Featured

ಬಿಪಿನ್ ರಾವತ್ ಸಾವನ್ನು ಸಂಭ್ರಮಿಸಿದ್ದಕ್ಕಾಗಿ ಇಸ್ಲಾಂನಿಂದ ಹಿಂದು ಧರ್ಮಕ್ಕೆ ಮತಾಂತರಗೊಂಡ ನಿರ್ದೇಶಕ ಅಲಿ ಅಕ್ಬರ್ – Vishwanews24

ಬಿಪಿನ್ ರಾವತ್ ಅವರ ಸಾವನ್ನು ಸಂಭ್ರಮಿಸಿದವರಲ್ಲಿ ಅನೇಕರು ಮುಸ್ಲಿಮರು..

ರಾವತ್ ಅವರ ಸಾವಿಗೆ ಅಗೌರವ ಸೂಚಿಸಿದ ದೇಶವಿರೋಧಿ ಮುಸ್ಲಿಮರ ಕೃತ್ಯವನ್ನು ಯಾವುದೇ ಮುಸ್ಲಿಂ ನಾಯಕರೂ ಖಂಡಿಸಿಲ್ಲ.

ಹಾಗಾಗಿ ಈ ಧರ್ಮದ ಬಗ್ಗೆ ನನಗೆ ನಂಬಿಕೆ ಉಳಿದಿಲ್ಲ..

ನಾನು ಹಾಗೂ ನನ್ನ ಪತ್ನಿ ಹಿಂದು ಧರ್ಮಕ್ಕೆ ಮತಾಂತರ ಆಗಲಿದ್ದೇವೆ

ಇಂದಿನ ನಂತರ ನಾನು ಮುಸ್ಲಿಂ ಆಗಿರೋದಿಲ್ಲ, ನಾನು ಭಾರತೀಯ..

ಇಸ್ಲಾಂ ಧರ್ಮದಿಂದ ಹಿಂದು ಧರ್ಮಕ್ಕೆ ಮತಾಂತರಗೊಂಡ ಅಲಿ ಅಕ್ಬರ್

ಕೊಚ್ಚಿ: ನಿರ್ದೇಶಕ ಅಲಿ ಅಕ್ಬರ್, ಪತ್ನಿ ಅವರು ಮುಸ್ಲಿಂ ಧರ್ಮದಿಂದ ಹಿಂದು ಧರ್ಮಕ್ಕೆ ಮತಾಂತರ ಆಗಿದ್ದಾರೆ. ಸೇನಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಬಿಪಿನ್ ರಾವತ್  ಹಾಗೂ ಇತರೆ 12 ಮಂದಿ ತಮಿಳುನಾಡಿನ ಕೂನೂರು ಸಮೀಪ ಸಂಭವಿಸಿದ ಭೀಕರ ಹೆಲಿಕಾಪ್ಟರ್ ಅಪಘಾತದಲ್ಲಿ ಮೃತಪಟ್ಟ ಘಟನೆಯನ್ನು ಕೆಲವರು ಸಂಭ್ರಮಿಸಿದ್ದರು. ಇದನ್ನು ಕಂಡು ಅಲಿ ಅಕ್ಬರ್  ಕುಟುಂಬ ಈ ನಿರ್ಧಾರ ತೆಗೆದುಕೊಂಡಿದೆ.

ರಾಷ್ಟ್ರ ವಿರೋಧಿ ಪ್ರಕ್ರಿಯೆ ಮಾಡಿದವರನ್ನೂ ಕೂಡ ಇಸ್ಲಾಂ ಧರ್ಮದ ನಾಯಕರು ವಿರೋಧಿಸುವುದಿಲ್ಲ. ಈ ಧರ್ಮದಲ್ಲಿ ನಂಬಿಕೆ ಕಳೆದುಕೊಂಡಿರುವೆ ಎಂದು ಅಲಿ ಅಕ್ಬರ್ ಅವರು ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಪೋಸ್ಟ್ ಕಂಡು ಕೆಲವರು ಅವರನ್ನು ನಿಂದಿಸಿದ್ದರು. ಹೀಗಾಗಿ ಆ ವಿಡಿಯೋ ಫೇಸ್‌ಬುಕ್‌ನಿಂದ ಡಿಲಿಟ್ ಆಗಿದೆ. ಆದರೆ ವಾಟ್ಸಾಪ್‌ನಲ್ಲಿ ಹರಿದಾಡುತ್ತಿದೆ. ಹಿಂದು ಧರ್ಮಕ್ಕೆ ಮತಾಂತರ ಆಗಿದ್ದಕ್ಕೆ ಅಲಿಯನ್ನು ಸಾಕಷ್ಟು ಜನರು ನಿಂದಿಸಿದ್ದು, ಅದಕ್ಕೆ ಅವರು ತನ್ನದೇ ಆದ ಶೈಲಿಯಲ್ಲಿ ಉತ್ತರ ನೀಡಿದ್ದಾರೆ.

“ನಾನು ಜನ್ಮದಿಂದ ಹಾಕಿದ್ದ ಉಡುಗೆಯನ್ನು ನಾನು ಬಿಚ್ಚಿ ಎಸೆಯುತ್ತಿರುವೆ. ಇಂದಿನ ನಂತರ ನಾನು ಮುಸ್ಲಿಂ ಆಗಿರೋದಿಲ್ಲ. ನಾನು ಭಾರತೀಯ. ಭಾರತದ ವಿರುದ್ಧ ನಗುತ್ತಿರುವ ಇಮೋಜಿಗಳನ್ನು ಕಳಿಸಿದವರಿಗೆ ಇದು ನನ್ನ ಉತ್ತರ. ರಾವತ್ ಸಾವನ್ನು ಸಂಭ್ರಮಿಸುವುದರ ಜೊತೆಗೆ ಸಾಕಷ್ಟು ರಾಷ್ಟ್ರ ವಿರೋಧಿ ಚಟುವಟಿಕೆಗಳು ಸೋಶಿಯಲ್ ಮೀಡಿಯಾದಲ್ಲಿ ನಡೆಯುತ್ತಿವೆ” ಎಂದು ಅಲಿ ಅಕ್ಬರ್ ಅಭಿಪ್ರಾಯ ಹೊರಹಾಕಿದ್ದಾರೆ.

ಬಿಪಿನ್ ರಾವತ್ ಅವರ ಸಾವನ್ನು ಸಂಭ್ರಮಿಸಿದವರಲ್ಲಿ ಅನೇಕರು ಮುಸ್ಲಿಮರು. ಪಾಕಿಸ್ತಾನದ ವಿರುದ್ಧ ಸಾಕಷ್ಟು ಕ್ರಮಗಳನ್ನು ರಾವತ್ ಮಾಡಿದ್ದರು ಎಂದು ಈ ರೀತಿ ಕಾಮೆಂಟ್ ಮಾಡುತ್ತಿದ್ದಾರೆ. ಸಾಕಷ್ಟು ಜನರು ದೇಶವನ್ನು ಬಿಪಿನ್ ರಾವತ್ ಅವರನ್ನು ಅಗೌರವಿಸಿದ್ದಾರೆ. ಇದರ ಬಗ್ಗೆ ಮುಸ್ಲಿಂ ಧರ್ಮದ ನಾಯಕರು ಕೂಡ ಏನೂ ಹೇಳಿಲ್ಲ. ಹೀಗಾಗಿ ನಾನು ಈ ಧರ್ಮದಲ್ಲಿ ಇರಲು ಬಯಸೋದಿಲ್ಲ” ಎಂದು ಅಲಿ ಅಕ್ಬರ್ ಹೇಳಿದ್ದಾರೆ.

“ನಾನು ಹಾಗೂ ನನ್ನ ಪತ್ನಿ ಹಿಂದು ಧರ್ಮಕ್ಕೆ ಮತಾಂತರ ಆಗಲಿದ್ದೇವೆ, ಅದಕ್ಕೆ ಕೆಲ ಪ್ರಕ್ರಿಯೆಗಳು ನಡೆಯಬೇಕಿವೆ. ಆದರೆ ನನ್ನ ಇಬ್ಬರು ಮಕ್ಕಳಿಗೆ ಮಾತ್ರ ಅವರಿಗೆ ಮನಸ್ಸಿಗೆ ಬಂದಹಾಗೆ ನಿರ್ಧಾರ ತೆಗೆದುಕೊಳ್ಳಲು ಹೇಳುವೆ, ನಾನು ಒತ್ತಡ ಹೇರುವುದಿಲ್ಲ” ಎಂದು ಅಲಿ ಅಕ್ಬರ್ ಹೇಳಿದ್ದಾರೆ.

 

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

18 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

18 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

18 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

22 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

22 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

22 hours ago