ಬೆಂಗಳೂರು: ಬಿಹಾರ ಫಲಿತಾಂಶ ಕರ್ನಾಟಕದಲ್ಲಿ ಬಿಜೆಪಿಗೆ ಉತ್ಸಾಹ ಮೂಡಿಸಿದೆ. ನಾವು ಮತ್ತಷ್ಟು ಸ್ಫೂರ್ತಿಯಿಂದ ಚುನಾವಣೆ ಗೆಲ್ಲುತ್ತೇವೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಬೆಂಗಳೂರು ಟನಲ್ ರೋಡ್ ವಿರೋಧಿಸಿ ಬಿಜೆಪಿ ನಾಯಕರ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಿಹಾರದಲ್ಲಿ ಎನ್‌ಡಿಎಗೆ ಅದ್ಭುತ ಗೆಲುವು ಸಿಕ್ಕಿದೆ. ಕಾಂಗ್ರೆಸ್ ಗೆ ಬಿಹಾರದ ಜನ ತಕ್ಕ ಉತ್ತರ ಕೊಟ್ಟಿದ್ದಾರೆ. ಅವರ ಸರ್ಕಾರ ಗೆದ್ದಾಗ ಗೆಲುವು ಅಂತಾರೆ, ಸೋತರೆ ವೋಟ್ ಚೋರಿ ಅಂತಾರೆ. ತೆಲಂಗಾಣದಲ್ಲಿ ನಿಮ್ಮ ಪಕ್ಷ ಹೇಗೆ ಗೆಲ್ತು? ಸಿದ್ದರಾಮಯ್ಯ ಅವರೇ 135 ಸೀಟ್‌ಗಳನ್ನ ಹೇಗೆ ಪಡೆದ್ರಿ? ವೋಟ್ ಚೋರಿ ಅಂದ್ರೆ ನಿಮ್ಮ ಪಕ್ಷ ಮಾಡೋದು ಏನು? ರಾಹುಲ್ ಗಾಂಧಿ & ಟೀಂ ಹಿಟ್ ಅಂಡ್ ರನ್ ಟೀಂ. ಬರೀ ಹಿಟ್ & ರನ್ ಮಾಡೋದಷ್ಟೇ ಅವರ ಕೆಲಸ ಎಂದು ಹರಿಹಾಯ್ದರು.
ಇನ್ನು ಬೆಂಗಳೂರು ಟನಲ್ ರಸ್ತೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಬೆಂಗಳೂರು ಟನಲ್ ರಸ್ತೆ ಯೋಜನೆಗೆ ಆತುರ ಬೇಡ. ಸರಿಯಾದ ಡಿಪಿಆರ್ ಮಾಡಿ. ಪರಿಸರ ಪರಿಣಾಮ ವರದಿ ಆಗಿಲ್ಲ. ತರಾತುರಿಯಲ್ಲಿ ಯೋಜನೆ ಬೇಡ. ಹೊಸ ಡಿಪಿಆರ್ ಮಾಡಿ, ಪರಿಸರ ಉಳಿಸಿ. ಅಭಿವೃದ್ಧಿಗೆ ನಾವು ವಿರೋಧ ಇಲ್ಲ, ಆದರೆ ಪಾರ್ಕ್, ಸಾರ್ವಜನಿಕ ಸ್ಥಳಗಳನ್ನು ಉಳಿಸಿ ಎಂದರು.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…