Featured

ಬಿಪಿನ್‌ ರಾವತ್‌‌ ಅವರು ದೇಶದ ಬಗ್ಗೆ ಕಂಡಿದ್ದ ಕನಸುಗಳನ್ನು ನನಸು ಮಾಡುವ ಕರ್ತವ್ಯ ಇಂದಿನ ಯುವಜನಾಂಗದ ಮೇಲಿದೆ :ಸಿಎಂ ಬೊಮ್ಮಾಯಿ – Vishwanews24

ಬಿಪಿನ್‌ ರಾವತ್‌‌ ಅವರು ದೇಶದ ಬಗ್ಗೆ ಕಂಡಿದ್ದ ಕನಸುಗಳನ್ನು ನನಸು ಮಾಡುವ ಕರ್ತವ್ಯ ಇಂದಿನ ಯುವಜನಾಂಗದ ಮೇಲಿದೆ :ಸಿಎಂ ಬೊಮ್ಮಾಯಿ

ಅವರ ಕನಸುಗಳನ್ನು ನನಸು ಮಾಡುವುದೇ ಅವರಿಗೆ ಸಲ್ಲಿಸುವ ನಿಜವಾದ ಶ್ರದ್ಧಾಂಜಲಿ..

ಬೆಂಗಳೂರು: “ಹೆಲಿಕಾಪ್ಟರ್‌‌ ದುರಂತದಲ್ಲಿ ಮೃತಪಟ್ಟ ರಕ್ಷಣಾ ಪಡೆಯ ಮುಖ್ಯಸ್ಥ ಜನರಲ್‌‌ ಬಿಪಿನ್‌ ರಾವತ್‌‌ ಅವರ ಕನಸುಗಳನ್ನು ನನಸು ಮಾಡುವುದೇ ಅವರಿಗೆ ಸಲ್ಲಿಸುವ ನಿಜವಾದ ಶ್ರದ್ಧಾಂಜಲಿ” ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ಧಾರೆ.

ವಿಧಾನಸೌದದ ಬಾಂಕ್ವೆಟ್‌‌ ಹಾಲ್‌ನಲ್ಲಿ ಡಿಆರ್‌‌ಡಿಒ ಹಾಗೂ ಡಿಎಫ್‌‌‌ಆರ್‌ಎಲ್‌‌ ವತಿಯಿಂದ ಆಯೋಜಿಸಿದ್ದ ಸಶಸ್ತ್ರ ಪಡೆಗಳಿಗೆ ಆಹಾರ ಹಾಗೂ ಲಾಜಿಸ್ಟಕ್‌‌‌ ನೆರವು ಕುರಿತ ವಸ್ತುಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಅವರು, “ಈ ಘಟನೆಯಿಂದಾಗಿ ಇಡೀ ದೇಶವೇ ದಿಗ್ಬ್ರಾಂತಕ್ಕೆ ಒಳಗಾಗಿದೆ. ಹೆಲಿಕಾಪ್ಟರ್‌ ಏಕೆ ಪತನಗೊಂಡಿತು ಎನ್ನುವ ಕುರಿತು ಉನ್ನತ ಮಟ್ಟದ ತನಿಖೆ ಮುಗಿದ ನಂತರ ಸತ್ಯಾಂಶ ತಿಳಿಯಲಿದೆ” ಎಂದಿದ್ದಾರೆ.

“ಜನರಲ್‌ ಬಿಪಿನ್‌ ರಾವತ್‌ ಅವರು ದೇಶ ಕಂಡ ಅಪ್ರತಿಮ ನಾಯಕ. ಅವರು ಜೀವನದುದ್ದಕ್ಕೂ ದೇಶ ಸೇವೆಯನ್ನೇ ಉಸಿರಾಗಿಸಿಕೊಂಡಿದ್ದರು. ಅವರು ದೇಶದ ಬಗ್ಗೆ ಕಂಡಿದ್ದ ಕನಸುಗಳನ್ನು ನನಸು ಮಾಡುವ ಕರ್ತವ್ಯ ಇಂದಿನ ಯುವಜನಾಂಗದ ಮೇಲಿದೆ” ಎಂದು ತಿಳಿಸಿದ್ದಾರೆ.

“ಬಿಪಿನ್‌ ರಾವತ್‌ ಅವರು ಕರ್ನಾಟಕದ ಜೊತೆ ಅವಿನಾಭಾವ ಸಂಬಂಧ ಹೊಂದಿದ್ದರು. ಬೆಂಗಳೂರು, ಮಡಿಕೇರಿ ಮತ್ತಿತರ ಕಡೆ ಅನೇಕ ಸಲ ಬಂದಿದ್ದರು. ಭಾರತೀಯ ಸೇನಾ ಪಡೆಗೆ ನಮ್ಮ ರಾಜ್ಯವು ನೀಡಿರುವ ಕೊಡುಗೆಗಳ ಬಗ್ಗೆ ಅವರಿಗೆ ಅಪಾರವಾದ ಗೌರವವಿತ್ತು” ಎಂದಿದ್ದಾರೆ.

“ಪಾಕಿಸ್ತಾನ ವಿರುದ್ದ ವಾಯುದಾಳಿ, ಬರ್ಮಾ ವಿರುದ್ದ ಸರ್ಜಿಕಲ್‌ ಸ್ಟ್ರೈಕ್‌, ಚೀನಾ ಪಡೆಗಳನ್ನು ಹಿಮ್ಮೆಟ್ಟಿಸುವಲ್ಲಿ ಅವರ ಪಾತ್ರ ಅತ್ಯಂತ ಮಹತ್ವದಾಗಿತ್ತು. ದೇಶವು ಸ್ವಾವಲಂಬಿ ಆಗಬೇಕು ಎನ್ನುವುದು ಅವರ ಚಿಂತನೆಯಾಗಿತ್ತು. ಹಾಗಾಗಿ ಅವರು ಆತ್ಮ ನಿರ್ಭರ್‌ ಯೋಜನೆಗೆ ಒತ್ತು ನೀಡಿದ್ದರು” ಎಂದು ಹೇಳಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago