ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಘೋಷಣೆ ಕುರಿತು ಮುಖ್ಯಮಂತ್ರಿಯವರು ನೀಡಿದ ಭರವಸೆ ಸುಳ್ಳಾಗಿದೆ.
ಸಮಾಜದ ಬಹುಕಾಲದ ಬೇಡಿಕೆಯನ್ನು ಈಡೇರಿಸುವ ಸಲುವಾಗಿ ಸಚಿವರಾದ ಸುನಿಲ್ ಕುಮಾರ್ ನೇತೃತ್ವದಲ್ಲಿ ಬಿಲ್ಲವ ಸಮುದಾಯದ ಮುಖಂಡರ ನಿಯೋಗ ಸಿಎಂ ಬಸವರಾಜ್ ಬೊಮ್ಮಾಯಿಗೆ ಜ.5ರಂದು ಮನವಿ ಸಲ್ಲಿಸಿದ್ದ ಸಂದರ್ಭ ನಿಗಮ ಸ್ಥಾಪನೆಗೆ ಸ್ಪಷ್ಟ ಭರವಸೆಯ ಒಪ್ಪಿಗೆ ನೀಡಿ ಸೂಕ್ತ ಅನುದಾನದೊಂದಿಗೆ ಈ ಸಾಲಿನ ಬಜೆಟ್‌ನಲ್ಲಿ ಘೋಷಣೆ ಮಾಡುವುದಾಗಿ ತಿಳಿಸಿದ್ದರು. ಆದರೂ ಈ ಬಾರಿಯ ಬಜೆಟ್‌ನಲ್ಲಿ ಯಾವುದೆ ಕ್ರಮ ಕೈಗೊಳ್ಳದೆ ಮತ್ತೆ ಬಿಲ್ಲವ, ಈಡಿಗರಿಗೆ ಅನ್ಯಾಯವೆಸಗಿದ್ದಾರೆ.
ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿರುವ ಈ ಸಮಾಜದ ಅಭಿವೃದ್ಧಿ ಹಾಗೂ ನಾರಾಯಣ ಗುರು ತತ್ವ ಆದರ್ಶಗಳ ಪ್ರಚಾರ ದೃಷ್ಟಿಯಿಂದ ನಿಗಮ ಸ್ಥಾಪನೆ ಅಗತ್ಯವಾಗಿದ್ದರೂ ಹಿಂದುಳಿದ ಸಮಾಜದ ನಮಗೆ ಅನ್ಯಾಯವಾಗಿದೆ. ಸಮಾಜದ ಮುಖಂಡರ ಸಭೆ ನಡೆಸಿ ನಿಯೋಗ ಕೊಂಡೊಯ್ದ ಮಾನ್ಯ ಸುನಿಲ್ ಕುಮಾರ್‌ರವರು ಹಾಗೂ ಆಶ್ವಾಸನೆಯನ್ನು ಸ್ವಾಗತಿಸಿ ಬೆಂಬಲಿಸಿದ ಜನಪ್ರತಿನಿಧಿಗಳೆಲ್ಲರೂ ಈ ಕುರಿತು ಸ್ಪಷ್ಟನೆ ನೀಡುವಂತೆ ಸಮಸ್ತ ಸಮಾಜಬಾಂಧವರ ಹಿತದಿಂದ ಆಗ್ರಹಿಸುತ್ತೇನೆ.
*ಪ್ರವೀಣ್ ಎಂ ಪೂಜಾರಿ*
ಅಧ್ಯಕ್ಷರು, ಬಿಲ್ಲವ ಯುವ ವೇದಿಕೆ (ರಿ) ಉಡುಪಿ
ಮೇಕೆದಾಟು ಯೋಜನೆಗೆ ಅನುಮತಿ ನೀಡಿ : ಪ್ರಧಾನಿ ಮೋದಿಗೆ ಸಿಎಂ ಡಿಕೆಶಿ ಮನವಿ ಬೆಂಗಳೂರು: ಮಹತ್ವಾಕಾಂಕ್ಷಿ ಮೇಕೆದಾಟು ಜಲಾಶಯ ಯೋಜನೆಗೆ…
ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಪ್ರಕಾಶ್ ರಾಜ್ ಹೆಸರು ತಳುಕು ; ಹೆಸರು ಪ್ರಸ್ತಾಪ ಆದ ಕೂಡಲೇ ಕ್ರಿಮಿನಲ್ ಅಲ್ಲ: ಪ್ರಿಯಾಂಕ್…
260 ಜನರ ಬಲಿ ಪಡೆದ ಅಹಮದಾಬಾದ್ ಏರ್ ಇಂಡಿಯಾ ದುರಂತಕ್ಕೆ 1 ವರ್ಷ ಅಹಮದಾಬಾದ್: 260 ಜನರ ಸಾವಿಗೆ ಕಾರಣವಾದ…
ಆರೋಗ್ಯವಾಗಿದ್ದೇನೆ, ಆತಂಕ ಬೇಡ: ದೊಡ್ಡಣ್ಣ ಪ್ರತಿಕ್ರಿಯೆ ಬೆಂಗಳೂರು: ಹಿರಿಯ ಚಿತ್ರನಟ ದೊಡ್ಡಣ್ಣ ನಿಧನರಾಗಿದ್ದಾರೆ ಎಂಬ ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣದಲ್ಲಿ…
ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್.. ಅರ್ಜಿ ಸಲ್ಲಿಕೆ ಆರಂಭ, ಇಲ್ಲಿದೆ ಸಂಪೂರ್ಣ ಮಾಹಿತಿ ಬೆಂಗಳೂರು: ರಾಜ್ಯದಲ್ಲಿ ಇದೇ…
ಇಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ತಮಿಳುನಾಡು ಸಿಎಂ ವಿಜಯ್ ; ದೇಗುಲ ಅರ್ಚಕರ ಮಹತ್ವದ ಮಾಹಿತಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ…