Featured

ಬಿಪಿಎಲ್ ಕಾರ್ಡುದಾರರಿಗೆ ಹೆಚ್ಚುವರಿಯಾಗಿ 1 ಕೆಜಿ ಪಡಿತರ ಅಕ್ಕಿ ಉಚಿತ : ರಾಜ್ಯಪಾಲರ ಘೋಷಣೆ – Vishwanews24

ಬಿಪಿಎಲ್ ಕಾರ್ಡುದಾರರಿಗೆ ಹೆಚ್ಚುವರಿಯಾಗಿ 1 ಕೆಜಿ ಪಡಿತರ ಅಕ್ಕಿ ಉಚಿತ , ಏಪ್ರಿಲ್ 1ರಿಂದ ಜಾರಿ : ರಾಜ್ಯಪಾಲರ ಘೋಷಣೆ – Vishwanews24

ಬಡತನರೇಖೆಗಿಂತ ಕೆಳಗಿರುವ(ಬಿಪಿಎಲ್) ಪಡಿತರಚೀಟಿ ಹೊಂದಿದ ಪ್ರತಿ ಕುಟುಂಬಕ್ಕೆ 5 ಕೆಜಿ ಧಾನ್ಯವನ್ನು ಪ್ರತಿ ತಿಂಗಳು ಹಂಚಲಾಗುತ್ತಿದ್ದು, ಏಪ್ರಿಲ್ 1ರಿಂದ ಜಾರಿಯಾಗುವಂತೆ ಹೆಚ್ಚುವರಿಯಾಗಿ ಒಂದು ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುವುದು ಎಂದು ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಅವರು ಇಂದು ಘೋಷಣೆ ಮಾಡಿದರು.

ಉದ್ದೇಶಿಸಿ ಮಾತನಾಡಿದ ಅವರು, ಪ್ರಸ್ತುತ ಬಿಪಿಎಲ್ ಕುಟುಂಬಗಳಿಗೆ ಪ್ರತಿ ತಿಂಗಳು 5 ಕೆಜಿ ಅಕ್ಕಿಯನ್ನು ವಿತರಣೆ ಮಾಡಲಾಗುತ್ತಿದೆ. ಇನ್ನು ಮುಂದೆ ಹೆಚ್ಚುವರಿಯಾಗಿ ಒಂದು ಕೆಜಿ ನೀಡಲಾಗುವುದು ಎಂದು ತಿಳಿಸಿದರು.

ರಾಷ್ಟ್ರದಲ್ಲೇ ಕರ್ನಾಟಕ ಪ್ರಪ್ರಥಮವಾಗಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಿದೆ. ಇದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸಮಗ್ರ ವಿವಿ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದೆ. ವಿದೇಶದಲ್ಲಿರುವ ದೇಶಿ ಸಂಜಾತರ ಜ್ಞಾನವನ್ನು ಸ್ವದೇಶದಲ್ಲಿ ಬಳಸಿಕೊಳ್ಳಲು ಮರಳಿ ತಾಯ್ನಾಡಿಗೆ ಯೋಜನೆಯನ್ನು ಅನುಷ್ಠಾನಗೊಳಿಸಲು ಸೂಕ್ತ ನೀತಿ ರಚನೆ ಮತ್ತು ಅನುದಾನ ಬಿಡುಗಡೆ ಮಾಡುವ ಆಶ್ವಾಸನೆಯನ್ನು ನೀಡಿದರು.

ತಮ್ಮ 30 ಪುಟಗಳ ಭಾಷಣದಲ್ಲಿ ಯಾವುದೇ ಹೊಸ ಯೋಜನೆಗಳನ್ನಾಗಿ ಅಥವಾ ಕಾರ್ಯಕ್ರಮಗಳನ್ನು ಘೋಷಣೆ ಮಾಡದ ರಾಜ್ಯಪಾಲರು, ರಾಜ್ಯ ಸರ್ಕಾರ ಕೋವಿಡ್ ನಿರ್ವಹಣೆಗಾಗಿ ನಡೆಸಿದ ಹೋರಾಟ ಹಾಗೂ ಜಾರಿಗೆ ತಂದಿರುವ ಕಾರ್ಯಕ್ರಮಗಳ ಅನುಷ್ಠಾನ ಹೊರತುಪಡಿಸಿದರೆ ಸರ್ಕಾರದ ಮುಂದುವರೆದ ಕಾರ್ಯಕ್ರಮಗಳನ್ನು ಮಾತ್ರ ಪ್ರಸ್ತಾಪಿಸಿದ್ದಾರೆ.

ಕೋವಿಡ್ ರೋಗವು ಶೀಘ್ರದಲ್ಲೇ ಕೊನೆಗೊಳ್ಳುವ ಸಾಧ್ಯತೆಯಿದೆ. ಸರ್ಕಾರ ಇದನ್ನು ನಿವಾರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದುಘಿ, ಇದೇ ರೀತಿ ನಾವು ಯಶಸ್ಸು ಕಾಣುತ್ತೇವೆ ಎಂದು ಆಶಾಭಾವನೆ ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಆತ್ಮನಿರ್ಭರ್ ಭಾರತವನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು ಸರ್ಕಾರ ಮುಂದಾಗಿದೆ. ಆರೋಗ್ಯ ಕ್ಷೇತ್ರದಲ್ಲಿ ಮೂಲಭೂತ ಸೌಕರ್ಯಗಳ ಹೆಚ್ಚಳ, ದೇಶವು ಎರಡು ಲಸಿಕೆಗಳನ್ನು ಉತ್ಪಾದಿಸಿ ಬೇರೆ ದೇಶಗಳಿಗೂ ರಫ್ತು ಮಾಡುವಲ್ಲಿ ಯಶಸ್ವಿಯಾಗಿದೆ ಜೊತೆಗೆ ಪ್ರತಿಯೊಬ್ಬರಿಗೂ ಹಂತ ಹಂತವಾಗಿ ತಲುಪುವಂತೆ ನೋಡಿಕೊಂಡಿದ್ದುಘಿ, ಕೇಂದ್ರ ಸರ್ಕಾರದೊಂದಿಗೆ ನಿಕಟ ಸಂಪರ್ಕದಲ್ಲಿದೆ ಎಂದರು.

Vishwa News 24

Recent Posts

ಇಂಡಿಗೋ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಹೊಸ ‘ಲೈಟ್’ ದರದಲ್ಲಿ ಸಿಗಲಿದೆ  ಭರ್ಜರಿ ಲಾಭ -vishwanews24

ಇಂಡಿಗೋ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಹೊಸ 'ಲೈಟ್' ದರದಲ್ಲಿ ಸಿಗಲಿದೆ  ಭರ್ಜರಿ ಲಾಭ ನವದೆಹಲಿ: ಭಾರತದ ಪ್ರಮುಖ ವಿಮಾನಯಾನ…

3 minutes ago

ಉಡುಪಿ : ಸಿಎ, ವೈದ್ಯ, ಪತ್ರಿಕಾ ರಂಗದ ಸಾಧಕರಿಗೆ ಮಲಬಾರ್ ವಿಶ್ವ ಗೌರವ ಪುರಸ್ಕಾರ – vishwanews24

ಉಡುಪಿ : ಸಿಎ, ವೈದ್ಯ, ಪತ್ರಿಕಾ ರಂಗದ ಸಾಧಕರಿಗೆ ಮಲಬಾರ್ ವಿಶ್ವ ಗೌರವ ಪುರಸ್ಕಾರ ಉಡುಪಿ : ಮಲಬಾರ್ ಗೋಲ್ಡ್…

18 minutes ago

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

16 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

18 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

19 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

19 hours ago