ಕಾಪು : ಬಿರುವೆರ್ ಕಾಪು ಸೇವಾ ಸಮಿತಿಯ ಆಶ್ರಯದಲ್ಲಿ ಬಿಲ್ಲವ ಸಮಾಜ ಬಾಂಧವರ ಸಹಭಾಗಿತ್ವದಲ್ಲಿ ಸಮಾಜ ಸೇವೆಯ ಸಹಾಯಾರ್ಥವಾಗಿ ಪ್ರಪ್ರಥಮ ಭಾರಿಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮಟ್ಟದ ಬಿಲ್ಲವ ಸಮುದಾಯ ಬಾಂಧವರಿಗೆ ಕ್ರಿಕೆಟ್ ಪಂದ್ಯಾವಳಿಯು ಡಿಸೆಂಬರ್ 30-31 ರಂದು ಲೀಗ್ ಕಮ್ ನಾಕೌಟ್ ಮಾದರಿಯ 90 ಗಜಗಳ ಕ್ರಿಕೆಟ್ ಪಂದ್ಯಾಕೂಟ ಕಾಪು ದಂಡತೀರ್ಥ ಶಾಲಾ ಮೈದಾನದಲ್ಲಿ ನಡೆಯಲಿದೆ ಎಂದು ಆಮಂತ್ರಣ ಪತ್ರಿಕೆ ಬಿಡುಗಡೆಯ ಪತ್ರಿಕಾಗೋಷ್ಠಿಯಲ್ಲಿ ಸಂಸ್ಥೆಯ ಅಧ್ಯಕ್ಷ ಬಾಲಕೃಷ್ಣ ಕೋಟ್ಯಾನ್ ತಿಳಿಸಿದರು.
ಸುಮಾರು ಎರಡು ಲಕ್ಷ ರೂಪಾಯಿಗಳ ಬಹುಮಾನದ ಪಂದ್ಯಾಟ ಇದಾಗಿದ್ದು ಉತ್ತಮದಾಂಡಿಗ ಉತ್ತಮ ಎಸೆತಗಾರ ಸರಣಿ ಶ್ರೇಷ್ಠ ಪಂದ್ಯದ ಶ್ರೇಷ್ಠ ಪ್ರಶಸ್ತಿ ನೀಡಲಿದೆ ಎಂದರು.
ಸಭಾ ಕಾರ್ಯಕ್ರಮ ಉದ್ಘಾಟನೆಯಲ್ಲಿ ಆರ್ಯ ಈಡಿಗ ಮಹಾ ಸಂಸ್ಥಾನ ಸೋಲೂರು ಮಠದ ಸ್ವಾಮೀಜಿ ಶ್ರೀ ಶ್ರೀ ವಿಕ್ಯಾನಂದರು ಭಾಗವಹಿಸಿ ಆಶೀರ್ವಚನ ಮಾಡಲಿದ್ದಾರೆ.
ಸಮಾಜದ ವಿವಿಧ ಗಣ್ಯರು ಮಾಜಿ ಶಾಸಕರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಆದಿತ್ಯವಾರ ಸಂಜೆ ಆರು ಗಂಟೆಗೆ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಲಿದೆ.
ಪತ್ರಿಕಾಗೋಷ್ಠಿಯಲ್ಲಿ ಸುಜನ್ ಎಲ್ ಸುವರ್ಣ ಕುತ್ಯಾರ್ ,ವರುಣ್ ಬಿ ಕೋಟ್ಯಾನ್, ರವಿರಾಜ್ ಶಂಕರಪುರ ,ಮಾಧವ ಪೂಜಾರಿ ಯೋಗೀಶ್ ಪೂಜಾರಿ ಕಾಪು ಉಪಸ್ಥಿತರಿದ್ದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…