎಲ್‌ಗೆ ಪರಿವರ್ತಿಸಿದರೂ ಗೃಹಲಕ್ಷ್ಮಿ ಹಣ ಮುಂದುವರಿಯುತ್ತದೆ ..

ಆದಾಯ ತೆರಿಗೆ ಪಾವತಿ ಮಾಡುತ್ತಿರುವವರಿಗೆ ಗೃಹಲಕ್ಷ್ಮೀ  ಹಣ ಸಿಗೋದಿಲ್ಲ : ಲಕ್ಷ್ಮೀ ಹೆಬ್ಬಾಳ್ಕರ್‌ ಸ್ಪಷ್ಟನೆ

ಬೆಳಗಾವಿ : ಬಡತನ ರೇಖೆಗಿಂತ ಮೇಲಿನ (ಎಪಿಎಲ್) ಪಡಿತರ ಚೀಟಿ ಹೊಂದಿರುವ ಮಹಿಳೆಯರು ಗೃಹ ಲಕ್ಷ್ಮಿ ಯೋಜನೆಯಡಿ ಮಾಸಿಕ 2 ಸಾವಿರ ರೂಪಾಯಿ ಹಣ ಪಡೆಯಲಿದ್ದಾರೆ. ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ. ಆದರೆ, ಇವರುಗಳು ಆದಾಯ ತೆರಿಗೆ ಪಾವತಿ ಮಾಡುವ ವ್ಯಕ್ತಿಗಳಾಗಿರಬಾರದು. ಆದಾಯ ತೆರಿಗೆ ಪಾವತಿ ಮಾಡುತ್ತಿರುವವರಿಗೆ ಗೃಹಲಕ್ಷ್ಮೀ ಹಣ ಸಿಗೋದಿಲ್ಲ ಎಂದು ಬುಧವಾರ ತಿಳಿಸಿದ್ದಾರೆ. ಗೃಹಲಕ್ಷ್ಮೀ ಹಣದ ವಿಚಾರದಲ್ಲಿ ಎಪಿಎಲ್‌ ಹಾಗೂ ಬಿಪಿಎಲ್‌ ಕಾರ್ಡ್‌ ಅನ್ನೋ ವಿಚಾರ ಲೆಕ್ಕಕ್ಕೆ ಬರೋದಿಲ್ಲ. ಆದಾಯ ತೆರಿಗೆ ಪಾವತಿ ಮಾಡುವವರು ಆಗಿರಬಾರದು ಎನ್ನುವ ನಿಯಮವಿದೆ ಎಂದು ತಿಳಿಸಿದ್ದಾರೆ.

ಬುಧವಾರ ಇಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು, ಮಹಿಳೆಯರು ತಮ್ಮ ಕಾರ್ಡ್‌ಗಳನ್ನು ಬಿಪಿಎಲ್‌ನಿಂದ ಎಪಿಎಲ್‌ಗೆ ಪರಿವರ್ತಿಸಿದರೂ ಗೃಹಲಕ್ಷ್ಮಿ ಕಂತುಗಳನ್ನು ಪಡೆಯುವುದು ಮುಂದುವರಿಯುತ್ತದೆ. ಪರಿಶೀಲನಾ ಪ್ರಕ್ರಿಯೆಯ ಬಳಿಕ ಬಿಪಿಎಲ್‌ನಿಂದ ಎಪಿಎಲ್‌ ಕಾರ್ಡ್‌ಗೆ ಶಿಫ್ಟ್‌ ಆದ ಕುಟುಂಬದ ಮನೆಯ ಯಜಮಾನಿ ಕೂಡ 2 ಸಾವಿರ ರೂಪಾಯಿ ಮಾಸಿಕ ಕಂತು ಪಡೆಯಲು ಅರ್ಹರಾಗಿರುತ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಶಾಸಕರ ಕುದುರೆ ವ್ಯಾಪಾರದ ಬಗ್ಗೆ ವದಂತಿಗಳಿಗೆ ಪ್ರತಿಕ್ರಿಯಿಸಿದ ಹೆಬ್ಬಾಳ್ಕರ್, “ಬಿಜೆಪಿಯಿಂದ ಇದು ದೇಶಾದ್ಯಂತ ನಡೆಯುತ್ತಿದೆ, ಆದರೆ, ಕಾಂಗ್ರೆಸ್ ಶಾಸಕರು ಪ್ರಬಲರಾಗಿದ್ದಾರೆ ಮತ್ತು ಕೇಸರಿ ಪಕ್ಷದ ಬಲಿಪಶುಗಳಾಗೋದಿಲ್ಲ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸುರಕ್ಷಿತ, ಮತ್ತು ಯಾರೂ ಅದನ್ನು ಅಸ್ಥಿರಗೊಳಿಸಲು ಸಾಧ್ಯವಿಲ್ಲ.” ಸಚಿವ ಸಂಪುಟ ಪುನಾರಚನೆ ಅಥವಾ ಖಾತೆ ಬದಲಾವಣೆ ಬಗ್ಗೆ ತಮಗೆ ತಿಳಿದಿಲ್ಲ ಎಂದು ಹೆಬ್ಬಾಳ್ಕರ್ ಹೇಳಿದ್ದಾರೆ.

ಇದೇ ವೇಳೆ ಡಿ.9ರಿಂದ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಬೆಳಗಾವಿ ವಿಭಾಗದ ವಿಷಯ ಚರ್ಚೆಗೆ ಬರುವ ಸಾಧ್ಯತೆ ಇದೆ ಎಂದು ಬಹಿರಂಗಪಡಿಸಿದ ಅವರು, ಈ ಕುರಿತು ಈಗಾಗಲೇ ಶಾಸಕರೊಂದಿಗೆ ಒಂದು ಸುತ್ತಿನ ಚರ್ಚೆ ನಡೆಸಿದ್ದೇವೆ, ಅಧಿವೇಶನದಲ್ಲಿ ಹೆಚ್ಚಿನ ಚರ್ಚೆ ನಡೆಸಲಾಗುವುದು’ ಎಂದಿದ್ದಾರೆ.

ಮಹಾರಾಷ್ಟ್ರದಲ್ಲಿ ಕಾಂಗ್ರೆಸ್, ಎನ್‌ಸಿಪಿ ಮತ್ತು ಶಿವಸೇನೆ ಒಳಗೊಂಡ ಮಹಾ ವಿಕಾಸ್ ಅಘಾಡಿ ಸರ್ಕಾರ ರಚಿಸಲಿದೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು. ಅಲ್ಲದೆ, ಕರ್ನಾಟಕ ಉಪಚುನಾವಣೆಯಲ್ಲಿ ಕಾಂಗ್ರೆಸ್ ಎಲ್ಲಾ ಮೂರು ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಹೇಳಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

16 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago