ಬೆಂಗಳೂರು : ಬಡತನ ರೇಖೆಗಿಂತ ಕೆಳಗಿರುವ(ಬಿಪಿಎಲ್) ಪಡಿತರ ಚೀಟಿ ಪಡೆಯಲು ನಿಗದಿಪಡಿಸಿರುವ 1.20ಲಕ್ಷ ರೂ.ವಾರ್ಷಿಕ ಆದಾಯದ ಮಿತಿಯನ್ನು ಆಡಳಿತ ಸುಧಾರಣಾ ಆಯೋಗದ ಶಿಫಾರಸ್ಸಿನಂತೆ 3 ಲಕ್ಷ ರೂ.ಗಳಿಗೆ ಹೆಚ್ಚಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.
ನಗರದ ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮದ ಕಚೇರಿಯಲ್ಲಿ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ ಜೊತೆಯಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಅವರು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.
ಇದನ್ನೂ ಓದಿ :
ಕೇಂದ್ರ ಸರಕಾರದ ಮಾನದಂಡಗಳ ಅನ್ವಯ ಪಡಿತರ ಚೀಟಿಗಳ ಪರಿಶೀಲನೆ ನಡೆಯುತ್ತಿದ್ದು, ನಾವು ಯಾವ ಪಡಿತರ ಚೀಟಿಯನ್ನು ರದ್ದು ಮಾಡುವುದಿಲ್ಲ. ಬಿಪಿಎಲ್‍ಗೆ ಅನರ್ಹವಾಗಿರುವ ಪಡಿತರ ಚೀಟಿಗಳನ್ನು ಎಪಿಎಲ್‍ಗೆ ವರ್ಗಾವಣೆ ಮಾಡಲಾಗುತ್ತಿದೆ ಎಂದು ಮುನಿಯಪ್ಪ ಹೇಳಿದರು.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಅನ್ನಭಾಗ್ಯ ಯೋಜನೆಯ ಮೂಲಕ ರಾಜ್ಯದ ಸುಮಾರು 4.42 ಕೋಟಿ ಫಲಾನುಭವಿಗಳಿಗೆ ಪ್ರತಿ ತಿಂಗಳು 10 ಕೆಜಿ ಪಡಿತರ ವಿತರಣೆ ಮಾಡುತ್ತಿದೆ. ಇದರ ಮೂಲಕ ನಮ್ಮ ಸರಕಾರವು ಕರ್ನಾಟಕವನ್ನು ಹಸಿವು ಮುಕ್ತ ರಾಜ್ಯವನ್ನಾಗಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ ಎಂದು ಅವರು ಹೇಳಿದರು.
ಇದನ್ನೂ ಓದಿ :
ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಅನ್ನಭಾಗ್ಯ ಯೋಜನೆಯೂ ಪ್ರಮುಖವಾಗಿದೆ. ಯಾರೊಬ್ಬರೂ ಹಸಿವಿನಿಂದ ಮಲಗಬಾರದು ಎಂಬ ಉದ್ದೇಶದಿಂದ ಅಂದಿನ ನಮ್ಮ ಯುಪಿಎ ಸರಕಾರ ಆಹಾರ ಭದ್ರತೆ ಕಾಯ್ದೆಯನ್ನು ಜಾರಿಗೊಳಿಸಿದ್ದರಿಂದ, ಈ ಮಹತ್ವದ ಯೋಜನೆ ಅನುಷ್ಠಾನವಾಗಿದೆ ಎಂದು ಮುನಿಯಪ್ಪ ತಿಳಿಸಿದರು.
ಕಾನೂನು ಮಾಪನ ಶಾಸ್ತ್ರ ಇಲಾಖೆಯ ಮೂಲಕ ತೂಕ ಮತ್ತು ಅಳತೆಯಲ್ಲಿ ತಪಾಸಣೆ ಮಾಡಲು ಸುಮಾರು 33 ವಾಹನಗಳನ್ನು ಇಲಾಖೆಗೆ ಹಂಚಿಕೆ ಮಾಡಿದ್ದು ಇಲ್ಲಿಯವರೆಗೂ ಕಾನೂನು ಮಾಪನ ಶಾಸ್ತ್ರ ಇಲಾಖೆಯು ಕಳೆದ ಮೂರು ವರ್ಷದಲ್ಲಿ ಸುಮಾರು 250 ಕೋಟಿರೂ.ಗಳ ರಾಜಸ್ವ ಸಂಗ್ರಹ ಮಾಡಿದ್ದು ಗ್ರಾಹಕರಿಗೆ ತೂಕದಲ್ಲಿ ಯಾವುದೆ ವ್ಯತ್ಯಾಸಗಳು ಕಾಣದಂತೆ ಕ್ರಮ ವಹಿಸುತ್ತಿದೆ ಎಂದು ಅವರು ತಿಳಿಸಿದರು
ಇದನ್ನೂ ಓದಿ :
ಪಡಿತರ ವಿತರಣೆಯಲ್ಲಿ ಕಾಳಸಂತೆಯನ್ನು ತಡೆಯಲು ಕ್ರಮ ವಹಿಸಲಾಗಿದ್ದು, ಗೋದಾಮುಗಳಿಗೆ ಸಿಸಿ ಕ್ಯಾಮರಾ ಹಾಗೂ ಪಡಿತರ ವಾಹನಗಳಿಗೆ ಅಳವಡಿಸಿರುವ ಜಿಪಿಎಸ್ ಕುರಿತು ನಿಗಾವಹಿಸಲು ಕಮಾಂಡ್ ಕಂಟ್ರೋಲ್ ರೂಂ ಅನ್ನು ಕೇಂದ್ರ ಕಚೇರಿಯಲ್ಲಿ ನಿರ್ಮಿಸಲಾಗುತ್ತಿದೆ ಎಂದು ಮುನಿಯಪ್ಪ ಹೇಳಿದರು.
ಎಂಎಸ್‍ಪಿ ಯೋಜನೆಯಡಿ 5.60 ಲಕ್ಷ ಮೆಟ್ರಿಕ್ ಟನ್ ರಾಗಿಯನ್ನು ಖರೀದಿಸಿದ್ದು ಅದನ್ನು ಶುದ್ದೀಕರಿಸಿ ಗ್ರಾಹಕರಿಗೆ ವಿತರಣೆ ಮಾಡಲಾಗುತ್ತಿದೆ. ಇಂದಿರಾ ಕಿಟ್ ನೀಡಲು ಟೆಂಡರ್ ಪ್ರಕ್ರಿಯೆಯು ನಡೆಯುತ್ತಿದ್ದು ಅಂತಿಮ ಹಂತದಲ್ಲಿ ಇದೆ. ಮುಂದಿನ ಎರಡು ತಿಂಗಳಲ್ಲಿ ಕಿಟ್ ವಿತರಣೆಗೆ ಕಾರ್ಯರೂಪಿಸುತ್ತಿದ್ದೇವೆ ಎಂದು ಅವರು ತಿಳಿಸಿದರು.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…