Featured

ಬಿಲ್ಲವ ಸಮುದಾಯವನ್ನು ದಾರಿ ತಪ್ಪಿಸುವ ಕೆಲಸ  : ಅಕ್ಷಿತ್ ಸುವರ್ಣ – Vishwanews24

ಬಿಲ್ಲವ ಸಮುದಾಯವನ್ನು ದಾರಿ ತಪ್ಪಿಸುವ ಕೆಲಸ  : ಅಕ್ಷಿತ್ ಸುವರ್ಣ

ಮಂಗಳೂರು: ರಾಜ್ಯ ಬಜೆಟ್ ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆ ಮಾಡುವುದಾಗಿ ಹೇಳಿ ಬಿಲ್ಲವ ಸಮುದಾಯವನ್ನು ದಾರಿ ತಪ್ಪಿಸುವ ಕೆಲಸವನ್ನು ಮುಖ್ಯಮಂತ್ರಿ ಸಹಿತ ರಾಜ್ಯದ ಬಿಲ್ಲವ ಸಚಿವರು ಮಾಡಿದ್ದಾರೆ ಎಂದು ದಕ ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಅಕ್ಷಿತ್ ಸುವರ್ಣ ಹೇಳಿದ್ದಾರೆ.

ಇತ್ತೀಚೆಗೆ ಬಿಲ್ಲವ ಸಮುದಾಯದ ಮುಖಂಡರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದ ವೇಳೆ ಮುಂದಿನ ಬಜೆಟ್ ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆ ಬಗ್ಗೆ ಘೋಷಣೆ ಮಾಡುವುದಾಗಿ ಹೇಳಿದ್ದರು ಇದಕ್ಕೆ ಜಿಲ್ಲೆಯ ಬಿಲ್ಲವ ಶಾಸಕರು, ಸಚಿವರೂ ಕೂಡ ಸಾಕ್ಷಿಯಾಗಿದ್ದರು ಆದರೆ ನಿನ್ನೆ ಮಂಡಿಸಿದ ಬಜೆಟ್ ನಲ್ಲಿ ಇದರ ಬಗ್ಗೆ ಚಕಾರವೆತ್ತದಿರುವುದು ಸಮುದಾಯಕ್ಕೆ ಬಿಜೆಪಿ ಸರಕಾರ ಮಾಡಿದ ದ್ರೋಹವಾಗಿದೆ. ರಾಜ್ಯ ಸರ್ಕಾರ ಮಾಡಿದ ಈ ಮೋಸಕ್ಕೆ ಮುಂದಿನ ದಿನಗಳಲ್ಲಿ ಬಿಲ್ಲವ ಸಮುದಾಯ ತಕ್ಕ ಉತ್ತರ ನೀಡುತ್ತದೆ.

ಮುಖ್ಯಮಂತ್ರಿಯವರು ಮಂಡಿಸಿದ ಬಜೆಟ್ ನಲ್ಲಿ ಬಿಲ್ಲವ ಸಮುದಾಯ ಮಾತ್ರವಲ್ಲದೆ ಇತರ ಸಮುದಾಯಗಳಾದ ಮೊಗವೀರ ಹಾಗೂ ಹಿಂದುಳಿದ ಸಮುದಾಯಗಳಾಗಲಿ ಯಾರ ಅಭಿವೃದ್ಧಿಗೆ ಬೇಕಾಗುವ ಯಾವುದೇ ಯೋಜನೆಗಳನ್ನು ರೂಪಿಸುವಲ್ಲಿ ವಿಫಲರಾಗಿದ್ದಾರೆ. ಉದ್ಯೋಗದ ಅವಕಾಶಗಳು ಕಡಿಮೆಯಾಗುತ್ತಿರುವ ಸಂದರ್ಭದಲ್ಲಿ ಉದ್ಯೋಗ ಖಾತರಿ ಯೋಜನೆಯನ್ನು ವಿಸ್ತರಿಸದೆ ಇರುವುದು ಖಂಡನೀಯ. ರೈತ ಸಮುದಾಯ, ಕಾರ್ಮಿಕ ವರ್ಗವನ್ನು ಬಜೆಟ್ ನಲ್ಲಿ ಸಂಪೂರ್ಣ ನಿರ್ಲಕ್ಷ್ಯ ಮಾಡಲಾಗಿದ್ದು ಚುನಾವಣೆಯನ್ನು ಮುಂದಿಟ್ಟುಕೊಂಡು ಕೇವಲ ಭರವಸೆಗಳಿಗಷ್ಟೇ ಬಜೆಟ್ ಘೋಷಣೆಯನ್ನು ಸೀಮಿತಗೊಳಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

1 day ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago