ಮೂಡುಬಿದಿರೆ,: ”ನಾನು ಭಾರತೀಯ ಜನತಾ ಪಾರ್ಟಿಯಲ್ಲಿ ಇದ್ದರೂ ಮಾಜಿ ಕೇಂದ್ರ ಸಚಿವ ಬಿ.ಜನಾರ್ದನ ಪೂಜಾರಿಯವರ ದೊಡ್ಡ ಅಭಿಮಾನಿಯಾಗಿದ್ದು, ಬಿಲ್ಲವ ಸಮಾಜಕ್ಕೆ ಯಾವುದೇ ರೀತಿಯ ಅಗೌರವ ತೋರಿಲ್ಲ. ಆದರೂ ಬಿಲ್ಲವ ಸಮಾಜ ಬಾಂಧವರಿಗೆ ನನ್ನಿಂದಾಗಿ ಮನಸ್ಸಿಗೆ ನೋವಾಗಿದ್ದರೆ ಕ್ಷಮೆ ಯಾಚಿಸುತ್ತೇನೆ” ಎಂದು ಬಿಜೆಪಿ ಮುಖಂಡ ಕೆ.ಪಿ.ಜಗದೀಶ್ ಅಧಿಕಾರಿ ಹೇಳಿದ್ದಾರೆ.
ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸಾಲದ ಪತ್ರಗಳ ವಿತರಣೆ -Vishwanews24
ಮೂಡುಬಿದಿರೆ ಪ್ರೆಸ್ ಕ್ಲಬ್ ನಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ”ಧರ್ಮ ಆಡಳಿತ ಸಭೆಯಲ್ಲಿ ಯಾವುದೇ ನಿರ್ದಿಷ್ಟ ಧರ್ಮದವರನ್ನು ಕೀಳರಿಮೆಯಿಂದ ಕಾಣುವುದಿಲ್ಲ. ಧರ್ಮ ಜಾತಿ ಪಂಗಡ ಭಾಷೆ ಸಂಸ್ಕೃತಿಯ ವಿಚಾರದಲ್ಲಿ ಭೇದಭಾವ ಮಾಡಿದವನಲ್ಲ. ಗೌರವ ನೀಡುವ ಪರಂಪರೆ ಹೇಗೆ ಮುಂದುವರೆಯುತ್ತದೆ ಎಂಬ ವಿಚಾರವನ್ನು ಧರ್ಮಸಭೆಯಲ್ಲಿ ಹೇಳಿಕೆ ನೀಡಿದ್ದೇನೆ. ನಾನು ಬಿಜೆಪಿಯಲ್ಲಿದ್ದರೂ ಜನಾರ್ದನ ಪೂಜಾರಿಯವರ ದೊಡ್ಡ ಅಭಿಮಾನಿಯಾಗಿದ್ದು, ಬಿಲ್ಲವ ಸಮಾಜದ ಬಾಂಧವರಿಗೆ ಹಲವಾರು ರೀತಿಯ ಸಹಕಾರ ನೀಡುತ್ತ ಬಂದಿದೆ ಎಂದು ತಿಳಿಸಿದರು.
ಬೆಳಪು ಕಾನ ಶ್ರೀ ಬ್ರಹ್ಮಲಿಂಗೇಶ್ವರ ಖಡ್ಗೇಶ್ವರಿ ದೇವಸ್ಥಾನ : ಉಚಿತ ಕೋವಿಡ್ ಟೆಸ್ಟ್ -Vishwanews24
‘ಈ ವಿಷಯದಿಂದ ನನ್ನ ಮನಸ್ಸಿಗೆ ಅಗಾದ ನೋವುಂಟು ಮಾಡಿದ್ದು, ಯಾರಿಗೂ ಬೇಸರವಾಗಿ ನನಗೆ ಜೀವನ ರಾಜಕೀಯ ಜೀವನ ಬೇಡ ಎಂದಿರುವ ಜಗದೀಶ್ ಅಧಿಕಾರಿ, ನಾನು ಸಲ್ಲೇಖನ ವ್ರತವನ್ನು ತೆಗೆದುಕೊಳ್ಳಲು ಯೋಚನೆ ಮಾಡುತ್ತಿದ್ದೇನೆ. ದೇಹ ತ್ಯಾಗ ಮಾಡಲು ಸಿದ್ಧನಾಗಿರುವ ನಾನು ಮಾಡಿದ ತಪ್ಪಿಗೆ ಕ್ಷಮೆ ಎನ್ನುವುದು ಇಲ್ಲವೇ? ಬಿಲ್ಲವ ಸಮಾಜ ಎಂಬುವುದು ನನ್ನ ಹೃದಯ ಭಾಗ ಅವರೊಂದಿಗೆ ಬೆಳೆದವ ಎಂದು ಹೇಳಿದ್ದಾರೆ.
ಜಗದೀಶ್ ಅಧಿಕಾರಿ ತುಳುನಾಡಿನ ವೀರ ಪುರುಷರಾದ ಕೋಟಿ-ಚೆನ್ನಯರ ಇತಿಹಾಸವನ್ನು ತಿರುಚಿ ಮಾತನಾಡಿದ್ದಾರೆ ಹಾಗೂ ಮಾಜಿ ಸಚಿವ ಜನಾರ್ದನ ಪೂಜಾರಿಯವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ಬಿಲ್ಲವ ಸಮಾಜದವರ ಮನಸ್ಸಿಗೆ ಘಾಸಿ ಉಂಟು ಮಾಡಿದ್ದಾರೆ ಎಂಬ ಅವರ ಹೇಳಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದರ ವಿರುದ್ಧ ಬಿಲ್ಲವ ಸಮಾಜದಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಮೂಡುಬಿದಿರೆ ಬಿಲ್ಲವ ಸಂಘವು ಜಗದೀಶ್ ಅಧಿಕಾರಿ ವಿರುದ್ಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿತ್ತು.
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…