ಪಾಟ್ನಾ: ಸೀಟು ಹಂಚಿಕೆ ಕುರಿತು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದಲ್ಲಿ ನಡೆಯುತ್ತಿರುವ ಉದ್ವಿಗ್ನತೆಯ ನಡುವೆಯೇ, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜೆಡಿಯು ಪಕ್ಷ ಇಂದು ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಮೊದಲ ಪಟ್ಟಿಯಲ್ಲಿ ಸಚಿವರಾದ ಶ್ರವಣ್ ಕುಮಾರ್, ವಿಜಯ್ ಕುಮಾರ್ ಚೌಧರಿ ಮತ್ತು ಮಹೇಶ್ವರ್ ಹಜಾರಿ ಸೇರಿದಂತೆ 57 ಅಭ್ಯರ್ಥಿಗಳ ಹೆಸರುಗಳು ಸೇರಿವೆ. ಜೆಡಿಯು ಟಿಕೆಟ್‌ನಲ್ಲಿ ಈಗಾಗಲೇ ನಾಮಪತ್ರ ಸಲ್ಲಿಸಿರುವ ಅನಂತ್ ಸಿಂಗ್ ಕೂಡ ಸೇರಿದ್ದಾರೆ.
ಜೆಡಿಯುನ ಮೊದಲ ಪಟ್ಟಿಯನ್ನು ಇಂದು ಬಿಡುಗಡೆ ಮಾಡಲಾಗಿದೆ ಎಂದು ಜನತಾದಳ ಯುನೈಟೆಡ್‌ನ ಕಾರ್ಯಕಾರಿ ಅಧ್ಯಕ್ಷ ಮತ್ತು ರಾಜ್ಯಸಭಾ ಸಂಸದ ಸಂಜಯ್ ಕುಮಾರ್ ಝಾ ಹೇಳಿದ್ದಾರೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಚುನಾವಣಾ ಪ್ರಚಾರವು ಅ.16ರಂದು ಪ್ರಾರಂಭವಾಗಲಿದೆ. ಎರಡನೇ ಪಟ್ಟಿಯೂ ಒಂದು ಅಥವಾ ಎರಡು ದಿನಗಳಲ್ಲಿ ಬಿಡುಗಡೆಯಾಗಲಿದೆ ಎಂದು ಸಂಜಯ್ ಕುಮಾರ್ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…