Featured

ಬಿಹಾರ ಫಲಿತಾಂಶ ರಾಜ್ಯ ಸರ್ಕಾರದ ಪತನಕ್ಕೆ ಮುನ್ನುಡಿ ಬರೆಯಲಿದೆ : ಯಶ್ ಪಾಲ್ ಸುವರ್ಣ – vishwanews24

ಕಾಂಗ್ರೆಸ್ ವೋಟ್ ಚೋರಿ ಆರೋಪಕ್ಕೆ ತಕ್ಕ ಉತ್ತರ ನೀಡಿದ ಬಿಹಾರ ಜನತೆಗೆ ಅಭಿನಂದನೆ : ಯಶ್ ಪಾಲ್ ಸುವರ್ಣ

ಕಾಂಗ್ರೆಸ್ ಪಕ್ಷ ದೇಶದಾದ್ಯಂತ ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ ದೇಶದ ಜನತೆಗೆ ಸುಳ್ಳು ಮಾಹಿತಿ ನೀಡಿ ಮಾಡಿದ ವೋಟ್ ಚೋರಿ ಆರೋಪಕ್ಕೆ ಬಿಹಾರ ಜನತೆ ಬಿಜೆಪಿ ಹಾಗೂ ಎನ್ ಡಿ ಎ ಅಭ್ಯರ್ಥಿಗಳನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸುವ ಮೂಲಕ ತಕ್ಕ ಉತ್ತರ ನೀಡಿ ಸುಳ್ಳು ಆರೋಪದ ವಿರುದ್ಧ ಸ್ಪಷ್ಟ ಸಂದೇಶ ರವಾನಿಸಿದ ಬಿಹಾರ ಜನತೆಗೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಅಭಿನಂದನೆ ಸಲ್ಲಿಸಿದ್ದಾರೆ.

ದೇಶದ ಚುನಾವಣಾ ಆಯೋಗ ಹಾಗೂ ಚುನಾವಣೆ ವ್ಯವಸ್ಥೆಯ ಮೇಲೆಯೇ ಧಕ್ಕೆ ತರುವ ಪ್ರಯತ್ನ ಮಾಡುವ ಮೂಲಕ ವಿಶ್ವಕ್ಕೆ ಮಾದರಿಯಾಗಿರುವ ಪ್ರಜಾಪ್ರಭುತ್ವ ದೇಶದ ಮತದಾನ ಪ್ರಕ್ರಿಯೆಯನ್ನು ಅನುಮಾನಿಸುವ ರೀತಿಯಲ್ಲಿ ಬಿಂಬಿಸಿದ ಕಾಂಗ್ರೆಸ್ ಪಕ್ಷಕ್ಕೆ ಬಿಹಾರದಲ್ಲಿನ ಹೀನಾಯ ಸೋಲು ತಕ್ಕ ಉತ್ತರ ನೀಡಿದೆ.

ಉಡುಪಿ ಜಿಲ್ಲೆಯಲ್ಲಿಯೂ ವೋಟ್ ಚೋರಿ ಅಭಿಯಾನ ನಡೆಸಿ ಉಡುಪಿ ಜನತೆಯನ್ನು ದಾರಿ ತಪ್ಪಿಸಲು ಹೊರಟ ಕಾಂಗ್ರೆಸ್ ಪಕ್ಷದ ಅಪ್ರಬುದ್ಧ ನಾಯಕರಿಗೆ ಮಸಿ ಬಳಿದಂತಾಗಿದ್ದು, ಬಿಹಾರ ಫಲಿತಾಂಶ ರಾಜ್ಯ ಸರ್ಕಾರದ ಪತನಕ್ಕೆ ಮುನ್ನುಡಿ ಬರೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

9 hours ago

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO – vishwanews24

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…

9 hours ago

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ – vishwanews24

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ  ಬೆಂಗಳೂರು: ಕರ್ನಾಟಕ ಸರ್ಕಾರದ…

10 hours ago

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ – vishwanews24

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…

10 hours ago

ಮಂಗಳೂರು:ಕೋರಿಯರ್ ಮೂಲಕ ಎಂಡಿಎಂಎ ಸಾಗಾಟದ ಜಾಲ ಪತ್ತೆ: ₹1.58 ಕೋಟಿ ಮೌಲ್ಯದ ಮಾದಕವಸ್ತು ವಶ – vishwanews24

ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…

10 hours ago

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ – vishwanews24

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…

10 hours ago