Featured

ಬಿಲ್ಕಿಸ್‌ ಬಾನೊ ಪ್ರಕರಣ :  ಎಲ್ಲಾ 11 ಅಪರಾಧಿಗಳು ಗುಜರಾತ್‌ ಜೈಲಿನಲ್ಲಿ ಶರಣಾಗತಿ – vishwanews24

ಬಿಲ್ಕಿಸ್‌ ಬಾನೊ ಪ್ರಕರಣ :  ಎಲ್ಲಾ 11 ಅಪರಾಧಿಗಳು ಗುಜರಾತ್‌ ಜೈಲಿನಲ್ಲಿ ಶರಣಾಗತಿ

ಗಾಂಧಿನಗರ: ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣದ ಎಲ್ಲಾ 11 ಅಪರಾಧಿಗಳು ಗುಜರಾತ್ ಜೈಲಿನಲ್ಲಿ  ಶರಣಾಗಿದ್ದಾರೆ. ಪಂಚಮಹಲ್ ಜಿಲ್ಲೆಯ ಗೋಧ್ರಾ ಉಪ ಕಾರಾಗೃಹದಲ್ಲಿ ಭಾನುವಾರ ರಾತ್ರಿ ಶರಣಾಗಿದ್ದಾರೆ ಎಂದು ಇನ್ಸ್‌ಪೆಕ್ಟರ್ ಎನ್‌ಎಲ್ ದೇಸಾಯಿ ತಿಳಿಸಿದ್ದಾರೆ.

ಗೋಧ್ರಾ ಗಲಭೆಯ ಸಂದರ್ಭದಲ್ಲಿ ಬಿಲ್ಕಿಸ್ ಬಾನೊ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬದ ಸದಸ್ಯರನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ 11 ಮಂದಿಯನ್ನು ಗುಜರಾತ್ ಸರ್ಕಾರವು 2022ರ ಸ್ವಾತಂತ್ರ್ಯ ದಿನದಂದು ಬಳಕೆಯಲ್ಲಿಲ್ಲದ ಕಾನೂನಿನ ಆಧಾರದ ಮೇಲೆ ಬಿಡುಗಡೆ ಮಾಡಿತ್ತು.

ಬಾನೊ ಮತ್ತು ನಾಗರಿಕ ಸಮಾಜದ ಕಾರ್ಯಕರ್ತರು ಅವರ ಬಿಡುಗಡೆಯ ವಿರುದ್ಧ ಮೇಲ್ಮನವಿಗಳನ್ನು ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್‌, ಅಪರಾಧಿಗಳ ಬಿಡುಗಡೆ ಆದೇಶವನ್ನು ರದ್ದುಗೊಳಿಸಿತ್ತು. ಅಲ್ಲದೇ ಶರಣಾಗತಿಗೆ ಕಾಲಾವಕಾಶ ಕೋರಿ ಅಪರಾಧಿಗಳು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌  ಇತ್ತೀಚೆಗೆ ವಜಾಗೊಳಿಸಿತ್ತು. ಭಾನುವಾರದ (ಜ.21) ಒಳಗೆ ಶರಣಾಗುವಂತೆ ಕೋರ್ಟ್‌ ಸೂಚನೆ ನೀಡಿತ್ತು.

ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರ ನೇತೃತ್ವದ ಪೀಠವು ಅರ್ಜಿ ವಿಚಾರಣೆ ನಡೆಸಿ, ಕುಟುಂಬದವರ ವಿವಾಹ, ಪೋಷಕರ ಜವಾಬ್ದಾರಿ ಕಾರಣ ನೀಡಿ ಸಲ್ಲಿಸಿರುವ ಅರ್ಜಿಗಳನ್ನು ಕೋರ್ಟ್‌ ಪರಿಗಣಿಸಿಲ್ಲ. ಪ್ರಕರಣದ 11 ಅಪರಾಧಿಗಳು ಅಧಿಕಾರಿಗಳ ಮುಂದೆ ಶರಣಾಗುವಂತೆ ತಿಳಿಸಿದೆ ಎಂದು ಸೂಚಿಸಿತ್ತು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

23 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago