ಬೆಂಗಳೂರು: ಬಿಪಿಎಲ್ ಕುಟುಂಬಗಳಿಗೆ ಉಚಿತ ಕೊರೊನಾ ಲಸಿಕೆ ನೀಡಲಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಸುಧಾಕರ್ ಹೇಳಿದ್ದಾರೆ.
ವಿಶ್ವ ಏಡ್ಸ್ ದಿನದ ಅಂಗವಾಗಿ ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಏಡ್ಸ್ ಪ್ರಿವೆನ್ಷನ್ ಸೊಸೈಟಿ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತಿ ಸಹಯೋಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿದರು ಮಾತನಾಡಿದ ಅವರು, 1980 ರಿಂದ ವಿಶ್ವದಲ್ಲಿ ಏಡ್ಸ್ ರೋಗಕ್ಕೆ ಸುಮಾರು 18 ಲಕ್ಷ ಜನರು ಸಾವೀಗೀಡಾಗಿದ್ದಾರೆ. ಏಡ್ಸ್ ರೋಗಕ್ಕೆ ಇದುವರೆಗೂ ಔಷಧಿ ಕಂಡು ಹಿಡಿದಿಲ್ಲ. ಆದರೆ, ಏಡ್ಸ್ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತಿರುವುದರಿಂದ ಏಡ್ಸ್ ರೋಗ ಹರಡುವಿಕೆ ಪ್ರಮಾಣ ಕಡಿಮೆಯಾಗಿದೆ ಎಂದು ಹೇಳಿದರು.
ಯಾವುದೇ ವ್ಯಕ್ತಿ ಜೀವನದಲ್ಲಿ ಯಾವುದೇ ರೋಗವನ್ನು ಆಹ್ವಾನಿಸುವುದಿಲ್ಲ. ಅವರು ಮಾಡದೇ ಇರುವ ತಪ್ಪಿಗೂ ರೋಗಕ್ಕೆ ತುತ್ತಾಗುವ ಸಾಧ್ಯತೆ ಇದೆ. ಹೀಗಾಗಿ ಎಲ್ಲರೂ ಅತ್ಯಂತ ಜಾಗರೂಕರಾಗಿರಬೇಕು. ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಹೇಳಿದರು.
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…