ಬಿಲ್ಲವ ಮುಸ್ಲಿಂ ಸ್ನೇಹ ಸಮ್ಮಿಲನ ಕಾರ್ಯಕ್ರಮ ರಾಷ್ಟ್ರ ಭಕ್ತ ಬಿಲ್ಲವ ಸಮಾಜಕ್ಕೆ ಮಾಡಿದ ಅವಮಾನ : ಯಶ್‍ಪಾಲ್ ಸುವರ್ಣ ಆಕ್ರೋಶ -Vishwanews24

ಉಡುಪಿ: ಹಿಂದೂ ಧರ್ಮದಲ್ಲಿ ಜಾತಿಯಾಧಾರಿತ ಒಡಕು ಸೃಷ್ಟಿಸುವ ಹುನ್ನಾರದೊಂದಿಗೆ ರಾಜಕೀಯ ಉದ್ದೇಶದಿಂದ ಆಯೋಜಿಸಿರುವ ಬಿಲ್ಲವ ಮುಸ್ಲಿಂ ಸ್ನೇಹ ಸಮ್ಮಿಲನ ಕಾರ್ಯಕ್ರಮ ರಾಷ್ಟ್ರ ಭಕ್ತ ಬಿಲ್ಲವ ಸಮಾಜಕ್ಕೆ ಮಾಡಿದ ಅವಮಾನ ಎಂದು ಯಶ್‍ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಷ್ಟ್ರೀಯ ಚಿಂತನೆಗಳೊಂದಿಗೆ ಸನಾತನ ಹಿಂದೂ ಧರ್ಮದ ಕಟ್ಟಾಳುಗಳಾಗಿ ಕೋಟಿ ಚೆನ್ನಯ್ಯ ಮತ್ತು ಶ್ರೀ ನಾರಾಯಣ ಗುರುಗಳ ತತ್ವ ಆದರ್ಶಗಳನ್ನು ಮೈಗೂಡಿಸಿಕೊಂಡು ಬಂದಿರುವ ಬಿಲ್ಲವ ಸಮಾಜವನ್ನು ಪ್ರತ್ಯೇಕಿಸಿ ಹಿಂದೂ ಧರ್ಮವನ್ನು ಒಡೆಯುವ ಷಡ್ಯಂತ್ರವನ್ನು ಈಗಾಗಲೇ ಸ್ವಾಭಿಮಾನಿ ಬಿಲ್ಲವ ಸಮಾಜ ಮುಖಂಡರು ವಿರೋಧಿಸುತ್ತಿದ್ದಾರೆ. ಇವರ ಧ್ವನಿಯಾಗಿ ಸಮಸ್ತ ಹಿಂದೂ ಸಮಾಜ ಈ ಕಾರ್ಯಕ್ರಮವನ್ನು ವಿರೋಧಿಸಿ ಸ್ವಾಭಿಮಾನಿ ಬಿಲ್ಲವ ಸಮಾಜಕ್ಕೆ ನೈತಿಕ ಬೆಂಬಲ ನೀಡಬೇಕಾಗಿದೆ.

ಹಿಂದೂ ಧರ್ಮದ ರಕ್ಷಣೆಗಾಗಿ ತ್ಯಾಗವನ್ನು ಮಾಡಿ, ಎಲ್ಲರೊಂದಿಗೂ ಸೌಹಾರ್ದಯುತವಾಗಿ ಜೀವನ ನಡೆಸುತ್ತಾ ಸಮಾಜದ ಇತರ ಜಾತಿಗಳಿಗೆ ಮಾದರಿಯಾಗಿರುವ ಬಿಲ್ಲವ ಸಮಾಜವನ್ನು ತಮ್ಮ ರಾಜಕೀಯ ಬೇಳೆ ಬೇಯಿಸಲು ಸಮಾಜದ ಮುಖಂಡರೇ ದಾರಿತಪ್ಪಿಸಲು ಮುಂದಾಗಿರುವುದು ದುರದೃಷ್ಟಕರ.

ಇದೇ ರೀತಿ ಮುಂಬರುವ ದಿನಗಳಲ್ಲಿ ಮೊಗವೀರ, ಬಂಟ ಮೊದಲಾದ ಜಾತಿಗಳೊಂದಿಗೆ ಮುಸ್ಲಿಂ ಸ್ನೇಹ ಸಮ್ಮಿಲನ ಕಾರ್ಯಕ್ರಮಗಳನ್ನು ಆಯೋಜಿಸುವ ಬಗ್ಗೆ ತೆರೆಮರೆಯಲ್ಲಿ ಪ್ರಯತ್ನ ನಡೆಸುತ್ತಿರುವ ಬಗ್ಗೆಯೂ ಮಾಹಿತಿ ಇದ್ದು, ಈ ಸ್ನೇಹ ಸಮ್ಮಿಲನದ ಹೆಸರಲ್ಲಿ ಸಮಾಜದ ಸ್ವಾಸ್ಥ್ಯ ಕೆಡಿಸುವ ಈ ನಿರ್ಧಾರವನ್ನು ಕೂಡಲೇ ಕೈ ಬಿಟ್ಟು, ಸಮಸ್ತ ಹಿಂದೂ ಸಮಾಜ ಬಿಲ್ಲವ ಸಮಾಜದ ಜೊತೆ ನಿಂತು ಈ ಧರ್ಮ ವಿರೋಧಿಗಳ ಮುಖವಾಡವನ್ನು ಬಯಲಿಗೆಳೆಯುವಲ್ಲಿ ಕೈ ಜೋಡಿಸುವಂತೆ   ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago