Featured

ಬಿರುಗಾಳಿಯಿಂದ ಅಪಾಯಕ್ಕೆ ಸಿಲುಕಿದ್ದ  24 ಮೀನುಗಾರರ ಮಂಗಳೂರು ಕೋಸ್ಟ್ ಗಾರ್ಡ್ ನೌಕೆಯ ಮೂಲಕ ರಕ್ಷಣೆ -Vishwanews24

ಬಿರುಗಾಳಿಯಿಂದ ಅಪಾಯಕ್ಕೆ ಸಿಲುಕಿದ್ದ  24 ಮೀನುಗಾರರ ಮಂಗಳೂರು ಕೋಸ್ಟ್ ಗಾರ್ಡ್ ನೌಕೆಯ ಮೂಲಕ ರಕ್ಷಣೆ -Vishwanews24

ಕಾರವಾರ: ಅರಬ್ಬಿ ಸಮುದ್ರದಲ್ಲಿ ಎದ್ದಿರುವ ಬಿರುಗಾಳಿಯಿಂದ ಅಪಾಯಕ್ಕೆ ಸಿಲುಕಿದ್ದ 24 ಮೀನುಗಾರರನ್ನು ಮಂಗಳೂರು ಕೋಸ್ಟ್ ಗಾರ್ಡ್ ನೌಕೆಯ ಮೂಲಕ ರಕ್ಷಿಸಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಹಾಗೂ ಹೊನ್ನಾವರ ತೀರದಿಂದ ಸುಮಾರು 15 ಕಿಮೀ ಆಳ ಸಮುದ್ರದಲ್ಲಿ ನೇತ್ರಾಣಿ ನಡುಗಡ್ಡೆ ಸಮೀಪ ಕಮರುಲ್ ಬಾಹರ್ ಎಂಬ ಮೀನುಗಾರಿಕೆ ಬೋಟ್ ಗುರುವಾರದಿಂದ ಅಪಾಯಕ್ಕೆ ಸಿಕ್ಕಿಹಾಕಿಕೊಂಡಿತ್ತು.

ಇಂಜಿನ್ ಗೆ ಹಾನಿಯಾಗಿತ್ತು. ಬೋಟ್ ಮುಳುಗುವ ಹಂತದಲ್ಲಿತ್ತು. ಬೋಟ್ ನಲ್ಲಿದ್ದ 24 ಮೀನುಗಾರರು ರಕ್ಷಣೆಗೆ ಮೊರೆ ಇಟ್ಟಿದ್ದರು. ಮಂಗಳೂರಿನಿಂದ ವಿಶೇಷ ನೌಕೆಯ ಮೂಲಕ ಆಗಮಿಸಿದ ಕೋಸ್ಟ್ ಗಾರ್ಡ್ ಅಧಿಕಾರಿಗಳು ಎಲ್ಲ ಮೀನುಗಾರರನ್ನು ರಕ್ಷಿಸಿ ದಡಕ್ಕೆ ಕರೆತಂದಿದ್ದಾರೆ.

ಉತ್ತರ ಕನ್ನಡ ಎಸ್ ಪಿ ಶಿವ ಪ್ರಕಾಶ ದೇವರಾಜು ಜಾಲತಾಣಗಳ ಮೂಲಕ ಕೋಸ್ಟ್ ಗಾರ್ಡ್ ಗೆ ಧನ್ಯವಾದ ತಿಳಿಸಿದ್ದಾರೆ.

ಗುರುವಾರದಿಂದ ಉತ್ತರ ಕನ್ನಡ ಕರಾವಳಿಯಲ್ಲಿ ಉತ್ತಮ ಮಳೆಯಾಗುತ್ತಿದೆ.‌ ಕಾರವಾರದಲ್ಲಿ ಶುಕ್ರವಾರ 60 ಮಿಮೀಗೂ ಅಧಿಕ ಮಳೆಯಾಗಿದೆ. ಸೆ.12 ರವರೆಗೂ ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.‌

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

19 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

19 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

20 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

20 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

21 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

21 hours ago