ಬೆಂಗಳೂರು: ಬಿಹಾರದಲ್ಲಿ NDA ಅಧಿಕಾರಕ್ಕೆ ಬಂದರೆ ಅದು ನಮ್ಮ ದೇಶದ, ಬಿಹಾರ ಜನರ ದುರಾದೃಷ್ಟ ಅಂತ ಸಚಿವ ರಾಮಲಿಂಗಾ ರೆಡ್ಡಿ ಬೇಸರ ಹೊರಹಾಕಿದರು.
ಬಿಹಾರ ಚುನಾವಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಎಲ್ಲಾ ಸಮೀಕ್ಷೆಯಲ್ಲಿ NDA ಮುನ್ನಡೆ ಕೊಡಲಾಗಿದೆ. ಒಂದು ವೇಳೆ ಬಿಹಾರದಲ್ಲಿ NDA ಬಂದ್ರೆ ಅದು ನಮ್ಮ ದೇಶದ, ಬಿಹಾರ ಜನರ ದುರಾದೃಷ್ಟ. ಬಿಹಾರದಲ್ಲಿ 20 ವರ್ಷಗಳಿಂದ NDA ಅವರು ಆಡಳಿತ ಮಾಡ್ತಿದ್ದಾರೆ. ಆದರೂ ಬಿಹಾರ ಅಭಿವೃದ್ಧಿ ಆಗಿಲ್ಲ. ಬಿಜೆಪಿ ಬಂದ ಮೇಲೆ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಜಾಸ್ತಿ ಆಗ್ತಿದೆ. ಕೇಂದ್ರ ಸರ್ಕಾರ ಯಾಕೆ ಗಮನ ಕೊಡ್ತಿಲ್ಲ ಅಂತ ಕಿಡಿಕಾರಿದರು.
ಬಿಹಾರದ ಜನರು ಬೆಂಗಳೂರಿಗೆ ಬಂದು ಕೆಲಸ ಮಾಡ್ತಿದ್ದಾರೆ. ಅಲ್ಲಿ ಕೆಲಸ ಸಿಗದೇ ಇರೋದಕ್ಕೆ ಬರ್ತಿದ್ದಾರೆ. ಇದು ಅಭಿವೃದ್ಧಿ ಅಗ್ತಿಲ್ಲ ಅನ್ನೋದಕ್ಕೆ ಉದಾಹರಣೆ. ಬಿಹಾರ ರಾಜ್ಯ ಅಭಿವೃದ್ಧಿ ಆಗಿಲ್ಲ. ನಿರುದ್ಯೋಗ ಜಾಸ್ತಿ ಆಗಿದೆ. ಒಂದು ವೇಳೆ NDA ಅಧಿಕಾರಕ್ಕೆ ಬಂದ್ರೆ ಅದು ಬಿಹಾರ ಜನರ ದುರಾದೃಷ್ಟ ಅಂತ ಲೇವಡಿ ಮಾಡಿದರು.
ಇನ್ನೂ ಕಾಂಗ್ರೆಸ್ ಸರ್ವನಾಶ ಆಗುತ್ತೆ ಎಂಬ ಮಾಜಿ ಸಚಿವ ರಾಜಣ್ಣ ಹೇಳಿಕೆಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ನೇತೃತ್ವದಲ್ಲಿ 2028ರಲ್ಲೂ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರುತ್ತದೆ ಎಂದು ನುಡಿದರು.
ನಾವು ಅಭಿವೃದ್ದಿ ಕೆಲಸ ಮಾಡಿದ್ದೇವೆ, ಅದು ನಮಗೆ ಶ್ರೀರಕ್ಷೆ. ಬಿಜೆಪಿ-ಜೆಡಿಎಸ್ ವಿಪಕ್ಷದಲ್ಲಿ ನಾಯಕತ್ವ ಕೊರತೆ ಇದೆ. ಬಿಜೆಪಿ ಸೊರಗಿ ಹೋಗ್ತಿದೆ. ಬಿಜೆಪಿಗೆ ಈಗ ಇರೋ ಸ್ಥಾನವೂ ಮುಂದಿನ ಚುನಾವಣೆಯಲ್ಲಿ ಬರೊಲ್ಲ. ನಮ್ಮ ಪಕ್ಷ 136 ಸ್ಥಾನಕ್ಕಿಂತ ಜಾಸ್ತಿ ಸ್ಥಾನ ಬರ್ತೀವಿ ಎಂದರು. ಇದೇ ವೇಳೆ 2028ಕ್ಕೆ ರಾಮಲಿಂಗಾರೆಡ್ಡಿ ಸಿಎಂ ಸ್ಥಾನದ ಆಕಾಂಕ್ಷಿ ಆಗ್ತಾರಾ ಎಂಬ ಪ್ರಶ್ನೆಗೆ ಉತ್ತರಿಸಿ, ನಾನು ನಾನು ಯಾವತ್ತೂ ಸಿಎಂ ಆಗೊಲ್ಲ ಎಂದರು.
ನವೆಂಬರ್ ಕ್ರಾಂತಿ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಯಾವ ಕ್ರಾಂತಿಯೂ ಇಲ್ಲ ಏನೂ ಇಲ್ಲ. ಬಿಜೆಪಿ ಅವರು ಸುಳ್ಳು ಮಾಹಿತಿ ಕೊಡ್ತಾರೆ. ನೀವು ತೋರಿಸ್ತೀರಾ ಅದಕ್ಕೆ ಬಿಜೆಪಿ ಅವರು ಮಾತಾಡ್ತಾರೆ. ಯಾವ ಕ್ರಾಂತಿಯೂ ಇಲ್ಲ ಅಂತ ಕುಟುಕಿದರು
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…